IPL 2025: 20 ಮಿಲಿಯನ್ ಫಾಲೋವರ್ಸ್; ಪ್ಲೇಆಫ್ಗೂ ಮುನ್ನ ದಾಖಲೆ ಬರೆದ ಆರ್ಸಿಬಿ
RCB's 20 Million Instagram Followers: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇನ್ಸ್ಟಾಗ್ರಾಮ್ ನಲ್ಲಿ 2 ಕೋಟಿ ಅಭಿಮಾನಿಗಳನ್ನು ಹೊಂದಿ, ಎಲ್ಲಾ ಐಪಿಎಲ್ ತಂಡಗಳಿಗಿಂತ ಮುಂಚೂಣಿಯಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ಮೂರನೇ ಸ್ಥಾನದಲ್ಲಿದೆ. 2025 ರ ಐಪಿಎಲ್ ಪ್ಲೇಆಫ್ಸ್ ಗೆ ಮುನ್ನ ಈ ಸಾಧನೆ ಆರ್ಸಿಬಿಗೆ ಉತ್ತಮ ಆತ್ಮವಿಶ್ವಾಸ ತುಂಬಿದೆ. ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಆರ್ಸಿಬಿ ತಂಡದ ಅದ್ಭುತ ಪ್ರದರ್ಶನವೇ ಈ ಅಭಿಮಾನಿ ಬಳಗದ ಹೆಚ್ಚಳಕ್ಕೆ ಕಾರಣ.

2025 ರ ಐಪಿಎಲ್ (IPL 2025) ಪ್ಲೇಆಫ್ ಪಂದ್ಯಗಳು ಆರಂಭವಾಗುವುದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ತನ್ನ ಮೊದಲ ಐಪಿಎಲ್ ಪ್ರಶಸ್ತಿಗಾಗಿ ಕಾಯುತ್ತಿರುವ ಆರ್‌ಸಿಬಿ ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ತನ್ನ ಕೊನೆಯ ಲೀಗ್ ಪಂದ್ಯವನ್ನು ಮೇ 27 ರಂದು ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಆಡಲಿದೆ. ಆರ್‌ಸಿಬಿ ಈ ಪಂದ್ಯವನ್ನು ಗೆಲ್ಲುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆಯುವ ಇರಾದೆಯಲ್ಲಿದೆ. ಆದರೆ ಈ ಪಂದ್ಯಕ್ಕೂ ಮುಂಚೆಯೇ ಆರ್ಸಿಬಿ ಎಲ್ಲಾ ತಂಡಗಳನ್ನು ಹಿಂದಿಕ್ಕಿದೆ. ವಾಸ್ತವವಾಗಿ ಅಭಿಮಾನಿಗಳ ಸಂಖ್ಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲ್ಲಾ ತಂಡಗಳನ್ನು ಮೀರಿಸಿದೆ.
ಆರ್‌ಸಿಬಿಗೆ 20 ಮಿಲಿಯನ್ ಫಾಲೋವರ್ಸ್
ಈ ಸೀಸನ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ತಂಡದ ಅಭಿಮಾನಿಗಳ ಬಳಗ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಇನ್ಸ್ಟಾಗ್ರಾಮ್ ನಲ್ಲಿ ರೆಡ್ ಆರ್ಮಿಯ ಅಭಿಮಾನಿಗಳ ಸಂಖ್ಯೆ 20 ಮಿಲಿಯನ್ ಅಂದರೆ 2 ಕೋಟಿ ತಲುಪಿದೆ. ಈ ವಿಷಯದಲ್ಲಿ ಆರ್ಸಿಬಿ ಎಲ್ಲಾ ತಂಡಗಳಿಗಿಂತ ಬಹಳ ಮುಂದಿದೆ. ಆರಂಭದಿಂದಲೂ ಆರ್‌ಸಿಬಿ ತಂಡದಲ್ಲೇ ಆಡುತ್ತಿರುವ ವಿರಾಟ್ ಕೊಹ್ಲಿ, ಈ ಸೀಸನ್‌ನಲ್ಲಿ ಬ್ಯಾಟಿಂಗ್‌ನಲ್ಲಿ ಸಾಕಷ್ಟು ರನ್ ಗಳಿಸುತ್ತಿದ್ದಾರೆ. ಬಹುಶಃ ಇದೇ ಕಾರಣಕ್ಕೆ ತಂಡದ ಅಭಿಮಾನಿಗಳು ನಿರಂತರವಾಗಿ ಹೆಚ್ಚುತ್ತಿದ್ದಾರೆ.
𝟐𝟎 𝐌𝐢𝐥𝐥𝐢𝐨𝐧 𝐦𝐨𝐫𝐞 𝐫𝐞𝐚𝐬𝐨𝐧𝐬 𝐭𝐨 #𝐏𝐥𝐚𝐲𝐁𝐨𝐥𝐝! 💪❤️
To the 12th Man Army that believed in us from the start, and to everyone who joined along the way, we’re forever grateful for your unconditional love! 🥹🙏
We’ll keep the content game 🔝 notch for you, as… pic.twitter.com/JrKE3CjZZx
— Royal Challengers Bengaluru (@RCBTweets) May 26, 2025
ಮುಂಬೈಗೆ ಮೂರನೇ ಸ್ಥಾನ
ಇನ್ನು ಈ ವಿಚಾರದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡನೇ ಸ್ಥಾನದಲ್ಲಿದ್ದು, 18.6 ಮಿಲಿಯನ್ ಅಭಿಮಾನಿಗಳನ್ನು ಹೊಂದಿದೆ. ಅಭಿಮಾನಿಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಮೂರನೇ ಸ್ಥಾನದಲ್ಲಿದ್ದು, ಇನ್ಸ್ಟಾಗ್ರಾಮ್ನಲ್ಲಿ 18 ಮಿಲಿಯನ್ ಅಭಿಮಾನಿಗಳನ್ನು ಹೊಂದಿದೆ. ನಾಲ್ಕನೇ ಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಕೇವಲ 7.5 ಮಿಲಿಯನ್ ಅಭಿಮಾನಿಗಳಿದ್ದಾರೆ. ಆ ನಂತರದ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಮ್ನಲ್ಲಿ 5.4 ಮಿಲಿಯನ್ ಅಭಿಮಾನಿಗಳನ್ನು ಹೊಂದಿದೆ.
ಇದಲ್ಲದೆ, ರಾಜಸ್ಥಾನ ರಾಯಲ್ಸ್ ತಂಡವು 5.2 ಮಿಲಿಯನ್ ಅಭಿಮಾನಿಗಳನ್ನು ಹೊಂದಿದ್ದರೆ, ಗುಜರಾತ್ ಟೈಟನ್ಸ್ 4.9 ಮಿಲಿಯನ್ ಅಭಿಮಾನಿಗಳನ್ನು ಹೊಂದಿದೆ. ದೆಹಲಿ ಕ್ಯಾಪಿಟಲ್ಸ್ 4.6 ಮಿಲಿಯನ್ ಅಭಿಮಾನಿಗಳನ್ನು ಹೊಂದಿದ್ದು, ಪಂಜಾಬ್ ಕಿಂಗ್ಸ್ 4.1 ಮಿಲಿಯನ್ ಅಭಿಮಾನಿಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹೊಂದಿದೆ. ಈ ವಿಷಯದಲ್ಲಿ ಕೊನೆಯ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಇನ್ಸ್ಟಾಗ್ರಾಮ್ನಲ್ಲಿ ಕೇವಲ 3.6 ಮಿಲಿಯನ್ ಅಭಿಮಾನಿಗಳನ್ನು ಹೊಂದಿದೆ.
IPL 2025: 83 ರನ್ಗಳಿಂದ ಸೋತ ಗುಜರಾತ್; ಆರ್ಸಿಬಿಗಿದೆ ಅಗ್ರಸ್ಥಾನಕ್ಕೇರುವ ಅವಕಾಶ..!
ಈ ಸೀಸನ್‌ನಲ್ಲಿ ಬೆಂಗಳೂರಿನ ಪ್ರದರ್ಶನ
ಮೊದಲ ಪ್ರಶಸ್ತಿಗಾಗಿ ಕಾಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಸೀಸನ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆರ್‌ಸಿಬಿ ಇಲ್ಲಿಯವರೆಗೆ 13 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 8 ರಲ್ಲಿ ಗೆದ್ದು 4 ರಲ್ಲಿ ಸೋತಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದಾಗಿ ರದ್ದಾಯಿತು. ಹೀಗಾಗಿ 17 ಅಂಕಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆರ್‌ಸಿಬಿಯ ಮುಂದಿನ ಪಂದ್ಯ ಮೇ 27 ರಂದು ಎಲ್‌ಎಸ್‌ಜಿ ವಿರುದ್ಧ ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:35 pm, Mon, 26 May 25
