Viral Video: ರೋಹಿತ್ ಶರ್ಮಾ ಬಾರಿಸಿದ ಸಿಕ್ಸರ್​ನಿಂದ ಪುಟ್ಟ ಬಾಲಕಿಗೆ ಪೆಟ್ಟು

India vs England: ಟೀಮ್ ಇಂಡಿಯಾ ಬೌಲರ್​ಗಳ ಮುಂದೆ 26 ಓವರ್​ಗಳನ್ನು ದಾಟಲು ಆಂಗ್ಲ ಆಟಗಾರರಿಗೆ ಸಾಧ್ಯವಾಗಿಲ್ಲ. ಅಂತಿಮವಾಗಿ ಜಸ್​ಪ್ರೀತ್ ಬುಮ್ರಾ ದಾಳಿಗೆ ತತ್ತರಿಸಿದ ಇಂಗ್ಲೆಂಡ್​ 25.2 ಓವರ್​ಗಳಲ್ಲಿ ಕೇವಲ 110 ರನ್​ಗಳಿಗೆ ಸರ್ವಪತನ ಕಂಡಿತು.

Viral Video: ರೋಹಿತ್ ಶರ್ಮಾ ಬಾರಿಸಿದ ಸಿಕ್ಸರ್​ನಿಂದ ಪುಟ್ಟ ಬಾಲಕಿಗೆ ಪೆಟ್ಟು
Rohit Sharma's Six Hits Kid
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 13, 2022 | 10:22 AM

ದಿ ಓವಲ್‌ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಬೌಲಿಂಗ್ ಮೂಲಕ ಮಿಂಚಿದ್ರೆ, ರೋಹಿತ್ ಶರ್ಮಾ ಬ್ಯಾಟಿಂಗ ಮೂಲಕ ಗಮನ ಸೆಳೆದಿದ್ದರು. ಅದರಲ್ಲೂ ಹಿಟ್​ಮ್ಯಾನ್ ಭರ್ಜರಿ ಹೊಡೆತಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಹೀಗೆ ಹೊಡೆದ ಸಿಕ್ಸರ್​ವೊಂದು ಪುಟ್ಟ ಬಾಲಕಿಯ ಮೇಲೆ ಬಿದ್ದ ಘಟನೆ ಕೂಡ ನಡೆಯಿತು. ಟೀಮ್ ಇಂಡಿಯಾ ಇನಿಂಗ್ಸ್​ನ 5ನೇ ಓವರ್​ನಲ್ಲಿ ವೇಗಿ ಡೇವಿಡ್ ವಿಲ್ಲಿ ಬೌಲಿಂಗ್ ಮಾಡಿದ್ದರು. ಮೊದಲ ಎರಡು ಎಸೆತಗಳಲ್ಲಿ ಯಾವುದೇ ರನ್ ಗಳಿಸದ ರೋಹಿತ್ ಮೂರನೇ ಎಸೆತದಲ್ಲಿ ಬ್ಯಾಕ್‌ವರ್ಡ್ ಸ್ಕ್ವೇರ್ ಲೆಗ್ ಕಡೆಗೆ ಭರ್ಜರಿ ಸಿಕ್ಸ್ ಸಿಡಿಸಿದರು. ಚೆಂಡು ನೇರವಾಗಿ ಹೋಗಿ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದ ಪುಟಾಣಿ ಬಾಲಕಿಗೆ ಬಡಿಯಿತು. ಕ್ಯಾಮೆರಾಮನ್ ಇಡೀ ಘಟನೆಯನ್ನು ದೊಡ್ಡ ಪರದೆಯ ಮೇಲೆ ತೋರಿಸುತ್ತಿದ್ದಂತೆ, ಎಲ್ಲರೂ ಸ್ವಲ್ಪ ಸಮಯದವರೆಗೆ ಸ್ತಬ್ಧರಾದರು.

ಇದನ್ನು ನೋಡಿದ ತಕ್ಷಣವೇ ಇಂಗ್ಲೆಂಡ್ ತಂಡದ ಫಿಸಿಯೋ ಮತ್ತು ತಂಡದ ವೈದ್ಯರು ಹುಡುಗಿಯ ಬಳಿಗೆ ಓಡಿ ಬಂದರು. ಆ ಬಳಿಕ ಪಂದ್ಯವನ್ನು ಮುಂದುವರೆಸಲಾಯಿತು. ಅದರಂತೆ ಅಬ್ಬರಿಸಿದ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಅರ್ಧಶತಕ ಸಿಡಿಸುವ ಮೂಲಕ 20 ಓವರ್​ಗಳ ಒಳಗೆಯೇ ತಂಡಕ್ಕೆ ಜಯ ತಂದುಕೊಟ್ಟರು.

ಇದನ್ನೂ ಓದಿ
Image
Virat Kohli: ವಿರಾಟ್ ಕೊಹ್ಲಿಯ ಫಾರ್ಮ್​ ಬಗ್ಗೆ ಟೀಕೆ ಮಾಡುವ ಮುನ್ನ ಈ ಅಂಕಿ ಅಂಶಗಳನ್ನೊಮ್ಮೆ ನೋಡಿ..!
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಇಂಗ್ಲೆಂಡ್​ಗೆ ಆರಂಭಿಕ ಆಘಾತ ನೀಡಿದ್ದರು. ಪರಿಣಾಮ ಕೇವಲ 26 ರನ್​ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡದ 5 ಪ್ರಮುಖ ಬ್ಯಾಟ್ಸ್​​ಮನ್​ಗಳು ಪೆವಿಲಿಯನ್​ಗೆ ಮರಳಿದ್ದರು.

ಇದಾಗ್ಯೂ ನಾಯಕ ಜೋಸ್ ಬಟ್ಲರ್ 30 ರನ್​ಗಳಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದರು. ಆದರೆ ಮೊಹಮ್ಮದ್ ಶಮಿ ಎಸೆತಕ್ಕೆ ಭರ್ಜರಿ ಉತ್ತರ ನೀಡಲು ಹೋದ ಬಟ್ಲರ್ ಕೂಡ ಔಟಾದರು. ಒಂದು ಹಂತದಲ್ಲಿ ಕೇವಲ 68 ರನ್​ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಡೇವಿಡ್ ವಿಲ್ಲಿ ಆಸರೆಯಾಗಿ ನಿಂತರು. ಅದರಂತೆ ವಿಲ್ಲಿ 21 ರನ್​ಗಳ ಉಪಯುಕ್ತ ಕಾಣಿಕೆ ನೀಡಿದರು. ಪರಿಣಾಮ ಇಂಗ್ಲೆಂಡ್ ತಂಡದ ಮೊತ್ತ ನೂರರ ಗಡಿದಾಟಿತು.

ಇದಾಗ್ಯೂ ಟೀಮ್ ಇಂಡಿಯಾ ಬೌಲರ್​ಗಳ ಮುಂದೆ 26 ಓವರ್​ಗಳನ್ನು ದಾಟಲು ಆಂಗ್ಲ ಆಟಗಾರರಿಗೆ ಸಾಧ್ಯವಾಗಿಲ್ಲ. ಅಂತಿಮವಾಗಿ ಜಸ್​ಪ್ರೀತ್ ಬುಮ್ರಾ ದಾಳಿಗೆ ತತ್ತರಿಸಿದ ಇಂಗ್ಲೆಂಡ್​ 25.2 ಓವರ್​ಗಳಲ್ಲಿ ಕೇವಲ 110 ರನ್​ಗಳಿಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಬುಮ್ರಾ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು.

ಇನ್ನು ಇಂಗ್ಲೆಂಡ್ ನೀಡಿದ 111 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಭರ್ಜರಿ ಆರಂಭ ಒದಗಿಸಿದ್ದರು. ಅತ್ಯುತ್ತಮ ಜೊತೆಯಾಟವಾಡಿದ ಈ ಜೋಡಿ ಎಲ್ಲಾ ಹಂತದಲ್ಲೂ ಇಂಗ್ಲೆಂಡ್ ಬೌಲರ್​ಗಳ ವಿರುದ್ದ ಮೇಲುಗೈ ಸಾಧಿಸಿದರು. ಅದರಂತೆ ರೋಹಿತ್ ಶರ್ಮಾ ಕೇವಲ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ ಶಿಖರ್ ಧವನ್ ಉತ್ತಮ ಸಾಥ್ ನೀಡಿದರು.

ಅಂತಿಮವಾಗಿ ರೋಹಿತ್ ಶರ್ಜಾ ಅಜೇಯ 76 (58) ರನ್​ ಬಾರಿಸಿದರೆ, ಶಿಖರ್ ಧವನ್ ಅಜೇಯ 31 (54) ರನ್ ಕಲೆಹಾಕಿದರು. ಪರಿಣಾಮ 18.4 ಓವರ್​ಗಳಲ್ಲಿ ಟೀಮ್ ಇಂಡಿಯಾ ವಿಕೆಟ್ ನಷ್ಟವಿಲ್ಲದೆ 114 ರನ್​ ಬಾರಿಸುವ ಮೂಲಕ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದಿದೆ. ಇನ್ನು ಈ ಪಂದ್ಯದಲ್ಲಿ 7.2 ಓವರ್​ಗಳಲ್ಲಿ ಕೇವಲ 19 ರನ್​ ನೀಡಿ 6 ವಿಕೆಟ್ ಉರುಳಿಸಿ ಮಿಂಚಿದ್ದ ಜಸ್​ಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Published On - 10:22 am, Wed, 13 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ