AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs PBKS: ಒಂದು ಮಹತ್ವದ ಬದಲಾವಣೆಗೆ ಮುಂದಾದ ಆರ್​ಸಿಬಿ: ಇಂದಿನ ಪಂದ್ಯದಿಂದ ಈ ಪ್ಲೇಯರ್ ಔಟ್

RCB Probable Playing XI vs PBKS: ಐಪಿಎಲ್​ನಲ್ಲಿಂದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್​ ತಂಡ ಮುಖಾಮುಖಿ ಆಗುತ್ತಿದೆ. ಹಾಗಾದ್ರೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿದೆ ಎಂಬುದನ್ನು ನೋಡೋಣ.

RCB vs PBKS: ಒಂದು ಮಹತ್ವದ ಬದಲಾವಣೆಗೆ ಮುಂದಾದ ಆರ್​ಸಿಬಿ: ಇಂದಿನ ಪಂದ್ಯದಿಂದ ಈ ಪ್ಲೇಯರ್ ಔಟ್
RCB Playing XI vs PBKS IPL 2022
TV9 Web
| Updated By: Vinay Bhat|

Updated on:May 13, 2022 | 9:14 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 2022 (IPL 2022) ರಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ (RCB vs PBKS)​ ತಂಡ ಮುಖಾಮುಖಿ ಆಗುತ್ತಿದೆ. ಪ್ಲೇ ಆಫ್​ಗೇರುವ ದೃಷ್ಟಿಯಿಂದ ಉಭಯ ತಂಡಗಳಿಗೆ ಈ ಪಂದ್ಯ ಮುಖ್ಯವಾಗಿದೆ. ಟೂರ್ನಿಯಲ್ಲಿ ಆರ್​ಸಿಬಿ ಒಟ್ಟು 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಪಂಜಾಬ್ 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, ಉಳಿದ 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡು ಎಂಟನೇ ಸ್ಥಾನದಲ್ಲಿದೆ. ಇದನ್ನು ಗಮನಿಸಿದರೆ ಪಂಜಾಬ್ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆದುಕೊಳ್ಳಬೇಕೆಂದರೆ ಇನ್ನುಳಿದ ಎಲ್ಲಾ ಪಂದ್ಯಗಳಲ್ಲಿಯೂ ಗೆಲ್ಲಬೇಕಿದೆ. ಇತ್ತ ಫಾಫ್ ಡುಪ್ಲೆಸಿಸ್ (Faf Duplessis) ಪಡೆ ಉಳಿದಿರುವ ಎರಡೂ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆದ್ದರೆ ಟಾಪ್ 2 ಗೇರುವ ಅವಕಾಶ ಹೊಂದಿದೆ.

ಆರ್​ಸಿಬಿ ಪರ ಮಾಜಿ ನಾಯಕ ವಿರಾಟ್ ಕೊಹ್ಲಿ ಬೇಗನೆ ಔಟ್ ಆಗುತ್ತಿದ್ದಾರೆ ಆದರೂ ಅದು ದೊಡ್ಡ ಹೊಡೆತ ನೀಡುತ್ತಿಲ್ಲ. ಹೈದರಾಬಾದ್‌ ವಿರುದ್ಧವೂ ಕೊಹ್ಲಿ ಮೊದಲ ಎಸೆತದಲ್ಲೇ ಔಟಾದರೂ ಆರ್‌ಸಿಬಿಗೆ ಇದರಿಂದ ಯಾವ ನಷ್ಟವೂ ಆಗಿರಲಿಲ್ಲ. ನಾಯಕ ಫಾ ಡು ಪ್ಲೆಸಿಸ್‌, ಯಂಗ್‌ ಗನ್‌ ರಜತ್‌ ಪಾಟೀದಾರ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ದಿನೇಶ್‌ ಕಾರ್ತಿಕ್‌ ಸಿಡಿದು ನಿಂತು ಮೂರೇ ವಿಕೆಟಿಗೆ 192 ರನ್‌ ಪೇರಿಸುವ ಮೂಲಕ ಹೈದರಾಬಾದ್‌ ವೇಗಕ್ಕೆ ಸಡ್ಡು ಹೊಡೆದಿದ್ದರು. ಇವರ ಜೊತೆಗೆ ಕೊಹ್ಲಿಯೂ ಕೈ ಜೋಡಿಸಿದರೆ ತಂಡದ ಮೊತ್ತ 200ರ ಗಡಿ ದಾಟುವುದು ಖಚಿತ ಅಥವಾ ಸುಲಭ ಗೆಲುವು ಪಡೆದುಕೊಳ್ಳಬಹುದು. ದಿನೇಶ್ ಕಾರ್ತಿಕ್ ಅಂತೂ ಪ್ರತಿ ಪಂದ್ಯದಲ್ಲಿ ತಂಡಕ್ಕೆ ಕೊಡುಗೆ ನೀಡುತ್ತಿದ್ದಾರೆ. ಫಾಫ್ ಕೂಡ ಆರಂಭದಲ್ಲಿ ಎಚ್ಚರಿಕೆಯ ಆಟವಾಡಿದರೆ ಪವರ್ ಪ್ಲೇ ಬಳಿಕ ಅಬ್ಬರಿಸುತ್ತಾರೆ.

ಆರ್​ಸಿಬಿಗೆ ಪ್ರಮುಖ ತಲೆನೋವಾಗಿರುವುದು ವೇಗಿಗಳದ್ದೆ. ಜೋಶ್ ಹ್ಯಾಜ್ಲೆವುಡ್ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ಹರ್ಷಲ್ ಪಟೇಲ್ ಅವರಿಂದ ಸ್ಥಿರ ಪ್ರದರ್ಶನ ಬರುತ್ತಿಲ್ಲ. ಮೊಹಮ್ಮದ್ ಸಿರಾಜ್ ಅಂತೂ ಈ ಆವೃತ್ತಿಯಲ್ಲಿ ಸಾಕಷ್ಟು ದುಬಾರಿಯಾಗಿದ್ದಾರೆ. ಪ್ರಮುಖವಾಗಿ ಲೈನ್-ಲೆಂತ್​ನಲ್ಲಿ ಎಡವುತ್ತಿರುವ ಸಿರಾಜ್ ಇದುವರೆಗೆ ಆಡಿದ 12 ಪಂದ್ಯಗಳಲ್ಲಿ 8 ವಿಕೆಟ್ ಮಾತ್ರ ಗಳಿಸಿದ್ದಾರೆ. ಮತ್ತು 9.44ರ ಎಕಾನಮಿಯಲ್ಲಿ 43 ಓವರ್‌ಗಳಲ್ಲಿ 406 ರನ್ ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಇಂದಿನ ಪಂದ್ಯದಿಂದ ಇವರನ್ನು ಕೈಬಿಟ್ಟು ಸಿದ್ಧಾರ್ಥ್ ಕೌಲ್ ಅಥವಾ ಚಾಮ ಮಿಲಿಂದ್‌ಗೆ ಅವಕಾಶ ನೀಡುವ ಸಂಭವ ಹೆಚ್ಚಿದೆ. ವನಿಂದು ಹಸರಂಗ ಪ್ರತಿ ಪಂದ್ಯದಲ್ಲಿ ಬ್ರೇಕ್ ತಂದುಕೊಡುತ್ತಿದ್ದಾರೆ.

ಇದನ್ನೂ ಓದಿ
Image
Devon Conway: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್​ನಲ್ಲಿ ನಡೆಯಿತು ನಾಚಿಕೆಗೇಡಿನ ಸಂಗತಿ: ಹೀಗಾಗ ಬಾರದಿತ್ತು
Image
IPL 2022: ಮುಂಬೈ ಮುಂದೆ ಮಂಕಾದ ಚೆನ್ನೈ; ಐಪಿಎಲ್ ಇತಿಹಾಸದಲ್ಲಿ 2ನೇ ಬಾರಿಗೆ ಕೆಟ್ಟ ದಾಖಲೆ ಬರೆದ ಧೋನಿ ಬಳಗ
Image
CSK vs MI IPL Match Result: ಹಳೆ ಸೋಲಿಗೆ ಸೇಡು ತೀರಿಸಿಕೊಂಡ ಮುಂಬೈ! ಚೆನ್ನೈ ಪ್ಲೇಆಫ್ ಆಸೆಗೆ ಬಿತ್ತು ಬ್ರೇಕ್
Image
CSK vs MI Highlights, IPL 2022: ಸೋಲಿನೊಂದಿಗೆ ಪ್ಲೇ ಆಫ್​ನಿಂದ ಹೊರಬಿದ್ದ ಚೆನ್ನೈ

ಇತ್ತ ಪಂಜಾಬ್ ಕಿಂಗ್ಸ್ ತಂಡ ಮುಂದಿನ ಮೂರೂ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಾದ ತೀವ್ರ ಒತ್ತಡದಲ್ಲಿದೆ. ಹೀಗಾಗಿ ಮಯಾಂಕ್ ಪಡೆ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಸೋಲು ಅನುಭವಿಸಿತ್ತು. ಈ ಸೋಲುಗಳಿಂದ ಎದ್ದು ಆಲ್ ರೌಂಡರ್ ಪ್ರದರ್ಶನ ನೀಡುವ ಒತ್ತಡದಲ್ಲಿ ಪಂಜಾಬ್ ಇದೆ. ಅಗರ್ವಾಲ್ ಜೊತೆ ಶಿಖರ್ ಧವನ್, ಜಾನಿ ಬೈರ್​ಸ್ಟೋ, ಭನುಕಾ, ಲಿವಿಂಗ್​ಸ್ಟೋನ್ ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ. ರಬಾಡ, ರಾಹುಲ್ ಚಹರ್ ಬೌಲಿಂಗ್​ನಲ್ಲಿ ಮಿಂಚುತ್ತಿದ್ದಾರೆ.

ಸಂಭಾವ್ಯ ಪ್ಲೇಯಿಂಗ್ XI:

ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಸಿದ್ಧಾರ್ಥ್ ಕೌಲ್, ಜೋಶ್ ಹ್ಯಾಜಲ್​ವುಡ್.

ಪಂಜಾಬ್ ಕಿಂಗ್ಸ್: ಜಾನಿ ಬೈರ್‌ಸ್ಟೋವ್, ಶಿಖರ್ ಧವನ್, ಮಯಾಂಕ್ ಅಗರ್ವಾಲ್ (ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ಸಂದೀಪ್ ಶರ್ಮಾ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:14 am, Fri, 13 May 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?