AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

41ನೇ ವಯಸ್ಸಿನಲ್ಲಿ ನಿವೃತ್ತಿ ಹಿಂಪಡೆದು ಹೊಸ ತಂಡಕ್ಕೆ ಪಾದಾರ್ಪಣೆ ಮಾಡಿದ ರಾಸ್ ಟೇಲರ್

Ross Taylor's Cricket Comeback: ನ್ಯೂಜಿಲೆಂಡ್‌ನ ಮಾಜಿ ನಾಯಕ ರಾಸ್ ಟೇಲರ್ ತಮ್ಮ 41ನೇ ವಯಸ್ಸಿನಲ್ಲಿ ಕ್ರಿಕೆಟ್‌ಗೆ ಮರಳಿದ್ದಾರೆ. 2022ರಲ್ಲಿ ನಿವೃತ್ತಿ ಘೋಷಿಸಿದ್ದ ಅವರು ಈಗ ಸಮೋವಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಅಕ್ಟೋಬರ್‌ನಲ್ಲಿ ಓಮನ್‌ನಲ್ಲಿ ನಡೆಯಲಿರುವ ವಿಶ್ವಕಪ್ ಅರ್ಹತಾ ಪಂದ್ಯಾವಳಿಯಲ್ಲಿ ಅವರು ಆಡಲಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಅವರು ಹಂಚಿಕೊಂಡಿದ್ದಾರೆ. ಸಮೋವಾ ತಂಡವನ್ನು ಪ್ರತಿನಿಧಿಸುವುದು ತಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿನಿಧಿಸುವಂತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

41ನೇ ವಯಸ್ಸಿನಲ್ಲಿ ನಿವೃತ್ತಿ ಹಿಂಪಡೆದು ಹೊಸ ತಂಡಕ್ಕೆ ಪಾದಾರ್ಪಣೆ ಮಾಡಿದ ರಾಸ್ ಟೇಲರ್
Ross Taylor
ಪೃಥ್ವಿಶಂಕರ
|

Updated on:Sep 05, 2025 | 5:20 PM

Share

ನ್ಯೂಜಿಲೆಂಡ್‌ ಕ್ರಿಕೆಟ್ ತಂಡದ ಮಾಜಿ ನಾಯಕ ರಾಸ್ ಟೇಲರ್ (Ross Taylor) ಮೂರು ವರ್ಷಗಳ ನಂತರ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2022 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಟೇಲರ್ ಇದೀಗ ತಮ್ಮ 41ನೇ ವಯಸ್ಸಿನಲ್ಲಿ ಹೊಸ ತಂಡದ ಪರ ಆಡುವುದಾಗಿ ಘೋಷಿಸಿದ್ದಾರೆ. 16 ವರ್ಷಗಳ ಕಾಲ ನ್ಯೂಜಿಲೆಂಡ್ ತಂಡದ ಪರ ಆಡಿದ್ದ ಟೇಲರ್ ಇದೀಗ ಸಮೋವಾ ತಂಡದ ಪರ ಆಡುವುದನ್ನು ಕಾಣಬಹುದು. ಸ್ವತಃ ಈ ವಿಚಾರವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಟೇಲರ್ ತಮ್ಮ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ರಾಸ್ ಟೇಲರ್ ಹೇಳಿದ್ದೇನು?

ನಿವೃತ್ತಿ ಹಿಂಪಡೆದಿರುವ ರಾಸ್ ಟೇಲರ್ ಸಮೋವಾ ಕ್ರಿಕೆಟ್ ತಂಡದ ಜೆರ್ಸಿಯೊಂದಿಗೆ ತಮ್ಮ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಇದು ಅಧಿಕೃತ – ನಾನು ನೀಲಿ ಬಣ್ಣದ ಜೆರ್ಸಿಯನ್ನು ಧರಿಸಿ ಕ್ರಿಕೆಟ್‌ನಲ್ಲಿ ಸಮೋವಾವನ್ನು ಪ್ರತಿನಿಧಿಸುತ್ತೇನೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತದೆ. ಇದು ನಾನು ಪ್ರೀತಿಸುವ ಕ್ರೀಡೆಗೆ ಮರಳುವುದು ಮಾತ್ರವಲ್ಲ, ನನ್ನ ಪರಂಪರೆ, ಸಂಸ್ಕೃತಿ, ಹಳ್ಳಿಗಳು ಮತ್ತು ಕುಟುಂಬವನ್ನು ಪ್ರತಿನಿಧಿಸುವುದು ನನಗೆ ಸಿಕ್ಕ ದೊಡ್ಡ ಗೌರವವಾಗಿದೆ. ಆಟಕ್ಕೆ ಏನನ್ನಾದರೂ ಮರಳಿ ನೀಡಲು, ತಂಡವನ್ನು ಸೇರಲು ಮತ್ತು ಮೈದಾನದ ಒಳಗೆ ಮತ್ತು ಹೊರಗೆ ನನ್ನ ಅನುಭವಗಳನ್ನು ಹಂಚಿಕೊಳ್ಳಲು ಅವಕಾಶಕ್ಕಾಗಿ ನಾನು ಉತ್ಸುಕನಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

View this post on Instagram

A post shared by Ross Taylor (@rossltaylor3)

ಅಕ್ಟೋಬರ್​ನಲ್ಲಿ ರಾಸ್ ಟೇಲರ್ ಕಣಕ್ಕೆ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದ ನ್ಯೂಜಿಲೆಂಡ್ ತಂಡದ ಸದಸ್ಯರಾಗಿದ್ದ ರಾಸ್ ಟೇಲರ್, ಇದೀಗ ಅಕ್ಟೋಬರ್‌ನಲ್ಲಿ ಓಮನ್‌ನಲ್ಲಿ ನಡೆಯಲಿರುವ ವಿಶ್ವಕಪ್ ಏಷ್ಯಾ-ಪೆಸಿಫಿಕ್ ಅರ್ಹತಾ ಸರಣಿಯಲ್ಲಿ ಸಮೋವಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಗ್ರೂಪ್-3 ರಲ್ಲಿ ಸ್ಥಾನ ಪಡೆದಿರುವ ಸಮೋವಾ, ಆತಿಥೇಯ ಓಮನ್ ಮತ್ತು ಪಪುವಾ ನ್ಯೂಗಿನಿಯಾ ವಿರುದ್ಧ ಪಂದ್ಯಗಳನ್ನು ಆಡಲಿದೆ.

ಅರ್ಹತಾ ಪಂದ್ಯಾವಳಿಯು ತಲಾ ಮೂರು ತಂಡಗಳ ಮೂರು ಗುಂಪುಗಳನ್ನು ಒಳಗೊಂಡಿದೆ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ ಸಿಕ್ಸ್‌ಗೆ ಮುನ್ನಡೆಯುತ್ತವೆ. ಈ ಪಂದ್ಯಾವಳಿಯು ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಅಗ್ರ ಮೂರು ತಂಡಗಳನ್ನು ನಿರ್ಧರಿಸುತ್ತದೆ.

2022 ರಲ್ಲಿ ಕೊನೆಯ ಅಂತರರಾಷ್ಟ್ರೀಯ ಪಂದ್ಯ

ವಾಸ್ತವವಾಗಿ 2006 ರಲ್ಲಿ ನ್ಯೂಜಿಲೆಂಡ್ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ರಾಸ್ ಟೇಲರ್ 2022 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದರ ನಂತರ ಅವರು ನಿವೃತ್ತಿ ಘೋಷಿಸಿದ್ದರು. ನ್ಯೂಜಿಲೆಂಡ್ ಪರ 112 ಟೆಸ್ಟ್ ಪಂದ್ಯಗಳನ್ನು ಆಡಿರುವ ಟೇಲರ್ 196 ಇನ್ನಿಂಗ್ಸ್‌ಗಳಲ್ಲಿ 44.66 ಸರಾಸರಿಯಲ್ಲಿ 7683 ರನ್ ಗಳಿಸಿದ್ದಾರೆ. ಇದರಲ್ಲಿ 19 ಶತಕಗಳು ಮತ್ತು 35 ಅರ್ಧಶತಕಗಳು ಸೇರಿವೆ. ಇದಲ್ಲದೆ, ಅವರು 236 ಏಕದಿನ ಪಂದ್ಯಗಳಲ್ಲಿ 47.55 ಸರಾಸರಿಯಲ್ಲಿ 8607 ರನ್ ಗಳಿಸಿದ್ದಾರೆ. ಇದರಲ್ಲಿ 21 ಶತಕಗಳು ಮತ್ತು 51 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Fri, 5 September 25

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ