ಟೀಮ್ ಇಂಡಿಯಾ ಸೋತರೆ ರೋಹಿತ್ ಶರ್ಮಾ ಸಮುದ್ರಕ್ಕೆ ಹಾರುತ್ತಾರೆ ಅಷ್ಟೇ: ಸೌರವ್ ಗಂಗೂಲಿ

India vs South Africa Final: ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಈವರೆಗೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 14 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಸೌತ್ ಆಫ್ರಿಕಾ ತಂಡ 11 ಬಾರಿ ಗೆಲುವು ಸಾಧಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು. ಇದೀಗ ಇದೇ ಮೊದಲ ಬಾರಿಗೆ ಉಭಯ ತಂಡಗಳು ಟಿ20 ವಿಶ್ವಕಪ್​ನ ಫೈನಲ್​ನಲ್ಲಿ ಮುಖಾಮುಖಿಯಾಗಲು ಸಜ್ಜಾಗಿ ನಿಂತಿದೆ.

ಟೀಮ್ ಇಂಡಿಯಾ ಸೋತರೆ ರೋಹಿತ್ ಶರ್ಮಾ ಸಮುದ್ರಕ್ಕೆ ಹಾರುತ್ತಾರೆ ಅಷ್ಟೇ: ಸೌರವ್ ಗಂಗೂಲಿ
Rohit Sharma - Sourav Ganguly
Follow us
ಝಾಹಿರ್ ಯೂಸುಫ್
|

Updated on: Jun 29, 2024 | 1:08 PM

T20 World Cup 2024: ಟಿ20 ವಿಶ್ವಕಪ್​ನ ಪ್ರತಿ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಇದೀಗ ಫೈನಲ್ ಪಂದ್ಯಕ್ಕೆ ಸಜ್ಜಾಗಿ ನಿಂತಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು (ಜೂ.29) ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ವಿಶ್ವಕಪ್ ಎತ್ತಿ ಹಿಡಿಯುವ ವಿಶ್ವಾಸದಲ್ಲಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ.

ಒಂದು ವೇಳೆ ಫೈನಲ್ ಪಂದ್ಯದಲ್ಲಿ ಸೋತರೆ? ಈ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ತಮಾಷೆಯ ಉತ್ತರ ನೀಡಿದ್ದಾರೆ. ಭಾರತ ತಂಡವು ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿರುವ ಗಂಗೂಲಿ, ಈ ಬಾರಿ ಸೋಲುವ ಮಾತೇ ಇಲ್ಲ ಎಂದಿದ್ದಾರೆ.

ಒಂದು ವೇಳೆ ಸೋತರೆ?… ನನ್ನ ಪ್ರಕಾರ ಕೇವಲ ಏಳು (ಆರು) ತಿಂಗಳುಗಳಲ್ಲಿ ರೋಹಿತ್ ಶರ್ಮಾ ಎರಡು ವಿಶ್ವಕಪ್ ಫೈನಲ್‌ಗಳನ್ನು ಕಳೆದುಕೊಳ್ಳಲಿದ್ದಾರೆ ಎಂದನಿಸುತ್ತಿಲ್ಲ. ಇದಾಗ್ಯೂ ಈ ಬಾರಿ ಭಾರತ ತಂಡ ಸೋತರೆ ಬಹುಶಃ ರೋಹಿತ್ ಶರ್ಮಾ ಬಾರ್ಬಡೋಸ್ ಸಮುದ್ರಕ್ಕೆ ಹಾರಬಹುದು ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಇನ್ನು ಮಾತು ಮುಂದುವರೆಸಿದ ಸೌರವ್ ಗಂಗೂಲಿ, ಟೀಮ್ ಇಂಡಿಯಾ ಸೋಲುವ ವಿಚಾರವೇ ಇಲ್ಲಿ ಬರಲ್ಲ. ಏಕೆಂದರೆ ಟೂರ್ನಿಯುದ್ದಕ್ಕೂ ಭಾರತೀಯರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಫೈನಲ್​ನಲ್ಲೂ ಅದ್ಭುತ ಪ್ರದರ್ಶನ ಮುಂದುವರೆಸುತ್ತಾರೆ. ನಾನು ಸಹ ಟೀಮ್ ಇಂಡಿಯಾ ಗೆಲ್ಲಲಿ ಎಂದು ಹಾರೈಸುತ್ತೇನೆ. ಅದರಲ್ಲೂ ರೋಹಿತ್ ಶರ್ಮಾ ವಿಶ್ವಕಪ್ ಎತ್ತಿ ಹಿಡಿಯಲಿ ಎಂದು ಬಯಸುತ್ತೇನೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ವಿಶ್ವಕಪ್ ಮರೀಚಿಕೆ:

ಭಾರತ ತಂಡವು ಕಳೆದ 11 ವರ್ಷಗಳಿಂದ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. 2013 ರಲ್ಲಿ ಕೊನೆಯ ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದ ಟೀಮ್ ಇಂಡಿಯಾ ಆ ಬಳಿಕ ಹಲವು ಫೈನಲ್ ಆಡಿದ್ದರೂ ವಿಶ್ವಕಪ್ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ.

ಅದರಲ್ಲೂ 2014 ರಲ್ಲಿ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಮುಗ್ಗರಿಸಿದ್ದ ಟೀಮ್ ಇಂಡಿಯಾ, 2023 ರಲ್ಲಿ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಫೈನಲ್​ಗೆ ಪ್ರವೇಶಿಸಿತ್ತು. ಆದರೆ ಅಂತಿಮ ಹಣಾಹಣಿಯಲ್ಲಿ ಸೋಲುವ ಮೂಲಕ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

ಇದನ್ನೂ ಓದಿ: Virat Kohli: 12 ವರ್ಷಗಳ ಕನಸು: ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಚಾನ್ಸ್​

ಇದೀಗ 10 ವರ್ಷಗಳ ಬಳಿಕ ಟೀಮ್ ಇಂಡಿಯಾ ಮತ್ತೊಮ್ಮೆ ಟಿ20 ವಿಶ್ವಕಪ್​ನ ಫೈನಲ್​ಗೆ ಪ್ರವೇಶಿಸಿದೆ. ಈ ಬಾರಿ ಭಾರತ ತಂಡವೇ ಚಾಂಪಿಯನ್ ಪಟ್ಟಕ್ಕೇರಲಿದೆ ಎಂದು ಸೌರವ್ ಗಂಗೂಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?