Point Table IPL 2021: ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನಕ್ಕೆ ಕುಸಿದ ಮುಂಬೈ: ಇತರೆ ತಂಡಗಳು ಯಾವ ಸ್ಥಾನದಲ್ಲಿದೆ?

Rohit Sharma MI vs KKR: ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಒಟ್ಟು 9 ಪಂದ್ಯಗಳನ್ನು ಆಡಿದ್ದು ನಿನ್ನೆ ಮುಂಬೈ ವಿರುದ್ಧ ಗೆಲ್ಲುವ ಮೂಲಕ ನಾಲ್ಕರಲ್ಲಿ ಜಯ ಸಾಧಿಸಿದೆ.

Point Table IPL 2021: ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನಕ್ಕೆ ಕುಸಿದ ಮುಂಬೈ: ಇತರೆ ತಂಡಗಳು ಯಾವ ಸ್ಥಾನದಲ್ಲಿದೆ?
Rohit Sharma MI vs KKR
TV9kannada Web Team

| Edited By: Vinay Bhat

Sep 24, 2021 | 8:27 AM

ಇಂಡಿಯನ್ ಪ್ರೀಮಿಯರ್ ಲೀಗ್ 2021 (IPL 2021) ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಶುಭವಾಗಿರುವಂತೆ ಕಾಣುತ್ತಿಲ್ಲ. ಲೀಗ್ ಆರಂಭದಲ್ಲೇ ತಡಬಡಾಯಿಸಿದ ರೋಹಿತ್ ಶರ್ಮಾ (Rohit Shar,a) ಪಡೆ ಇದೀಗ ಎರಡನೇ ಚರಣದಲ್ಲೂ ಮುಂದುವರೆಸಿದ್ದು, ಸತತ ಎರಡು ಸೋಲು ಕಂಡಿದೆ. ಇದರ ಪರಿಣಾಮ ಪಾಯಿಂಟ್ ಟೇಬಲ್​ನಲ್ಲಿ (IPL 2021 Point Table) ನಾಲ್ಕನೇ ಸ್ಥಾನದಲ್ಲಿ ಮುಂಬೈ ದಿಢೀರ್ ಆರನೇ ಸ್ಥಾನಕ್ಕೆ ಕುಸಿದಿದೆ. ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧದ ಪಂದ್ಯದಲ್ಲಿ ಮುಂಬೈ ಬ್ಯಾಟಿಂಗ್-ಬೌಲಿಂಗ್ ಎರಡೂ ವಿಭಾಗಗಳಲ್ಲಿ ವೈಫಲ್ಯ ಅನುಭವಿಸಿತು. ಎದುರಾಳಿಗೆ 155 ರನ್​ಗಳ ಟಾರ್ಗೆಟ್ ನೀಡಿತಷ್ಟೆ. ಇದನ್ನು ಕೆಕೆಆರ್ 15.1 ಓವರ್​ನಲ್ಲೇ ಜಯಿಸಿ 4ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಅಲ್ಲದೆ ಪ್ಲೇ ಆಫ್ ರೇಸ್​ಗೆ ಕಠಿಣ ಪೈಪೋಟಿ ನೀಡುತ್ತಿದೆ.

ಸದ್ಯ ಪಾಯಿಂಟ್ ಟೇಬಲ್ ಅನ್ನು ನೋಡಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಏಳರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 14 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.613 ನೆಟ್​ರೇಟ್​ನೊಂದಿಗೆ ಮೊದಲ ಸ್ಥಾನದಲ್ಲಿದೆ.

ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈವರೆಗೆ ಒಟ್ಟು 8 ಪಂದ್ಯಗಳನ್ನು ಆಡಿದ್ದು ಆರರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 12 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +1.223 ನೆಟ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಶುಕ್ರವಾರ ಆರ್​ಸಿಬಿ ವಿರುದ್ಧ ಚೆನ್ನೈ ಪಂದ್ಯವಿದ್ದು ಇಲ್ಲಿ ಗೆದ್ದರೆ ಮತ್ತೆ ಅಗ್ರಸ್ಥಾನಕ್ಕೇರಲಿದೆ.

ಐಪಿಎಲ್ ಎರಡನೇ ಚರಣವನ್ನು ಕೆಟ್ಟದಾಗಿ ಪ್ರಾರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ ಒಟ್ಟು 8 ಪಂದ್ಯಗಳನ್ನು ಆಡಿದ್ದು ಐದರಲ್ಲಿ ಗೆಲುವು ಕಂಡಿದೆ. ಮೂರು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 10 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.706 ನೆಟ್​ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಒಟ್ಟು 9 ಪಂದ್ಯಗಳನ್ನು ಆಡಿದ್ದು ನಿನ್ನೆ ಮುಂಬೈ ವಿರುದ್ಧ ಗೆಲ್ಲುವ ಮೂಲಕ ನಾಲ್ಕರಲ್ಲಿ ಜಯ ಸಾಧಿಸಿದೆ. ಐದು ಪಂದ್ಯಗಳಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.363 ನೆಟ್​ರೇಟ್​ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಈವರೆಗೆ ಒಟ್ಟು 8 ಪಂದ್ಯಗಳನ್ನು ಆಡಿದ್ದು ಮುಂಬೈ ರೀತಿಯಲ್ಲೇ ಇದೆ. ನಾಲ್ಕರಲ್ಲಿ ಗೆಲುವು ಕಂಡರೆ ನಾಲ್ಕನರಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.154 ನೆಟ್​ರೇಟ್​ನೊಂದಿಗೆ ಐದನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ ತಂಡ ಒಟ್ಟು 9 ಪಂದ್ಯಗಳನ್ನು ಆಡಿದ್ದು ಸೋಲನ್ನು ಹೆಚ್ಚು ಕಂಡಿದೆ. ಕೇವಲ ನಾಲ್ಕರಲ್ಲಿ ಗೆಲುವು ಸಾಧಿಸಿದ್ದು, 5 ಪಂದ್ಯಗಳಲ್ಲಿಸ ಓತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.310 ನೆಟ್​ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.

ಇನ್ನೂ ಕೆ. ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಪ್ಲೇ ಆಫ್ ಹಾದಿ ಕಠಿಣವಾಗಿದೆ. ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಕೇವಲ 3 ಪಂದ್ಯಗಳನ್ನಷ್ಟೆ ಗೆದ್ದಿದೆ. ಆರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 6 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.345 ನೆಟ್​ರೇಟ್​ನೊಂದಿಗೆ ಏಳನೇ ಸ್ಥಾನದಲ್ಲಿದೆ.

ಸನ್​ರೈಸರ್ಸ್ ಹೈದಬಾದ್ ತಂಡ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಆಡಿದ ಎಂಟು ಪಂದ್ಯಗಳಲ್ಲಿ ಕೇವಲ ಒಂದರಲ್ಲಷ್ಟೆ ಗೆದ್ದಿದೆ. ಏಳು ಪಂದ್ಯಗಳಲ್ಲಿ ಸೋಲುಂಡಿದೆ. ಪಾಯಿಂಟ್ ಪಟ್ಟಿಯಲ್ಲಿ -0.689 ನೆಟ್​ರೇಟ್​ನೊಂದಿಗೆ ಕೊನೇಯ ಎಂಟನೇ ಸ್ಥಾನದಲ್ಲಿದೆ.

IPL 2021, RCB vs CSK: ಇಂದು ಬೆಂಗಳೂರು-ಚೆನ್ನೈ ಕಾದಾಟ: ಪುಟಿದೇಳುವ ವಿಶ್ವಾಸದಲ್ಲಿ ಕೊಹ್ಲಿ ಬಳಗ

IPL 2021: ವಿಕೆಟ್ ಕೀಪಿಂಗ್​ನಲ್ಲಿ ಧೋನಿ ಹೆಸರಲ್ಲಿದ್ದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡ ದಿನೇಶ್ ಕಾರ್ತಿಕ್!

(Rohit Sharmas Mumbai Indians have slipped to the sixth spot IPL 2021 Point Table After MI vs KKR Match)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada