AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಮುಂದಿನ 2 ಟೂರ್ನಿಗಳಲ್ಲೂ ರೋಹಿತ್ ಶರ್ಮಾ ನಾಯಕ..!

Team India: ಭಾರತ ಟಿ20 ತಂಡಕ್ಕೆ ವಿದಾಯ ಹೇಳಿರುವ ರೋಹಿತ್ ಶರ್ಮಾ, ಮುಂದಿನ ಎರಡು ಐಸಿಸಿ ಟೂರ್ನಿಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿರುವುದು ಖಚಿತವಾಗಿದೆ. ಅಂದರೆ ಮುಂಬರುವ ದಿನಗಳಲ್ಲಿ ಭಾರತ ಟಿ20 ತಂಡದ ನಾಯಕತ್ವ ಮಾತ್ರ ಬದಲಾಗಲಿದೆ. ಏಕದಿನ ಮತ್ತು ಟೆಸ್ಟ್ ತಂಡಗಳಿಗೆ ನಾಯಕರಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ.

Rohit Sharma: ಮುಂದಿನ 2 ಟೂರ್ನಿಗಳಲ್ಲೂ ರೋಹಿತ್ ಶರ್ಮಾ ನಾಯಕ..!
Rohit Sharma
ಝಾಹಿರ್ ಯೂಸುಫ್
|

Updated on:Jul 07, 2024 | 1:48 PM

Share

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರೋಹಿತ್ ಶರ್ಮಾ (Rohit Sharma) ನಿವೃತ್ತಿ ಘೋಷಿಸಿದ್ದರು. ಇದರ ಬೆನ್ನಲ್ಲೇ ಏಕದಿನ ತಂಡದ ನಾಯಕರಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಗೆ ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರೇ ಉತ್ತರ ನೀಡಿದ್ದಾರೆ.

ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿರುವ ರೋಹಿತ್ ಶರ್ಮಾ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲೂ ಟೀಮ್ ಇಂಡಿಯಾದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲೂ ಭಾರತ ತಂಡ ರೋಹಿತ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ ಎಂದು ಜಯ್ ಶಾ ತಿಳಿಸಿದ್ದಾರೆ.

ಈ ಮೂಲಕ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವ ಮಾತ್ರ ಬದಲಾಗಲಿದೆ. ಏಕದಿನ ಮತ್ತು ಟೆಸ್ಟ್ ತಂಡಗಳನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ಜಯ್ ಶಾ ರವಾನಿಸಿದ್ದಾರೆ.

ಜಯ್ ಶಾ ವಿಡಿಯೋ:

ಅಲ್ಲದೆ ಮುಂದಿನ ವರ್ಷ ಭಾರತ ಇನ್ನೆರಡು ಐಸಿಸಿ ಟೂರ್ನಿಗಳನ್ನು ಗೆಲ್ಲಲಿದೆ ಎಂದು ಜಯ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಭಾರತ ಟಿ20 ತಂಡದ ಪ್ರದರ್ಶನವನ್ನು ಶ್ಲಾಘಿಸಿದ ಬಿಸಿಸಿಐ ಕಾರ್ಯದರ್ಶಿ, ನಾವು ಎರಡು ಬಾರಿ ಫೈನಲ್​ ಆಡಿದ್ದೆವು. 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡಿದರೂ ಪ್ರಶಸ್ತಿ ಗೆಲ್ಲಲಾಗಲಿಲ್ಲ.

ಹಾಗೆಯೇ ಕಳೆದ ವರ್ಷ ನವೆಂಬರ್ 23 ರಂದು ಏಕದಿನ ವಿಶ್ವಕಪ್​ನಲ್ಲಿ 10 ಪಂದ್ಯಗಳನ್ನು ಗೆದ್ದ ನಂತರ ನಾವು ಹೃದಯಗಳನ್ನು ಗೆದ್ದವು. ಆದರೆ ನಮಗೆ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಈ ಬಾರಿ, ಜೂನ್ 29 ರಂದು ನಾವು ಹೃದಯಗಳನ್ನು ಗೆಲ್ಲುವುದರ ಜೊತೆ ಕಪ್ ಅನ್ನು ಸಹ ಗೆದ್ದಿದ್ದೇವೆ. ಬಾರ್ಬಡೋಸ್‌ನಲ್ಲಿ ಭಾರತದ ಧ್ವಜವನ್ನು ಹಾರಿಸುತ್ತೇವೆ ಎಂದು ನಾನು ರಾಜ್‌ಕೋಟ್‌ನಲ್ಲಿ ಹೇಳಿದ್ದೇನೆ. ಅದರಂತೆ ನಮ್ಮ ಕ್ಯಾಪ್ಟನ್ ಭಾರತದ ಧ್ವಜ ಹಾರಿಸಿದರು ಎಂದು ಜಯ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Abhishek Sharma: ಧೋನಿಯ ಅನಗತ್ಯ ದಾಖಲೆ ಸರಿಗಟ್ಟಿದ ಅಭಿಷೇಕ್ ಶರ್ಮಾ

ಇದೇ ರೀತಿ ಐಸಿಸಿಯ ಮುಂಬರುವ ಟೂರ್ನಿಗಳಾದ WTC ಫೈನಲ್ ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲೂ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ನಮ್ಮ ತಂಡವು ಚಾಂಪಿಯನ್ ಆಗಲಿದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಜಯ್ ಶಾ ಹೇಳಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿಯುವುದನ್ನು ಜಯ್ ಶಾ ಖಚಿತಪಡಿಸಿದ್ದಾರೆ.

Published On - 1:47 pm, Sun, 7 July 24

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ