AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಗೋ ಗ್ರೀನ್ ಅಭಿಯಾನ; ಆರ್​ಸಿಬಿಯಿಂದ ಬೆಂಗಳೂರಿನ 3 ಕೆರೆಗಳಿಗೆ ಮರುಜೀವ..! ವಿಡಿಯೋ ನೋಡಿ

RCB: ಕಳೆದ ಬಾರಿ ಆರ್​ಸಿಬಿ ತನ್ನ ಗೋ ಗ್ರೀನ್ ಅಭಿಯಾನದಡಿಯಲ್ಲಿ ಬೆಂಗಳೂರಿನ ಮೂರು ಕೆರೆಗಳನ್ನು ಪುನರುಜ್ಜೀವನಗೊಳಿಸುವುದಕ್ಕೆ ಮುಂದಾಗಿತ್ತು. ಇದೀಗ ಆರ್​ಸಿಬಿ ತಾನು ಕೈಗೆತ್ತಿಕೊಂಡಿದ್ದ ಕೆಲಸವನ್ನು ವರ್ಷದೊಳಗೆ ಪೂರೈಸಿದ್ದು ಅದರ ವಿಡಿಯೋವನ್ನು ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದೆ.

RCB: ಗೋ ಗ್ರೀನ್ ಅಭಿಯಾನ; ಆರ್​ಸಿಬಿಯಿಂದ ಬೆಂಗಳೂರಿನ 3 ಕೆರೆಗಳಿಗೆ ಮರುಜೀವ..! ವಿಡಿಯೋ ನೋಡಿ
ಆರ್​ಸಿಬಿ ಗೋ ಗ್ರೀನ್ ಅಭಿಯಾನ
ಪೃಥ್ವಿಶಂಕರ
|

Updated on:Apr 19, 2024 | 10:11 PM

Share

17ನೇ ಆವೃತ್ತಿಯ ಐಪಿಎಲ್​ನಲ್ಲಿ (IPL 2024) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರದರ್ಶನ ಅಷ್ಟೇನೂ ಹೇಳಿಕೊಳ್ಳುವಂತಿಲ್ಲ. ತಂಡ ಇದುವರೆಗೆ ಆಡಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಸೋತಿದ್ದು, ಏಕೈಕ ಗೆಲುವಿನೊಂದಿಗೆ 2 ಅಂಕಗಳೊಂದಿಗೆ ಪ್ರಸ್ತುತ 10 ತಂಡಗಳ ಪೈಕಿ ಕೊನೆಯ ಸ್ಥಾನದಲ್ಲಿದೆ. ಮುಂಬರುವ 1 ಅಥವಾ 2 ಪಂದ್ಯಗಳಲ್ಲಿ ಆರ್​ಸಿಬಿಯ ಪ್ರದರ್ಶನ ಇದೇ ರೀತಿ ಮುಂದುವರಿದರೆ ಐಪಿಎಲ್ ಪ್ರಶಸ್ತಿ ಗೆಲ್ಲುವ ತಂಡದ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಲಿದೆ. ಅದಾಗ್ಯೂ ಆರ್​ಸಿಬಿ ಕ್ರಿಕೆಟ್ ಮೈದಾನದಿಂದ ಹೊರಗೆ ಮಾಡುತ್ತಿರುವ ತನ್ನ ಉದ್ಧಾತ ಕಾರ್ಯಗಳಿಂದಾಗಿ ಕೋಟ್ಯಾಂತರ ಅಭಿಮಾನಿಗಳ ಹೃದಯ ಗೆದ್ದಿದೆ. ಇದೀಗ ಅಂತಹದ್ದೇ ಕೆಲಸದಿಂದಾಗಿ ಆರ್​ಸಿಬಿ ಮತ್ತೊಮ್ಮೆ ಎಲ್ಲರ ಮನ್ನಣೆಗೆ ಪಾತ್ರವಾಗಿದೆ.

‘ಗೋ ಗ್ರೀನ್’ ಅಭಿಯಾನ

ವಾಸ್ತವವಾಗಿ ಇದೇ ಭಾನುವಾರದಂದು ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ಆರ್​ಸಿಬಿ ತನ್ನ 8ನೇ ಪಂದ್ಯವನ್ನಾಡಲಿದೆ. ಈ ಪಂದ್ಯ ಆರ್​ಸಿಬಿಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಹಸಿರು ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ. ಆರ್​ಸಿಬಿ ಪ್ರತಿ ಸೀಸನ್​ನ ಒಂದು ಪಂದ್ಯದಲ್ಲಿ ಹಸಿರು ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯುತ್ತದೆ. ಅದರಂತೆ ಈ ಬಾರಿಯೂ ಆರ್​ಸಿಬಿ ತಮ್ಮ ಪದ್ಧತಿಯನ್ನು ಮುಂದುವರೆಸುತ್ತಿದೆ.

RCB: ಗೋ ಗ್ರೀನ್ ಅಭಿಯಾನ; ಆರ್​ಸಿಬಿಯಿಂದ ಬೆಂಗಳೂರಿನ 3 ಕೆರೆಗಳಿಗೆ ಮರುಜೀವ..! ವಿಡಿಯೋ ನೋಡಿ

ಆರ್​ಸಿಬಿ ತನ್ನ ಅಭಿಮಾನಿಗಳಲ್ಲಿ ಸ್ವಚ್ಛತೆ ಮತ್ತು ಹಸಿರು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಹಸಿರು ಜೆರ್ಸಿಯನ್ನು ಧರಿಸಿ ಒಂದು ಪಂದ್ಯವನ್ನು ಆಡುತ್ತದೆ. ಅದರಂತೆ ಕಳೆದ ಬಾರಿ ಆರ್​ಸಿಬಿ ತನ್ನ ಈ ಅಭಿಯಾನದಡಿಯಲ್ಲಿ ಬೆಂಗಳೂರಿನ ಮೂರು ಕೆರೆಗಳನ್ನು ಪುನರುಜ್ಜೀವನಗೊಳಿಸುವುದಕ್ಕೆ ಮುಂದಾಗಿತ್ತು. ಇದೀಗ ಆರ್​ಸಿಬಿ ತಾನು ಕೈಗೆತ್ತಿಕೊಂಡಿದ್ದ ಕೆಲಸವನ್ನು ವರ್ಷದೊಳಗೆ ಪೂರೈಸಿದ್ದು, ತನ್ನ ಸತ್ಕಾರ್ಯದ ವಿಡಿಯೋವನ್ನು ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದೆ.

ಪುನಶ್ಚೇತನ ಕಾರ್ಯ ಪೂರ್ಣ

ಮೇಲೆ ಹೇಳಿದಂತೆ ಆರ್​ಸಿಬಿ ತನ್ನ ‘ಗೋ ಗ್ರೀನ್’ ಅಭಿಯಾನದಡಿಯಲ್ಲಿ ಮೂರು ಕೆರೆಗಳನ್ನು ಪುನರುಜ್ಜೀವನಗೊಳಿಸಿದೆ. ಇಂಡಿಯಾ ಕೇರ್ಸ್ ಫೌಂಡೇಶನ್ ವರದಿಯ ಪ್ರಕಾರ, ಆರ್​ಸಿಬಿ ಕಣ್ಣೂರು ಕೆರೆಗೆ ನಾಗರಿಕ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಇಟ್ಟಗಲ್ಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಗಳ ಪುನಶ್ಚೇತನ ಕಾರ್ಯವನ್ನು ಪೂರ್ಣಗೊಳಿಸಿದೆ. ಆರ್‌ಸಿಬಿ ತನ್ನ ಬದ್ಧತೆಯ ಭಾಗವಾಗಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೆರೆ ಸುಧಾರಣೆ ಕಾಮಗಾರಿಯನ್ನು ಆರಂಭಿಸಿತ್ತು. ಅದರಂತೆ ಕೇವಲ ಅಂತರ್ಜಲ ಮತ್ತು ಮೇಲ್ಮೈ ನೀರಿನ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದ್ದ ಈ ಮೂರು ಕೆರೆಗಳನ್ನು ಅಭಿವೃದ್ಧಿಪಡಿಸಿದೆ.

ಸಾಮರ್ಥ್ಯ 17 ಎಕರೆಗಳಷ್ಟು ಹೆಚ್ಚಾಗಿದೆ

ವರದಿ ಪ್ರಕಾರ ಇಟ್ಟಗಲ್ಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಲ್ಲಿ 1.20 ಲಕ್ಷ ಟನ್‌ಗೂ ಹೆಚ್ಚು ಹೂಳು ಮತ್ತು ಮರಳನ್ನು ತೆಗೆಯಲಾಗಿದೆ. ಈ ಮಣ್ಣನ್ನು ಕೆರೆಗಳ ಸುತ್ತ ದಾರಿ ನಿರ್ಮಿಸಲು ಬಳಸಲಾಗಿದ್ದು, 52 ರೈತರು ತಮ್ಮ ಹೊಲಗಳಿಗೂ ಈ ಮಣ್ಣನ್ನು ಬಳಸಿಕೊಂಡಿದ್ದಾರೆ. ಇದರಿಂದಾಗಿ ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ 17 ಎಕರೆಗಳಷ್ಟು ಹೆಚ್ಚಾಗಿದೆ. ಜೀವವೈವಿಧ್ಯವನ್ನು ಸುಧಾರಿಸುವ ಉದ್ದೇಶದಿಂದ ಕಣ್ಣೂರು ಕೆರೆಯ ಸುತ್ತಲೂ ಔಷಧೀಯ ಸಸ್ಯಗಳ ಉದ್ಯಾನವನ, ಬಿದಿರಿನ ಉದ್ಯಾನವನ ಮತ್ತು ಚಿಟ್ಟೆ ಪಾರ್ಕ್‌ಗಳನ್ನು ನಿರ್ಮಿಸಲಾಗಿದೆ. ಆರ್​ಸಿಬಿಯ ಈ ಕೆಲಸಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದಿದ್ದರೂ ಕೋಟ್ಯಾಂತರ ಅಭಿಮಾನಿಗಳನ್ನು ಸಂಪಾಧಿಸಿರುವ ಆರ್​ಸಿಬಿ, ಈ ರೀತಿಯ ಸತ್ಕಾರ್ಯಗಳಿಂದಲೇ ಅಭಿಮಾನಿಗಳ ಮನದಲ್ಲಿ ಭದ್ರವಾಗಿ ನೆಲೆಯೂರಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Fri, 19 April 24

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ