AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸೋಲಿಗೆ ನೀವೇ ಕಾರಣ: ಹಾರ್ದಿಕ್ ಪಾಂಡ್ಯ ಆಕ್ರೋಶ

Rajasthan Royals vs Mumbai Indians: ಐಪಿಎಲ್​ನ 13ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 11 ಓವರ್​ಗಳಲ್ಲಿ 150 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ 11 ಓವರ್​ಗಳಲ್ಲಿ 123 ರನ್​ಗಳಿಸಿ ಸೋಲೊಪ್ಪಿಕೊಂಡಿತು. ಈ ಸೋಲಿನ ಬಳಿಕ ಮಾತನಾಡಿದ ಹಾರ್ದಿಕ್ ಪಾಂಡ್ಯ ಬೌಲರ್​ಗಳ ಕಳಪೆ ಪ್ರದರ್ಶನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಸೋಲಿಗೆ ನೀವೇ ಕಾರಣ: ಹಾರ್ದಿಕ್ ಪಾಂಡ್ಯ ಆಕ್ರೋಶ
Hardik Pandya
ಝಾಹಿರ್ ಯೂಸುಫ್
|

Updated on: Apr 08, 2026 | 8:03 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 11 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 150 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 11 ಓವರ್​ಗಳಲ್ಲಿ 123 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮುಂಬೈ ಪಡೆ 27 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ತಮ್ಮ ತಂಡದ ಬೌಲಿಂಗ್ ವಿಭಾಗದ ಪ್ರದರ್ಶನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪವರ್‌ಪ್ಲೇನಲ್ಲಿ ನಾವು ಅಂದುಕೊಂಡಂತೆ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ನಮ್ಮ ಬೌಲರ್‌ಗಳು ಈ ಸೋಲಿನ ಜವಾಬ್ದಾರಿಯನ್ನು ಹೊರಬೇಕಾಗಿದೆ. ಒಂದು ಬೌಲಿಂಗ್ ಘಟಕವಾಗಿ ನಾವು ನಿರೀಕ್ಷಿತ ಮಟ್ಟಕ್ಕೆ ತಲುಪಲಿಲ್ಲ. ನಮ್ಮ ಬೌಲರ್​ಗಳ ವಿರುದ್ಧ ಎದುರಾಳಿ ತಂಡದವರು ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದರು. ಹೀಗಾಗಿ ನಮ್ಮ ಸೋಲಿಗೆ ನಮ್ಮ ಬೌಲರ್​ಗಳೇ ನೇರ ಕಾರಣ ಎಂದರು.

ಅಷ್ಟೇ ಅಲ್ಲದೆ  “ನಾನು ಈ ಸೋಲನ್ನು ಬ್ಯಾಟರ್​ಗಳ ಮೇಲೆ ಹಾಕುವುದಿಲ್ಲ. ಖಂಡಿತವಾಗಿಯೂ ಇದು ಬೌಲಿಂಗ್ ಘಟಕದ ವೈಫಲ್ಯ. ಟಿ20 ಕ್ರಿಕೆಟ್‌ನಲ್ಲಿ ಒಂದೆರಡು ಸರಿಯಾದ ಎಸೆತಗಳನ್ನು ಹಾಕುವುದು ಮುಖ್ಯವಾಗುತ್ತದೆ. ನಾವು ಕೇವಲ 27 ರನ್‌ಗಳಿಂದ ಸೋತಿದ್ದೇವೆ ಎಂದರೆ, ಅದರರ್ಥ ನಾವು ಐದು ಎಸೆತಗಳನ್ನು ಸರಿಯಾಗಿ ಹಾಕಿದ್ದರೆ ಅಥವಾ ಐದು ಸಿಕ್ಸರ್‌ಗಳನ್ನು ತಡೆದಿದ್ದರೆ ಪಂದ್ಯ ನಮ್ಮದಾಗುತ್ತಿತ್ತು. ಆದರೆ ನಮ್ಮ ಬೌಲರ್​ಗಳು ಅಂತಹ ಎಸೆತಗಳನ್ನು ಸಹ ಎಸೆಯಲು ಕೂಡ ವಿಫಲರಾಗಿದ್ದಾರೆ ” ಎಂದು ಹಾರ್ದಿಕ್ ಪಾಂಡ್ಯ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಕಿರಿಯ ಬ್ಯಾಟರ್  ವೈಭವ್ ಸೂರ್ಯವಂಶಿ ಅವರ ಆರ್ಭಟವನ್ನು ಮುಕ್ತಕಂಠದಿಂದ ಶ್ಲಾಘಿಸಿದ ಹಾರ್ದಿಕ್ ಪಾಂಡ್ಯ. “15-16 ವರ್ಷದ ಹುಡುಗ ಅಷ್ಟು ಧೈರ್ಯದಿಂದ ಆಡುವುದನ್ನು ನೋಡುವುದು ಆಶ್ಚರ್ಯಕರವಾಗಿದೆ. ಪಂದ್ಯಕ್ಕೂ ಮುನ್ನವೇ ನಾವು ಅವರ ಬಗ್ಗೆ ಸಾಕಷ್ಟು ಚರ್ಚಿಸಿದ್ದೆವು. ಅವರಲ್ಲಿರುವ ಭಯವಿಲ್ಲದ ಆಟ ಮತ್ತು ಶಾಟ್‌ಗಳು ಅದ್ಭುತವಾಗಿವೆ. ಅವರಿಗೆ ಮುಂದಿನ ದಿನಗಳಲ್ಲಿ ಶುಭವಾಗಲಿ,” ಎಂದರು.

ಮುಂದಿನ ಸವಾಲು:

ಮುಂದಿನ ಪಂದ್ಯದಲ್ಲಿ ಮುಂಬೈ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಎದುರಿಸಲಿದೆ. ಈ ಬಗ್ಗೆ ಮಾತನಾಡಿದ ಪಾಂಡ್ಯ, “ನಡೆದ ತಪ್ಪುಗಳಿಂದ ಪಾಠ ಕಲಿಯುವುದು ಮುಖ್ಯ. ನಾಳೆ ಹೊಸ ಸೂರ್ಯೋದಯವಾಗಲಿದೆ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ಪಂದ್ಯಕ್ಕೆ ಸಿದ್ಧರಾಗುತ್ತೇವೆ,” ಎಂದು ಭರವಸೆ ನೀಡಿದರು.

ಇದನ್ನೂ ಓದಿ: ವೈಭವ್, ಯಶಸ್ವಿ ಸಿಡಿಲಬ್ಬರದ ನಡುವೆ RCB ದಾಖಲೆ ಸೇಫ್

ಏಪ್ರಿಲ್ 12 ರಂದು ನಡೆಯಲಿರುವ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅದಕ್ಕೂ ಮುನ್ನ ಆರ್​ಸಿಬಿ ತಂಡವು ಏಪ್ರಿಲ್ 10 ರಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ