ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ

|

Updated on: Oct 19, 2024 | 10:31 AM

India vs New Zealand, 1st Test: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಪೈಪೋಟಿ ಮುಂದುವರೆದಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಕೇವಲ 46 ರನ್​ಗಳಿಗೆ ಆಲೌಟ್ ಆದರೆ, ನ್ಯೂಝಿಲೆಂಡ್ 402 ರನ್​ ಕಲೆಹಾಕಿತು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದುರಾದೃಷ್ಟಕರ ರೀತಿಯಲ್ಲಿ ಔಟ್ ಆಗಿದ್ದಾರೆ. ಅದು ಸಹ ಮೂರನೇ ದಿನದಾಟದ ಅಂತಿಮ ಓವರ್​ನ ಕೊನೆಯ ಎಸೆತದಲ್ಲಿ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆಗಿದ್ದರು.

ಅತ್ತ ಮೂರನೇ ದಿನದಾಟದ ಅಂತಿಮ ಎಸೆತದಲ್ಲಿ ವಿರಾಟ್ ಕೊಹ್ಲಿ ಔಟ್ ಆಗುತ್ತಿದ್ದಂತೆ ಇತ್ತ ಡ್ರೆಸ್ಸಿಂಗ್ ರೂಮ್ ಬಳಿ ಕೂತಿದ್ದ ರೋಹಿತ್ ಶರ್ಮಾ ಬೇಸರದಲ್ಲಿ ಹಿಂದಕ್ಕೆ ಕುಸಿದರು. ಅತ್ಯಮೂಲ್ಯವಾಗಿದ್ದ ವಿಕೆಟ್ ಪತನಗೊಂಡಾಗ ಟೀಮ್ ಇಂಡಿಯಾ ನಾಯಕ ನೀಡಿದ ಈ ಪ್ರತಿಕ್ರಿಯೆಯು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಭಾರೀ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿದೆ. ತಂಡದ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯುವ ದಾಂಡಿಗ ಸರ್ಫರಾಝ್ ಖಾನ್ 110 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಹಾಗೆಯೇ ಉತ್ತಮ ಸಾಥ್ ನೀಡುವ ಮೂಲಕ ರಿಷಭ್ ಪಂತ್ (23) ಕೂಡ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಅದರಂತೆ 64 ಓವರ್​ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 3 ವಿಕೆಟ್ ಕಳೆದುಕೊಂಡು 302 ರನ್​ ಕಲೆಹಾಕಿದೆ.