IPL 2021: RR ಮತ್ತು CSK ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರರು ಅಲಭ್ಯ
IPL 2021 New Schedule: ಈ ಸರಣಿ ಬಳಿಕ ಆಟಗಾರರು ವಿಶ್ರಾಂತಿ ಬಯಸಿದರೆ ಅಥವಾ ಕೊರೋನಾಂತಕದ ಕಾರಣದಿಂದ ಹೊರಗುಳಿಯುವ ಸಾಧ್ಯತೆ ಕೂಡ ಇದೆ.
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ನ ದ್ವಿತಿಯಾರ್ಧ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15 ರವರೆಗೆ ( Ipl 2021 New Schedule) ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ನಡೆಯಲಿದೆ. ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿನ ಮೂರು ಕ್ರಿಕೆಟ್ ಸ್ಡೇಡಿಯಂನಲ್ಲಿ ಉಳಿದ 31 ಪಂದ್ಯಗಳು ನಡೆಯಲಿವೆ. ಆದರೆ ಈ ವೇಳೆ ಕೆಲ ಸ್ಟಾರ್ ಆಟಗಾರರು ಅಲಭ್ಯರಾಗುವುದು ಬಹುತೇಕ ಖಚಿತ ಎಂಬ ಮಾಹಿತಿಯೊಂದು ಹೊರಬಿದ್ದಿದೆ.
ಕೆಲ ವಿದೇಶಿ ಆಟಗಾರರು ಇದೇ ಸಮಯದಲ್ಲಿ ರಾಷ್ಟ್ರೀಯ ತಂಡಗಳಲ್ಲಿ ಕಾಣಿಸಿಕೊಳ್ಳಬೇಕಿರುವುದರಿಂದ ಐಪಿಎಲ್ನ ಉಳಿದ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ. ಈ ಬಗ್ಗೆ ಫ್ರಾಂಚೈಸಿಗಳು ಕೂಡ ಬಿಸಿಸಿಐಗೆ ತಿಳಿಸಿದ್ದು, ಅದರಂತೆ ಶನಿವಾರ ನಡೆದ ಸಭೆಯಲ್ಲಿ ಬಿಸಿಸಿಐ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಐಪಿಎಲ್‌ನಲ್ಲಿ ವಿದೇಶಿ ಆಟಗಾರರ ಭಾಗವಹಿಸುವಿಕೆಗಾಗಿ ಇತರ ದೇಶಗಳ ಮಂಡಳಿಗಳೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಲು ಬಿಸಿಸಿಐ ನಿರ್ಧರಿಸಿದೆ.
ಈ ಹಿಂದೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ತಮ್ಮ ಆಟಗಾರರು ಐಪಿಎಲ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿತ್ತು. ಇನ್ನು ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಇನ್ನೂ ಕೂಡ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸಿಲ್ಲ. ಹಲವು ಆಸೀಸ್ ಆಟಗಾರರು ರಾಷ್ಟ್ರೀಯ ತಂಡದಿಂದ ಹೊರಗುಳಿದಿರುವುದು ಇದೀಗ ಚರ್ಚಾ ವಿಷಯವಾಗಿದೆ. ಹೀಗಾಗಿ ಈ ಬಗ್ಗೆ ಕಠಿಣ ನಿರ್ಧಾರ ತೆಗೆದುಕೊಳ್ಳಲು ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಚಿಂತಿಸಿದೆ.
ಈಗಾಗಲೇ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಮ್ಮ ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ತಿಳಿಸಿದ್ದು, ಹೀಗಾಗಿ ರಾಷ್ಟ್ರೀಯ ತಂಡದಲ್ಲಿರುವ ಪ್ರಮುಖ ಪ್ಲೇಯರ್ಸ್ ಐಪಿಎಲ್ನ ದ್ವಿತಿಯಾರ್ಧದಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಇಂಗ್ಲೆಂಡ್ ತಂಡ ಸೆಪ್ಟೆಂಬರ್ 10 ರಿಂದ14 ರವರೆಗೆ ಭಾರತದ ವಿರುದ್ಧ ಐದು ಪಂದ್ಯಗಳ ಸರಣಿಯ ಕೊನೆಯ ಟೆಸ್ಟ್ ಆಡಲಿದೆ. ಈ ಸರಣಿ ಬಳಿಕ ಆಟಗಾರರು ವಿಶ್ರಾಂತಿ ಬಯಸಿದರೆ ಅಥವಾ ಕೊರೋನಾಂತಕದ ಕಾರಣದಿಂದ ಹೊರಗುಳಿಯುವ ಸಾಧ್ಯತೆ ಕೂಡ ಇದೆ. ಒಂದು ವೇಳೆ ಇಂಗ್ಲೆಂಡ್ ಆಟಗಾರರು ಐಪಿಎಲ್‌ನಲ್ಲಿ ಕಾಣಿಸಿಕೊಂಡರೂ ಅಕ್ಟೋಬರ್ ಮೊದಲ ವಾರದಲ್ಲೇ ಹಿಂತಿರಬೇಕಾಗುತ್ತದೆ. ಏಕೆಂದರೆ ಅಕ್ಟೋಬರ್ 14 ರಿಂದ ಇಂಗ್ಲೆಂಡ್ ಪಾಕಿಸ್ತಾನದ ವಿರುದ್ಧ ಟಿ20 ಸರಣಿಯನ್ನು ಆಡಬೇಕಿದೆ. ಹೀಗಾಗಿ ಇಂಗ್ಲೆಂಡ್ ತಂಡದಲ್ಲಿರುವ ರಾಷ್ಟ್ರೀಯ ಆಟಗಾರರ ಪಾಲ್ಗೊಳ್ಳುವಿಕೆ ಬಹುತೇಕ ಅನುಮಾನ.
ಹೀಗಾಗಿ ಪ್ರಸ್ತುತ ಐಪಿಎಲ್ ತಂಡದಲ್ಲಿ ಇಂಗ್ಲೆಂಡ್ನ ಸ್ಟಾರ್ ಆಟಗಾರರಾದ ಜೋಸ್ ಬಟ್ಲರ್, ಜೋಫ್ರಾ ಆರ್ಚರ್, ಮೊಯೀನ್ ಅಲಿ ಮತ್ತು ಸ್ಯಾಮ್ ಕರನ್ ಐಪಿಎಲ್ ಎರಡನೇ ಹಂತದಲ್ಲಿ ಕಣಕ್ಕಿಳಿಯುವುದು ಡೌಟ್. ಇವರಲ್ಲಿ ಬಟ್ಲರ್, ಜೋಫ್ರಾ ಆರ್ಚರ್ ರಾಜಸ್ಥಾನ ರಾಯಲ್ಸ್ ( Rajasthan Royals ) ತಂಡದ ಪರ ಆಡುತ್ತಿದ್ದರೆ, ಮೊಯೀನ್ ಅಲಿ ಮತ್ತು ಸ್ಯಾಮ್ ಕರನ್ CSK ಪರ ಆಡುತ್ತಿದ್ದಾರೆ. ಹೀಗಾಗಿ ಈ ಎರಡು ತಂಡಗಳು ಬದಲಿ ಆಟಗಾರರನ್ನು ಖರೀದಿಸುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ: ಕಡಿಮೆ ಬೆಲೆಯ ಪವರ್ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್ಟಾಪ್ನ್ನು ಚಾರ್ಜ್ ಮಾಡಬಹುದು
ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ
ಇದನ್ನೂ ಓದಿ: LICಯ ವಿಶೇಷ ಯೋಜನೆ: 200 ರೂ. ಹೂಡಿಕೆ ಮಾಡಿ, 28 ಲಕ್ಷ ರೂ. ಪಡೆಯಿರಿ
(RR most concerned, CSK also at loss: impact of rescheduled IPL 2021)