
ಐಪಿಎಲ್ 2026 ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ರಜತ್ ಪಟಿದಾರ್ ನಾಯಕತ್ವದಲ್ಲಿ, ಬೆಂಗಳೂರು ತಂಡವು ತಾನು ಏಕೆ ಹಾಲಿ ಚಾಂಪಿಯನ್ ಎಂಬುದನ್ನು ಮತ್ತೊಮ್ಮೆ ಸಾಭೀತುಪಡಿಸಿತು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 250 ರನ್ ಕಲೆಹಾಕಿತು.ಇದು ಸೀಸನ್ನ ಅತ್ಯಧಿಕ ಮೊತ್ತವೂ ಆಗಿತ್ತು. ಟಿಮ್ ಡೇವಿಡ್ ಸೇರಿದಂತೆ ಎಲ್ಲಾ ಬ್ಯಾಟ್ಸ್‌ಮನ್‌ಗಳ ಸ್ಫೋಟಕ ಇನ್ನಿಂಗ್ಸ್ ನೆರವಿನಿಂದ ಆರ್‌ಸಿಬಿ ಈ ದಾಖಲೆಯ ಮೊತ್ತ ಕಲೆಹಾಕಿತು. ನಂತರ ಜಾಕೋಬ್ ಡಫಿ ಮತ್ತು ಭುವನೇಶ್ವರ್ ಕುಮಾರ್ ಸೇರಿದಂತೆ ತಂಡದ ಎಲ್ಲಾ ಬೌಲರ್‌ಗಳ ಸಾಂಘಿಕ ಪ್ರದರ್ಶನದಿಂದ ಗುರಿ ಬೆನ್ನಟ್ಟಿದ ಚೆನ್ನೈ ತಂಡವನ್ನು 207 ರನ್‌ಗಳಿಗೆ ಔಟ್ ಮಾಡಿ 43 ರನ್‌ಗಳ ಗೆಲುವು ಸಾಧಿಸಿತು.
ಚೆನ್ನೈ ಸೂಪರ್ ಕಿಂಗ್ಸ್ 207 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 43 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಆರ್‌ಸಿಬಿ ಪರ ಭುವನೇಶ್ವರ ಕುಮಾರ್ ಅತಿ ಹೆಚ್ಚು ಅಂದರೆ ಮೂರು ವಿಕೆಟ್ ಪಡೆದರು. ಕೃನಾಲ್ ಪಾಂಡ್ಯ, ಭುವನೇಶ್ವರ ಕುಮಾರ್ ಮತ್ತು ಅಭಿನಂದನ್ ಸಿಂಗ್ ತಲಾ ಎರಡು ವಿಕೆಟ್ ಪಡೆದರು.
ಚೆನ್ನೈ ಸೂಪರ್ ಕಿಂಗ್ಸ್ 190 ರನ್‌ಗಳಿಗೆ ಒಂಬತ್ತನೇ ವಿಕೆಟ್ ಕಳೆದುಕೊಂಡಿತು. ನೂರ್ ಅಹ್ಮದ್ 8 ಎಸೆತಗಳಲ್ಲಿ 8 ರನ್ ಗಳಿಸಿ ಔಟಾದರು.
ಚೆನ್ನೈ ಸೂಪರ್ ಕಿಂಗ್ಸ್ 14 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 157 ರನ್ ಗಳಿಸಿದೆ. ಪ್ರಶಾಂತ್ ವೀರ್ ಮತ್ತು ಜೇಮೀ ಓವರ್ಟನ್ ಬಲವಾದ ಜೊತೆಯಾಟವನ್ನು ನಿರ್ಮಿಸುತ್ತಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ 12 ಓವರ್‌ಗಳಲ್ಲಿ 6 ವಿಕೆಟ್‌ಗೆ 136 ರನ್ ಗಳಿಸಿದೆ. ಪ್ರಶಾಂತ್ ವೀರ್ 17 ಮತ್ತು ಜೇಮೀ ಓವರ್ಟನ್ 24 ರನ್ ಗಳಿಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅರ್ಧದಷ್ಟು ಆಟಗಾರರು 84 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದ್ದಾರೆ. ಕಾರ್ತಿಕ್ ಶರ್ಮಾ 3 ಎಸೆತಗಳಲ್ಲಿ 6 ರನ್ ಗಳಿಸಿ ಔಟಾದರು. ಕೃನಾಲ್ ಪಾಂಡ್ಯ ಒಂದೇ ಓವರ್ ನಲ್ಲಿ ಎರಡು ವಿಕೆಟ್ ಕಬಳಿಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ 77 ರನ್‌ಗಳಿಗೆ ನಾಲ್ಕನೇ ವಿಕೆಟ್ ಕಳೆದುಕೊಂಡಿತು. ಸರ್ಫರಾಜ್ ಖಾನ್ 50 ರನ್‌ಗಳಿಗೆ ಔಟಾದರು.
ಸರ್ಫರಾಜ್ ಖಾನ್ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮತ್ತೆ ಆಟಕ್ಕೆ ಕರೆತರಲು ಎದುರು ನೋಡುತ್ತಿರುವ ಅವರಿಗೆ ಇನ್ನೊಂದು ಕಡೆಯಿಂದ ಬೆಂಬಲದ ಅಗತ್ಯವಿದೆ.
ಚೆನ್ನೈ ಸೂಪರ್ ಕಿಂಗ್ಸ್ 30 ರನ್‌ಗಳಿಗೆ ಮೂರನೇ ವಿಕೆಟ್ ಕಳೆದುಕೊಂಡಿತು. ಸಂಜು ಸ್ಯಾಮ್ಸನ್ 5 ಎಸೆತಗಳಲ್ಲಿ 9 ರನ್‌ಗಳಿಗೆ ಔಟಾದರು. ಈ ದೊಡ್ಡ ರನ್ ಚೇಸಿಂಗ್‌ನಲ್ಲಿ ಚೆನ್ನೈ ಇನ್ನಿಂಗ್ಸ್ ಕುಸಿದಿದೆ.
ಚೆನ್ನೈ ಸೂಪರ್ ಕಿಂಗ್ಸ್ 10 ರನ್‌ಗಳಿಗೆ ಎರಡನೇ ವಿಕೆಟ್ ಕಳೆದುಕೊಂಡಿತು, ಆಯುಷ್ ಮ್ಹಾತ್ರೆ 3 ಎಸೆತಗಳಲ್ಲಿ 1 ರನ್ ಗಳಿಸಿ ಔಟಾದರು.
ಚೆನ್ನೈ ಸೂಪರ್ ಕಿಂಗ್ಸ್ ಕೇವಲ 9 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು, ನಾಯಕ ರುತುರಾಜ್ ಗಾಯಕ್ವಾಡ್ ಕೇವಲ 7 ರನ್‌ಗಳಿಗೆ ಔಟಾದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇನ್ನಿಂಗ್ಸ್ ಪೂರ್ಣಗೊಂಡಿದ್ದು, ತಂಡವು 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 250 ರನ್ ಗಳಿಸಿದೆ. ಟಿಮ್ ಡೇವಿಡ್ ಅಜೇಯ 70, ದೇವದತ್ ಪಡಿಕ್ಕಲ್ 50 ಮತ್ತು ರಜತ್ ಪಾಟಿದಾರ್ ಅಜೇಯ 48 ರನ್ ಗಳಿಸಿದರು. ಫಿಲ್ ಸಾಲ್ಟ್ ಕೂಡ 46 ರನ್ ಗಳಿಸಿದರು.
ಟಿಮ್ ಡೇವಿಡ್ ಕೇವಲ 21 ಎಸೆತಗಳಲ್ಲಿ ಆರು ಸಿಕ್ಸರ್‌ಗಳೊಂದಿಗೆ ಅರ್ಧಶತಕ ಪೂರೈಸಿದರು. ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 225 ರನ್‌ಗಳನ್ನು ತಲುಪಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 172 ರನ್ ಗಳಿಸಿದೆ. ರಜತ್ ಪಾಟಿದಾರ್ 14 ಎಸೆತಗಳಲ್ಲಿ 40 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಟಿಮ್ ಡೇವಿಡ್ 2 ರನ್ ಗಳಿಸಿ ಅವರಿಗೆ ಬೆಂಬಲ ನೀಡುತ್ತಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 151 ರನ್‌ಗಳಿಗೆ ನಿರ್ಣಾಯಕ ವಿಕೆಟ್ ಕಳೆದುಕೊಂಡಿತು. ದೇವದತ್ ಪಡಿಕ್ಕಲ್ 29 ಎಸೆತಗಳಲ್ಲಿ 50 ರನ್ ಗಳಿಸಿ ಜೇಮೀ ಓವರ್ಟನ್ಗೆ ಬಲಿಯಾದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೇವಲ 13.5 ಓವರ್‌ಗಳಲ್ಲಿ 150 ರನ್‌ಗಳ ಗಡಿ ತಲುಪಿದ್ದು, ದೊಡ್ಡ ಮೊತ್ತವನ್ನು ಗಳಿಸುವ ಗುರಿಯನ್ನು ಹೊಂದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು 93 ರನ್‌ಗಳಿಗೆ ಎರಡನೇ ವಿಕೆಟ್ ಕಳೆದುಕೊಂಡಿತು. ಫಿಲ್ ಸಾಲ್ಟ್ 30 ಎಸೆತಗಳಲ್ಲಿ ನಿರ್ಣಾಯಕ 46 ರನ್ ಗಳಿಸಿ ಔಟಾದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿದೆ. ಫಿಲ್ ಸಾಲ್ಟ್ 28 ರನ್ ಗಳೊಂದಿಗೆ ಮತ್ತು ದೇವದತ್ ಪಡಿಕ್ಕಲ್ 2 ರನ್ ಗಳೊಂದಿಗೆ ಕ್ರೀಸ್ ನಲ್ಲಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 37 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ವಿರಾಟ್ ಕೊಹ್ಲಿ 28 ರನ್‌ಗಳಿಗೆ ಔಟಾದರು.
ಆರ್‌ಸಿಬಿ ಎಚ್ಚರಿಕೆಯ ಆರಂಭವನ್ನೇ ನೀಡಿದೆ. ಮೊದಲ ಎರಡು ಓವರ್‌ಗಳಲ್ಲಿ ಕೇವಲ 11 ರನ್‌ಗಳು ಮಾತ್ರ ಬಂದಿವೆ. ವಿರಾಟ್ ಕೊಹ್ಲಿ ಅಥವಾ ಫಿಲ್ ಸಾಲ್ಟ್ ಇನ್ನೂ ಬೌಂಡರಿ ಬಾರಿಸಿಲ್ಲ.
ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಕೋಬ್ ಡಫಿ.
ರಿತುರಾಜ್ ಗಾಯಕ್‌ವಾಡ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಪ್ರಶಾಂತ್ ವೀರ್, ಜೇಮಿ ಓವರ್‌ಟನ್, ಮ್ಯಾಟ್ ಹೆನ್ರಿ, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.
ಟಾಸ್ ಗೆದ್ದ ಸಿಎಸ್‌ಕೆ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ.
ಲಕ್ನೋ ಸೂಪರ್‌ಜೈಂಟ್ಸ್ 102 ರನ್‌ಗಳಿಗೆ ಮೂರನೇ ವಿಕೆಟ್ ಕಳೆದುಕೊಂಡಿತು. ಆಯುಷ್ ಬದೋನಿ 12 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.
ಬೆಂಗಳೂರು ಮತ್ತು ಚೆನ್ನೈ ನಡುವೆ ಒಟ್ಟು 35 ಪಂದ್ಯಗಳು ನಡೆದಿದ್ದು, ಐದು ಬಾರಿಯ ಚಾಂಪಿಯನ್ ಚೆನ್ನೈ 21 ಪಂದ್ಯಗಳಲ್ಲಿ ಗೆದ್ದಿದ್ದರೆ, ಬೆಂಗಳೂರು ಕೇವಲ 13 ಪಂದ್ಯಗಳಲ್ಲಿ ಗೆದ್ದಿದೆ. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು.
Published On - 6:48 pm, Sun, 5 April 26