RCB Playing XI: ಪಂಜಾಬ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದಲ್ಲಿ ಒಂದು ಬದಲಾವಣೆ ಖಚಿತ

IPL 2021: Match 48, RCB vs PBKS Match Prediction: ಇಂದಿನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನಿಷ್ಠ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಜಾರ್ಜ್ ಗಾರ್ಟನ್ ಕೈಬಿಟ್ಟು ಟಿಮ್ ಡೇವಿಡ್​ಗೆ ಮತ್ತೊಮ್ಮೆ ಅವಕಾಶ ನೀಡುವ ಸಾಧ್ಯತೆ ಇದೆ.

RCB Playing XI: ಪಂಜಾಬ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದಲ್ಲಿ ಒಂದು ಬದಲಾವಣೆ ಖಚಿತ
RCB Playing XI vs PBKS
Follow us
TV9 Web
| Updated By: Vinay Bhat

Updated on:Oct 03, 2021 | 9:55 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2021) ನಡೆಯಲಿರುವ 48ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ (RCB vs PBKS) ಗೆಲುವಿಗೆ ಹೋರಾಟ ನಡೆಸಲಿದೆ. ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಕದನ ನಡೆಯಲಿದ್ದು ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ. ವಿರಾಟ್ ಕೊಹ್ಲಿ (Virat Kohli) ಪಡೆ ಈ ಪಂದ್ಯವನ್ನು ಗೆದ್ದು ಆಫ್‌ಗೆ ಮತ್ತಷ್ಟು ಹತ್ತಿರವಾಗಲು ಬಯಸಿದ್ದರೆ, ಕೆ. ಎಲ್ ರಾಹುಲ್ (KL Rahul) ಸೈನ್ಯ ಪ್ಲೇಆಫ್ ಸ್ಪರ್ಧೆಯಲ್ಲಿ ಮುಂದುವರಿಯಬೇಕಾದರೆ ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಇಲ್ಲಿವರೆಗೂ ಆಡಿರುವ ಒಟ್ಟು 11 ಪಂದ್ಯಗಳಲ್ಲಿ ಆರ್‌ಸಿಬಿ 7 ರಲ್ಲಿ ಗೆದ್ದು ಇನ್ನುಳಿದ 4ರಲ್ಲಿ ಸೋಲು ಅನುಭವಿಸಿದೆ. ಒಟ್ಟು 14 ಅಂಕಗಳನ್ನು ಕಲೆ ಹಾಕಿರುವ ಬೆಂಗಳೂರು (Royal Challengers Bangalore) ತಂಡ ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೆ, -0.200 ರಷ್ಟು ಆರ್‌ಸಿಬಿಯ ರನ್‌ರೇಟ್‌ ಮೈನಸ್‌ನಲ್ಲಿದೆ. ಆದರೂ ಇನ್ನೊಂದು ಪಂದ್ಯದಲ್ಲಿ ಕೊಹ್ಲಿ ಪಡೆ ಗೆದ್ದರೆ, ನಾಕೌಟ್‌ ಟಿಕೆಟ್‌ ಪಡೆದುಕೊಳ್ಳಲಿದೆ. ಇತ್ತ ಪಂಜಾಬ್ (Punjab Kings) ಆಡಿರುವ 12 ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಮತ್ತು ಏಳು ಪಂದ್ಯಗಳಲ್ಲಿ ಸೋಲು ಕಂಡಿದೆ. 10 ಅಂಕದೊಂದಿಗೆ ಐದನೇ ಸ್ಥಾನದಲ್ಲಿದೆ. -0.236 ರಷ್ಟು ರಾಹುಲ್ ಪಡೆಯ ರನ್​ರೇಟ್ ಕೂಡ ಮೈನಸ್​ನಲ್ಲಿದೆ.

ಇಂದಿನ ಪಂದ್ಯಕ್ಕೆ ಆರ್​ಸಿಬಿ ತಂಡದಲ್ಲಿ ಕನಿಷ್ಠ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಓಪನರ್​ಗಳಾದ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಬೊಂಬಾಟ್ ಆರಂಭ ಒದಗಿಸುತ್ತಿರುವುದು ಆರ್​ಸಿಬಿಗೆ ಪಾಸಿಟಿವ್ ಸೈನ್ ಆಗಿದೆ. ಇದರ ಜೊತೆಗೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶ್ರೀಕರ್ ಭರತ್ ಭರವಸೆ ಮೂಡಿಸಿದ್ದಾರೆ. ಪ್ರಚಂಡ ಫಾರ್ಮ್​ಗೆ ಮರಳಿರುವ ಗ್ಲೆನ್‌ ಮ್ಯಾಕ್ಸ್‌ವೆಲ್‌ ತಂಡಕ್ಕೆ ಹೆಚ್ಚಿನ ಶಕ್ತಿ ತುಂಬಿದ್ದಾರೆ.

ಆದರೆ 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್ ಅರಬ್‌ ನಾಡಿನಲ್ಲಿ ಅಬ್ಬರಿಸಲು ವಿಫ‌ಲರಾಗಿರುವುದು ಆರ್‌ಸಿಬಿಗೆ ಹಿನ್ನಡೆ ಎಂಬುದರಲ್ಲಿ ಆನುಮಾನವಿಲ್ಲ. ಅಲ್ಲದೆ ನಂತರ ಬರುವ ಬ್ಯಾಟರ್​ಗಳ ಮೇಲೆ ನಿರೀಕ್ಷೆಯೂ ಇಲ್ಲ. ಹೀಗಾಗಿ ಒಂದು ಎಕ್ಸ್​ಟ್ರಾ ಬ್ಯಾಟರ್ ಅನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು. ಜಾರ್ಜ್ ಗಾರ್ಟನ್ ಕೈಬಿಟ್ಟು ಟಿಮ್ ಡೇವಿಡ್​ಗೆ ಮತ್ತೊಮ್ಮೆ ಅವಕಾಶ ನೀಡುವ ಸಾಧ್ಯತೆ ಇದೆ. ಡೇನ್ ಕ್ರಿಸ್ಟಿಯನ್ ಹಾಗೂ ಶಹ್ಬಾಜ್ ಅಹ್ಮದ್ ಆಲ್ರೌಂಡರ್ ಜವಾಬ್ದಾರಿ ಹೊರಲಿದ್ದಾರೆ.

ಇನ್ನೂ ಈಗಾಗಲೇ ಪರ್ಪಲ್‌ ಕ್ಯಾಪ್‌ ಏರಿಸಿಕೊಂಡಿರುವ ಹರ್ಷಲ್‌ ಪಟೇಲ್‌ ಡೆತ್ ಓವರ್​ನಲ್ಲಿ ಅದ್ಭುತವಾಗಿ ಗೋಚರಿಸಿದ್ದಾರೆ. ಯುಜ್ವೇಂದ್ರ ಚಹಾಲ್ ಸ್ಪಿನ್ ಮೋಡಿ ಸಖತ್ ವರ್ಕೌಟ್ ಆಗುತ್ತಿದೆ. ಮೊಹಮ್ಮದ್ ಸಿರಾಜ್ ಇವರಿಗೆ ಸಾಥ್ ನೀಡಬೇಕಿದೆ.

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ 27 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 12 ಮತ್ತು ಪಂಜಾಬ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

ಪಿಚ್‌ ಹೇಗಿದೆ?:

ಇಲ್ಲಿನ ಶಾರ್ಜಾ ಕ್ರಿಕೆಟ್‌ ಸ್ಟೇಡಿಯಂ ಪಿಚ್‌ ಬ್ಯಾಟಿಂಗ್‌ ಕಠಿಣವಾಗಿದೆ. ಹಾಗಾಗಿ, ಇಲ್ಲಿನ ವಿಕೆಟ್‌ನಲ್ಲಿ ಬ್ಯಾಟರ್​ಗಳು ರನ್‌ ಗಳಿಸುವ ಅಷ್ಟೊಂದು ಸುಲಭವಲ್ಲ. ಆದರೆ, ಸ್ಪಿನ್ನರ್‌ಗಳು ಈ ಮೈದಾನದಲ್ಲಿ ಪ್ರಾಬಲ್ಯ ಸಾಧಿಸಬಲ್ಲರು. ಅಂದಹಾಗೆ, ಇಲ್ಲಿ ಟಾಸ್‌ ಗೆಲ್ಲುವ ತಂಡಗಳು ಚೇಸಿಂಗ್‌ ಆಯ್ಕೆಗೆ ಮೊದಲ ಪ್ರಾಶಸ್ತ್ಯ ನೀಡಲಿವೆ. ಈ ಕ್ರೀಡಾಂಗಣದಲ್ಲಿ ಆಡಿದ ಕೊನೇಯ ನಾಲ್ಕು ಪಂದ್ಯಗಳಲ್ಲಿ ಚೇಸಿಂಗ್ ಮಾಡಿದ ತಂಡ ಮೂರರಲ್ಲಿ ಗೆದ್ದಿದೆ.

MS Dhoni: ರಾಜಸ್ಥಾನ್ ಸ್ಫೋಟಕ ಚೇಸಿಂಗ್​ ಬಗ್ಗೆ ಪಂದ್ಯ ಮುಗಿದ ಬಳಿಕ ಎಂ. ಎಸ್ ಧೋನಿ ಏನಂದ್ರು ಗೊತ್ತಾ?

IPL 2021, KKR vs SRH: ಹೈದರಾಬಾದ್​ಗೆ ಔಪಚಾರಿಕ ಪಂದ್ಯ: ಕೆಕೆಆರ್ ಗೆದ್ದರೆ ಪ್ಲೇ ಆಫ್​ಗೆ ಮತ್ತಷ್ಟು ಸನಿಹ

(Royal Challengers Bangalore vs Punjab Kings RCB vs PBKS Probable XIs Dream11 Team Prediction IPL 2021)

Published On - 9:53 am, Sun, 3 October 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್