AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

Royal Challengers Bengaluru IPL 2026 Fixtures: ಬಿಸಿಸಿಐ 19ನೇ ಆವೃತ್ತಿಯ ಐಪಿಎಲ್ ವೇಳಾಪಟ್ಟಿ ಪ್ರಕಟಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಲೀಗ್ ಹಂತದಲ್ಲಿ 14 ಪಂದ್ಯಗಳನ್ನಾಡಲಿದೆ. ಇದರಲ್ಲಿ 7 ಪಂದ್ಯಗಳು ತವರು ಮೈದಾನದಲ್ಲಿ (ಬೆಂಗಳೂರು, ರಾಯ್ಪುರ) ಮತ್ತು 7 ಪಂದ್ಯಗಳು ದೂರದ ಮೈದಾನದಲ್ಲಿ ನಡೆಯಲಿವೆ. ಮೊದಲ ಪಂದ್ಯ ಮಾರ್ಚ್ 28 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಬೆಂಗಳೂರಿನಲ್ಲಿ ನಡೆಯಲಿದೆ. ಆರ್‌ಸಿಬಿ ತನ್ನ ಎರಡು ತವರು ಮೈದಾನಗಳಾದ ಚಿನ್ನಸ್ವಾಮಿ ಮತ್ತು ರಾಯ್‌ಪುರ ಕ್ರೀಡಾಂಗಣಗಳಲ್ಲಿ ಪಂದ್ಯಗಳನ್ನು ಆಡಲಿದೆ.

IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ
Rcb 2026
ಪೃಥ್ವಿಶಂಕರ
|

Updated on: Mar 26, 2026 | 10:48 PM

Share

19ನೇ ಆವೃತ್ತಿಯ ಐಪಿಎಲ್​ನ (IPL 2026) ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಅದರಂತೆ ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್​ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿವೆ. ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಈ 70 ಪಂದ್ಯಗಳಲ್ಲಿ ಆರ್​ಸಿಬಿ ಒಟ್ಟು 14 ಪಂದ್ಯಗಳನ್ನು ಆಡಲಿದೆ. ಈ 14 ಪಂದ್ಯಗಳಲ್ಲಿ 7 ಪಂದ್ಯಗಳು ಆರ್​ಸಿಬಿಯ ತವರು ಮೈದಾನದಲ್ಲಿ ನಡೆದರೆ, ಉಳಿದ 7 ಪಂದ್ಯಗಳು ಎದುರಾಳಿ ತಂಡದ ತವರು ಮೈದಾನದಲ್ಲಿ ನಡೆಯಲಿವೆ.

ಈ ಆವೃತ್ತಿಯಲ್ಲಿ ಆರ್​ಸಿಬಿ ಎರಡು ತವರು ತಂಡಗಳನ್ನು ಘೋಷಿಸಿಕೊಂಡಿದೆ. ಅದರಂತೆ ಆರ್​ಸಿಬಿ, 5 ಪಂದ್ಯಗಳನ್ನು ತನ್ನ ಅಧಿಕೃತ ತವರು ಮೈದಾನವಾದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಉಳಿದ ಎರಡು ಪಂದ್ಯಗಳನ್ನು ಹೊಸ ತವರು ಮೈದಾನ ಎನಿಸಿಕೊಂಡಿರುವ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಡಲಿದೆ.

ಯಾವ ತಂಡದ ವಿರುದ್ಧ ಎಷ್ಟು ಪಂದ್ಯಗಳನ್ನಾಡಲಿದೆ?

ಉಳಿದಂತೆ ಈ 14 ಲೀಗ್ ಪಂದ್ಯಗಳಲ್ಲಿ ಆರ್​ಸಿಬಿ ಕೆಲವು ತಂಡಗಳ ವಿರುದ್ಧ 2 ಪಂದ್ಯಗಳನ್ನು ಆಡಿದರೆ, ಇನ್ನು ಕೆಲವು ತಂಡಗಳ ವಿರುದ್ಧ ಕೇವಲ 1 ಪಂದ್ಯವನ್ನು ಆಡಲಿದೆ. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್, ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್‌, ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ ಆರ್​ಸಿಬಿ ತಲಾ 2 ಪಂದ್ಯಗಳನ್ನು ಆಡಲಿದೆ. ಉಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ತಲಾ ಒಂದು ಪಂದ್ಯವನ್ನು ಆಡಲಿದೆ.

IPL 2026: 12 ಸ್ಥಳ, 50 ಪಂದ್ಯಗಳು; ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಆರ್​ಸಿಬಿ ಲೀಗ್ ಹಂತದ ವೇಳಾಪಟ್ಟಿ

1. ಮಾರ್ಚ್ 28 (ಶನಿವಾರ): ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

2. ಏಪ್ರಿಲ್ 05 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

3. ಏಪ್ರಿಲ್ 10 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ – ಗುವಾಹಟಿ (ಸಂಜೆ 7:30)

4. ಏಪ್ರಿಲ್ 12 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)

5. ಏಪ್ರಿಲ್ 15 (ಬುಧವಾರ): ಲಕ್ನೋ ಸೂಪರ್‌ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

6. ಏಪ್ರಿಲ್ 18 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಮಧ್ಯಾಹ್ನ 3:30)

7. ಏಪ್ರಿಲ್ 24 (ಶುಕ್ರವಾರ): ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

8. ಏಪ್ರಿಲ್ 27 (ಸೋಮವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)

9. ಏಪ್ರಿಲ್ 30 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)

10. ಮೇ 07 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್‌ಜೈಂಟ್ಸ್ – ಲಕ್ನೋ (ಸಂಜೆ 7:30)

11. ಮೇ 10 (ಭಾನುವಾರ): ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)

12. ಮೇ 13 (ಬುಧವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)

13. ಮೇ 17 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಮಧ್ಯಾಹ್ನ 3:30)

14. ಮೇ 22 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು