RR vs KKR Playing XI IPL 2022: ಸ್ಯಾಮ್ಸನ್ vs ಶ್ರೇಯಸ್: ಉಭಯ ತಂಡಗಳ ಪ್ಲೇಯಿಂಗ್ 11

| Updated By: ಝಾಹಿರ್ ಯೂಸುಫ್

Updated on: Apr 17, 2022 | 8:37 PM

IPL 2022: ಕಳೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ವೇಗಿ ಟ್ರೆಂಟ್ ಬೌಲ್ಟ್ ಆಡಿರಲಿಲ್ಲ. ಗಾಯದ ಸಮಸ್ಯೆಯಿಂದಾಗಿ ಕಳೆದ ಪಂದ್ಯದಿಂದ ಹೊರಗುಳಿದಿದ್ದರು.

RR vs KKR Playing XI IPL 2022: ಸ್ಯಾಮ್ಸನ್ vs ಶ್ರೇಯಸ್: ಉಭಯ ತಂಡಗಳ ಪ್ಲೇಯಿಂಗ್ 11
RR vs KKR Playing XI IPL 2022
Follow us on

ಐಪಿಎಲ್​ನ​ 30ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿದೆ. ಸೋಮವಾರ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಉಭಯ ತಂಡಗಳು ಗೆಲುವಿನ ಟ್ರ್ಯಾಕ್​ಗೆ ಮರಳುವ ಇರಾದೆಯಲ್ಲಿದೆ. ಎರಡೂ ತಂಡಗಳು ತಮ್ಮ ಕೊನೆಯ ಪಂದ್ಯದಲ್ಲಿ ಸೋತಿರುವ ಕಾರಣ ಈ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಿದೆ. ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ತಂಡವನ್ನು ಸನ್‌ರೈಸರ್ಸ್ ಹೈದರಾಬಾದ್ ಸೋಲಿಸಿದರೆ, ರಾಜಸ್ಥಾನವನ್ನು ಗುಜರಾತ್ ಟೈಟನ್ಸ್ ಸೋಲಿಸಿತು. ಹೀಗಾಗಿ ಈ ಪಂದ್ಯವು ಉಭಯ ತಂಡಗಳೂ ಮಹತ್ವದ ಪಂದ್ಯ ಎನಿಸಿಕೊಂಡಿದೆ. ಹೀಗಾಗಿ ಉಭಯ ತಂಡಗಳು ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯಲಿದೆ.

ಬೌಲ್ಟ್ ಕಂಬ್ಯಾಕ್:
ಕಳೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ವೇಗಿ ಟ್ರೆಂಟ್ ಬೌಲ್ಟ್ ಆಡಿರಲಿಲ್ಲ. ಗಾಯದ ಸಮಸ್ಯೆಯಿಂದಾಗಿ ಕಳೆದ ಪಂದ್ಯದಿಂದ ಹೊರಗುಳಿದಿದ್ದರು. ಬೌಲ್ಟ್ ಅನುಪಸ್ಥಿತಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕಾಡಿತ್ತು. ಹೀಗಾಗಿ ಬೌಲ್ಟ್ ಫಿಟ್ ಆಗಿದ್ದರೆ ತಂಡಕ್ಕೆ ಕಂಬ್ಯಾಕ್ ಮಾಡಲಿದ್ದಾರೆ. ಇದರಿಂದ ಜಿಮ್ಮಿ ನೀಶಮ್ ಪ್ಲೇಯಿಂಗ್ ಇಲೆವೆನ್ ಹೊರಗೆ ಹೋಗಬೇಕಾಗಬಹುದು. ಕಳೆದೆರಡು ಪಂದ್ಯಗಳಲ್ಲಿ ರಾಸಿ ವಾನ್ ಡೆರ್ ಡಸ್ಸೆನ್ ಅವಕಾಶ ಪಡೆದಿದ್ದರೂ ಪ್ರಭಾವಿಯಾಗಲು ಸಾಧ್ಯವಾಗಲಿಲ್ಲ. ಆದರೆ, ಸಂಜು ಸ್ಯಾಮ್ಸನ್ ರಾಸಿಗೆ ಮತ್ತೊಂದು ಅವಕಾಶ ನೀಡಬಹುದು.

ಕೆಕೆಆರ್​ನಲ್ಲಿ ಬದಲಾವಣೆ?
ಮತ್ತೊಂದೆಡೆ, ನಾವು ಕೋಲ್ಕತ್ತಾ ತಂಡವನ್ನು ನೋಡಿದರೆ, ಅದು ಇನ್ನೂ ಸರಿಯಾದ ಸಂಯೋಜನೆಯನ್ನು ಕಂಡುಕೊಂಡಿಲ್ಲ. ಕಳೆದ ಪಂದ್ಯದಲ್ಲಿ ತಂಡ ಕೆಲವು ಬದಲಾವಣೆಗಳನ್ನು ಮಾಡಿತ್ತು. ಅಜಿಂಕ್ಯ ರಹಾನೆ ಅವರನ್ನು ಕೈಬಿಟ್ಟ ನಂತರ ಆರೋನ್ ಫಿಂಚ್ ತಂಡಕ್ಕೆ ಆಯ್ಕೆಯಾದರು. ಅದೇ ಸಮಯದಲ್ಲಿ, ರಸಿಖ್ ಸಲಾಮ್ ಈ ಸೀಸನ್‌ನಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಅಮನ್ ಖಾನ್ ತಂಡದಲ್ಲಿ ಸ್ಥಾನ ಪಡೆದರು. ಇದಾಗ್ಯೂ ತಂಡದ ಪ್ರದರ್ಶನದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ಇದಾಗ್ಯೂ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರಿಗೆ ಹೆಚ್ಚಿನ ಅವಕಾಶಗಳನ್ನು ನೀಡುವ ಸಾಧ್ಯತೆಯಿದೆ. ಹೀಗಾಗಿ ಕೆಕೆಆರ್ ತಂಡದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆ ಕಡಿಮೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿರಲಿದೆ.

ರಾಜಸ್ಥಾನ್ ರಾಯಲ್ಸ್ – ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕುಲದೀಪ್ ಸೇನ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ, ರಾಸಿ ವ್ಯಾನ್ ಡೆರ್ ಡುಸ್ಸೆನ್.

ಕೋಲ್ಕತ್ತಾ ನೈಟ್ ರೈಡರ್ಸ್ – ಶ್ರೇಯಸ್ ಅಯ್ಯರ್ (ನಾಯಕ), ಆರೋನ್ ಫಿಂಚ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಅಮನ್ ಖಾನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ.

 

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ