Harshal Patel, IPL 2021: ಐಪಿಎಲ್ ಇತಿಹಾಸದ ಅತಿದೊಡ್ಡ ದಾಖಲೆ ಉಡೀಸ್ ಮಾಡಿದ ಆರ್​ಸಿಬಿ ವೇಗಿ ಹರ್ಷಲ್ ಪಟೇಲ್

Harshal Patel IPL record, RR vs RCB: ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿರುವ ಹರ್ಷಲ್ ಪಟೇಲ್ ಐಪಿಎಲ್ (IPL) ಇತಿಹಾಸದಲ್ಲೇ ಆರ್​ಸಿಬಿಯ ಯಾವೊಬ್ಬ ಬೌಲರ್ ಮಾಡಿರದ ವಿಶೇಷ ಸಾಧನೆ ಮಾಡಿದ್ದಾರೆ.

Harshal Patel, IPL 2021: ಐಪಿಎಲ್ ಇತಿಹಾಸದ ಅತಿದೊಡ್ಡ ದಾಖಲೆ ಉಡೀಸ್ ಮಾಡಿದ ಆರ್​ಸಿಬಿ ವೇಗಿ ಹರ್ಷಲ್ ಪಟೇಲ್
Harshal Patel RCB IPL 2021
Follow us
TV9 Web
| Updated By: Vinay Bhat

Updated on: Sep 30, 2021 | 8:56 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಪ್ರಮುಖ ಬೌಲಿಂಗ್ ಅಸ್ತ್ರ ಹರ್ಷಲ್ ಪಟೇಲ್ (Harshal Patel) ಐಪಿಎಲ್ ಇತಿಹಾಸದ ಅತಿದೊಡ್ಡ ದಾಖಲೆಯನ್ನು ಪುಡಿಪುಡಿ ಮಾಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ (IPL 2021) ಬುಧವಾರದ ರಾಜಸ್ಥಾನ್ ರಾಯಲ್ಸ್ (Rajasthan Royals) ವಿರುದ್ಧದ ಪಂದ್ಯದಲ್ಲಿ ಹರ್ಷಲ್ ಈ ವಿಶೇಷ ಸಾಧನೆ ಮಾಡಿದ್ದಾರೆ. ಈ ಬಾರಿಯ ಲೀಗ್​ನಲ್ಲಿ ಅತಿ ಹೆಚ್ಚು ವಿಕೆಟ್​ಗಳನ್ನು ಪಡೆದು ಪರ್ಪಲ್‌ ಕ್ಯಾಪ್‌ (Puple Cap) ತೊಟ್ಟಿರುವ ಹರ್ಷಲ್‌ ಪಟೇಲ್‌, ಆರ್​ಆರ್ (RR)​ ವಿರುದ್ಧದ ಪಂದ್ಯದಲ್ಲಿ ಆರಂಭದಲ್ಲಿ ದುಬಾರಿಯಾದರು. ಆದರೆ, ಕೊನೇಯ ಓವರ್‌ನಲ್ಲಿ ಆರ್​ಸಿಬಿ (RCB) ಬೌಲರ್ ರಾಜಸ್ಥಾನ್ ಬ್ಯಾಟರ್​ಗಳನ್ನು ಪೆವಿಲಿಯನ್​ಗೆ ಅಟ್ಟಿ 3 ವಿಕೆಟ್‌ ಕಿತ್ತು ವಿಶೇಷ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಐಪಿಎಲ್ (IPL) ಇತಿಹಾಸದಲ್ಲೇ ಆರ್​ಸಿಬಿಯ ಯಾವೊಬ್ಬ ಬೌಲರ್ ಮಾಡಿರದ ವಿಶೇಷ ಸಾಧನೆ ಮಾಡಿದ್ದಾರೆ.

ಹೌದು, ಸ್ಲೋ ಬಾಲ್ ಮೂಲಕ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿರುವ ಹರ್ಷಲ್ ಪಟೇಲ್ ರಾಜಸ್ಥಾನ್ ಬ್ಯಾಟಿಂಗ್ ಇನ್ನಿಂಗ್ಸ್​ನ ಅಂತಿಮ ಓವರ್​ನಲ್ಲಿ ಮ್ಯಾಜಿಕ್ ಮಾಡಿಬಿಟ್ಟರು. ಮತ್ತೊಮ್ಮೆ ಹ್ಯಾಟ್ರಿಕ್ ಪಡೆಯುವ ಅವಕಾಶವೂ ಇತ್ತು. ಮೊದಲ ಎಸೆತ ಡಾಟ್ ಆದರೆ, ಎರಡನೇ ಎಸೆತದಲ್ಲಿ ರಿಯಾನ್ ಪರಾಗ್ ಅವರನ್ನು ಔಟ್ ಮಾಡಿದರು. ನಂತರದ ಮೂರನೇ ಎಸೆತದಲ್ಲಿ ಕ್ರಿಸ್ ಮೊರೀಸ್​ಗೆ ಪೆವಿಲಿಯನ್ ಹಾದಿ ತೋರಿಸಿದರು. 4ನೇ ಎಸೆತ 1 ರನ್, 5ನೇ ಎಸೆತದಲ್ಲಿ 2 ರನ್ ಹಾಗೂ ಅಂತಿಮ ಆರನೇ ಎಸೆತದಲ್ಲಿ ಮತ್ತೊಂದು ವಿಕೆಟ್.

ಹೀಗೆ ಹರ್ಷಲ್ ಪಟೇಲ್ ಮೂರು ವಿಕೆಟ್ ಕಿತ್ತು ಮಿಂಚಿದರು. ಈ ಮೂಲಕ 26 ವಿಕೆಟ್‌ಗಳೊಂದಿಗೆ ಹರ್ಷಲ್ ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ಪರ ಅತ್ಯಧಿಕ ವಿಕೆಟ್‌ ಪಡೆದ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರಲ್ಲದೆ, ಅನ್‌ಕ್ಯಾಪ್ಡ್ ಆಟಗಾರರಲ್ಲಿ ಐಪಿಎಲ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಆಗಿ ಗಮನ ಸೆಳೆದಿದ್ದಾರೆ. ಇದಕ್ಕೂ ಮುನ್ನ 2015ರಲ್ಲಿ ಲೆಗ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ 23 ವಿಕೆಟ್‌ಗಳನ್ನು ಪಡೆದಿದ್ದು ಆರ್‌ಸಿಬಿ ಪರ ಶ್ರೇಷ್ಠ ಸಾಧನೆಯ ದಾಖಲೆ ಆಗಿತ್ತು. ಈಗ ಈ ದಾಖಲೆ ಹರ್ಷಲ್‌ ಪಾಲಾಗಿದೆ.

ಇನ್ನೂ ಐಪಿಎಲ್‌ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ದಾಖಲೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಆಲ್‌ರೌಂಡರ್‌ ಡ್ವೇನ್‌ ಬ್ರಾವೋ ಹೆಸರಲ್ಲಿದೆ. 2013ರ ಆವೃತ್ತಿಯಲ್ಲಿ ಬ್ರಾವೋ ಒಟ್ಟು 32 ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದರು. ಈಗ ಈ ದಾಖಲೆ ಮುರಿಯಲು ಹರ್ಷಲ್‌ಗೆ ಕೇವಲ 7 ವಿಕೆಟ್‌ಗಳ ಅಗತ್ಯವಿದೆ. ಲೀಗ್‌ನಲ್ಲಿ ಇನ್ನು ಮೂರು ಪಂದ್ಯ ಬಳಿಕ ನಾಕ್‌ಔಟ್‌ ಪಂದ್ಯಗಳಲ್ಲಿ ಹರ್ಷಲ್‌ಗೆ ಈ ದಾಖಲೆ ಮುರಿಯುವ ಅತ್ಯುತ್ತಮ ಅವಕಾಶ ಸಿಕ್ಕಿದೆ. ಅಲ್ಲದೆ ಐಪಿಎಲ್ ಮಂಡಳಿ ಕೇಳಿದ ಪೋಲ್ ಪ್ರಶ್ನೆಯಲ್ಲಿ ಹರ್ಷಲ್ ಅವರು ಬ್ರಾವೋ ದಾಖಲೆಯನ್ನೂ ಮುರಿಯಲಿದ್ದಾರೆ ಎಂದು ಅಭಿಮಾನಿಗಳು ನಂಬಿಕೆ ವ್ಯಕ್ತಪಡಿಸಿದ್ದಾರೆ.

ದುಬೈನಲ್ಲಿ ಬುಧವಾರ ನಡೆದ ಐಪಿಎಲ್ 2021ರ 43ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಗ್ಲೆನ್ ಮ್ಯಾಕ್ಸ್​ವೆಲ್ ಮತ್ತು ಯುಜ್ವೇಂದ್ರ ಚಹಾಲ್ ಹೀಗೆ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಮಿಂಚಿದ ವಿರಾಟ್ ಕೊಹ್ಲಿ ಪಡೆ ಅಮೋಘ ಗೆಲುವು ಕಂಡಿತು. ಈ ಮೂಲಕ ಬೆಂಗಳೂರು ತಂಡ ಪಾಯಿಂಟ್ ಟೇಬಲ್​ನಲ್ಲಿ 14 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದ್ದು, ಪ್ಲೇ ಆಫ್ ಸನಿಹ ತಲುಪಿದೆ.

RCB playoffs: ನೆಟ್ ರನ್​ ರೇಟ್ ಮೈನಸ್​ನಲ್ಲಿರುವ ಆರ್​ಸಿಬಿಗೆ ಪ್ಲೇ ಆಫ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?

IPL 2021, SRH vs CSK: ಚೆನ್ನೈ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಹೈದರಾಬಾದ್: ಧೋನಿ ಪಡೆ ಗೆದ್ದರೆ ಏನಾಗಲಿದೆ?

(Royal Challengers Bangalore RCB seamer Harshal Patel huge milestone and breaks IPL record on RR Match)

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ