ರೂಟ್ ನಾಯಕತ್ವದಲ್ಲಿ ಹೊಸ ಅಧ್ಯಾಯ: ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ

ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವಣ ಮೂರು ಮ್ಯಾಚ್​ಗಳ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದರೆ, ಎರಡು ಪಂದ್ಯವು ಡಿಸೆಂಬರ್ 26 ರಿಂದ ಸೆಂಚುರಿಯನ್​ನ ಸೂಪರ್​ಸ್ಫೋರ್ಟ್ ಪಾರ್ಕ್​ ಮೈದಾನದಲ್ಲಿ ನಡೆಯಲಿದೆ. ಇನ್ನು ಮೂರನೇ ಪಂದ್ಯಕ್ಕೆ ನ್ಯೂಲ್ಯಾಂಡ್ಸ್​ನ ಕೇಪ್​ಟೌನ್ ಮೈದಾನ ಆತಿಥ್ಯವಹಿಸಲಿದೆ.

ರೂಟ್ ನಾಯಕತ್ವದಲ್ಲಿ ಹೊಸ ಅಧ್ಯಾಯ: ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ
England
Image Credit source: The Guardian

Updated on: Nov 10, 2026 | 8:12 AM

ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಜೋ ರೂಟ್ ಮುನ್ನಡೆಸಲಿದ್ದಾರೆ. ಈ ಸರಣಿಯ ಮೂಲಕ ಹೊಸ ಅಧ್ಯಾಯ ಬರೆಯುವ ಇರಾದೆಯಲ್ಲಿ ಇಂಗ್ಲೆಂಡ್. ಈ ಹಿಂದೆ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿದ್ದ ಬೆನ್ ಸ್ಟೋಕ್ಸ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿಯ ಬಳಿಕ, ಜೋ ರೂಟ್ ಅವರನ್ನು ಹಂಗಾಮಿ ನಾಯಕನನ್ನಾಗಿ ಜವಾಬ್ದಾರಿ ವಹಿಸಲಾಗಿತ್ತು. ಆದರೆ ಇದೀಗ, ಸೌತ್ ಆಫ್ರಿಕಾ ಸರಣಿಗೂ ಮುನ್ನವೇ ಜೋ ರೂಟ್ ಅವರನ್ನು ಇಂಗ್ಲೆಂಡ್ ಟೆಸ್ಟ್ ತಂಡದ ಖಾಯಂ ನಾಯಕನನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಅದರಂತೆ, ಜೋ ರೂಟ್ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕನಾಗಿ ತಮ್ಮ ‘ಸೆಕೆಂಡ್ ಇನ್ನಿಂಗ್ಸ್’ ಆರಂಭಿಸಲು ಸಂಪೂರ್ಣ ಸಜ್ಜಾಗಿದ್ದಾರೆ. ಅದರಲ್ಲೂ ನೂತನ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರ ಮಾರ್ಗದರ್ಶನದಲ್ಲಿ ಈ ಹೊಸ ಅಧ್ಯಾಯ ಆರಂಭವಾಗುತ್ತಿರುವುದು ವಿಶೇಷ. ಈ ಹಿಂದೆ ಐಪಿಎಲ್‌ನ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಯಶಸ್ವಿ ಮುಖ್ಯ ಕೋಚ್ ಆಗಿದ್ದ ಫ್ಲೆಮಿಂಗ್, ಇದೀಗ ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಹೀಗಾಗಿ, ರೂಟ್-ಫ್ಲೆಮಿಂಗ್ ಜೋಡಿಯ ಮುಂದಾಳತ್ವದಲ್ಲಿ ಇಂಗ್ಲೆಂಡ್ ತಂಡವು ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿ ಆಡಲು ಮೈದಾನಕ್ಕಿಳಿಯುತ್ತಿದೆ.

Loading...

ಇಂಗ್ಲೆಂಡ್ ಟೆಸ್ಟ್ ತಂಡ:

  • ನಾಯಕ: ಜೋ ರೂಟ್
  • ಬ್ಯಾಟರ್‌ಗಳು/ಆಲ್‌ರೌಂಡರ್‌ಗಳು: ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್, ಬೆನ್ ಡಕೆಟ್, ಎಮಿಲಿಯೊ ಗೇ, ಡಾನ್ ಲ್ಯಾರೆನ್ಸ್.
  •  ವಿಕೆಟ್ ಕೀಪರ್‌ಗಳು: ಜೋರ್ಡಾನ್ ಕಾಕ್ಸ್, ಜೇಮಿ ಸ್ಮಿತ್.
  •  ಸ್ಪಿನ್ನರ್: ಲಿಯಾಮ್ ಪ್ಯಾಟರ್ಸನ್-ವೈಟ್.
  • ವೇಗದ ಬೌಲರ್‌ಗಳು: ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಸನ್ನಿ ಬೇಕರ್, ಸ್ಯಾಮ್ ಕುಕ್, ಓಲಿ ರಾಬಿನ್ಸನ್, ಜೋಶ್ ಟಂಗ್.

ಇದನ್ನೂ ಓದಿ: 149 ವರ್ಷಗಳ ಟೆಸ್ಟ್​ ಇತಿಹಾಸದಲ್ಲೇ ಹಿಂದೆಂದೂ ಕಾಣದ ವಿಶ್ವ ದಾಖಲೆ ಬರೆದ ಝಿಂಬಾಬ್ವೆ

ಯಾರು ಹೊರಕ್ಕೆ?

ಇತ್ತೀಚಿನವರೆಗೂ ನಿಯಮಿತವಾಗಿ ಆಡುತ್ತಿದ್ದ ಒಲೀ ಪೋಪ್ ಮತ್ತು ಯುವ ಸ್ಪಿನ್ನರ್ ಶೋಯೆಬ್ ಬಶೀರ್ ಅವರನ್ನು ಮುಖ್ಯ ತಂಡದಿಂದ ಕೈಬಿಡಲಾಗಿದ್ದು, ಬದಲಿಗೆ ಯುವ ಸ್ಪಿನ್ನರ್ ಲಿಯಾಮ್ ಪ್ಯಾಟರ್ಸನ್-ವೈಟ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಹಾಗೆಯೇ ಪೋಪ್ ಸ್ಥಾನದಲ್ಲಿ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದ ಯುವ ಆಟಗಾರ ಜೇಕಬ್ ಬೆಥೆಲ್ ಸಂಪೂರ್ಣ ಫಿಟ್ ಆಗಿ ತಂಡಕ್ಕೆ ಮರಳಿದ್ದಾರೆ.

ಸೌತ್ ಆಫ್ರಿಕಾ – ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

ಪಂದ್ಯ ದಿನಾಂಕ ಕ್ರೀಡಾಂಗಣ
1ನೇ ಟೆಸ್ಟ್ ಪಂದ್ಯ ಡಿಸೆಂಬರ್ 17 – 21, 2026 ವಾಂಡರರ್ಸ್ ಸ್ಟೇಡಿಯಂ, ಜೋಹಾನ್ಸ್‌ಬರ್ಗ್
2ನೇ ಟೆಸ್ಟ್ ಪಂದ್ಯ ಡಿಸೆಂಬರ್ 26 – 30, 2026 ಸೂಪರ್‌ಸ್ಪೋರ್ಟ್ ಪಾರ್ಕ್, ಸೆಂಚುರಿಯನ್
3ನೇ ಟೆಸ್ಟ್ ಪಂದ್ಯ ಜನವರಿ 3 – 7, 2027 ನ್ಯೂಲ್ಯಾಂಡ್ಸ್, ಕೇಪ್ ಟೌನ್

 

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us