ಐಪಿಎಲ್ 2024ರಲ್ಲಿ ರಾಜಸ್ಥಾನ ರಾಯಲ್ಸ್‌ನ ಅಮೋಘ ಪ್ರದರ್ಶನ ಮುಂದುವರಿದಿದೆ. ಟೂರ್ನಿಯ 38ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬಳಗ ಮುಂಬೈ ಇಂಡಿಯನ್ಸ್ ತಂಡವನ್ನು 9 ವಿಕೆಟ್ಗಳಿಂದ ಮಣಿಸುವ ಮೂಲಕ ಲೀಗ್ನಲ್ಲಿ 7ನೇ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 179 ರನ್ ಗಳಿಸಿತು. ಉತ್ತರವಾಗಿ ರಾಜಸ್ಥಾನ 18.4 ಓವರ್‌ಗಳಲ್ಲಿ ಈ ಗುರಿಯನ್ನು ಸಾಧಿಸಿತು. ಈ ಚೇಸಿಂಗ್ ವೇಳೆ ರಾಜಸ್ಥಾನ ಕೇವಲ ಒಂದು ವಿಕೆಟ್ ಕಳೆದುಕೊಂಡಿದ್ದು ದೊಡ್ಡ ವಿಷಯ. ಭರ್ಜರಿ ಶತಕ ಬಾರಿಸಿದ ಯಶಸ್ವಿ ಜೈಸ್ವಾಲ್ ರಾಜಸ್ಥಾನದ ಗೆಲುವಿನ ಹೀರೋ ಎನಿಸಿಕೊಂಡರು. ಜೈಸ್ವಾಲ್ 60 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 9 ಬೌಂಡರಿಗಳ ಸಹಿತ ಅಜೇಯ 104 ರನ್ ಬಾರಿಸಿದರೆ, ಅವರನ್ನು ಹೊರತುಪಡಿಸಿ, ಜೋಸ್ ಬಟ್ಲರ್ 25 ಎಸೆತಗಳಲ್ಲಿ 35 ರನ್, ಸಂಜು ಸ್ಯಾಮ್ಸನ್ ಔಟಾಗದೆ 38 ರನ್ ಗಳಿಸಿದರು.
180 ರನ್‌ಗಳ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18.4 ಓವರ್‌ಗಳಲ್ಲಿ ಬೆನ್ನಟ್ಟಿದೆ. ಈ ಚೇಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಅಜೇಯ 104 ರನ್ ಬಾರಿಸಿದರೆ ಸಂಜು ಸ್ಯಾಮ್ಸನ್ 28 ಎಸೆತಗಳಲ್ಲಿ 38 ರನ್ ಗಳಿಸಿ ಅಜೇಯರಾಗಿ ಉಳಿದರು. ಇದಕ್ಕೂ ಮುನ್ನ ಜೋಸ್ ಬಟ್ಲರ್ 35 ರನ್‌ಗಳ ಇನಿಂಗ್ಸ್ ಆಡಿದ್ದರು.
ಯಶಸ್ವಿ ಜೈಸ್ವಾಲ್ 59 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಇದರಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್‌ಗಳು ಸೇರಿವೆ.
ರಾಜಸ್ಥಾನ್ ರಾಯಲ್ಸ್ 16 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿದೆ. ಮುಂಬೈ ಇಂಡಿಯನ್ಸ್ ಇನ್ನೂ ವಿಕೆಟ್‌ಗಳ ಹುಡುಕಾಟದಲ್ಲಿದೆ. ಯಶಸ್ವಿ ಜೈಸ್ವಾಲ್ 95 ರನ್ ಹಾಗೂ ಸಂಜು ಸ್ಯಾಮ್ಸನ್ 24 ರನ್ ಗಳಿಸಿ ಆಡುತ್ತಿದ್ದಾರೆ.
ರಾಜಸ್ಥಾನ್ ರಾಯಲ್ಸ್ 14 ಓವರ್‌ಗಳ ನಂತರ 1 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 75 ರನ್ ಹಾಗೂ ಸಂಜು ಸ್ಯಾಮ್ಸನ್ 22 ರನ್ ಗಳಿಸಿ ಆಡುತ್ತಿದ್ದಾರೆ. ಇನ್ನು ರಾಜಸ್ಥಾನ ಗೆಲ್ಲಲು 36 ಎಸೆತಗಳಲ್ಲಿ 45 ರನ್‌ಗಳ ಅಗತ್ಯವಿದೆ.
ರಾಜಸ್ಥಾನ್ ರಾಯಲ್ಸ್ 11 ಓವರ್ ಮುಕ್ತಾಯಕ್ಕೆ 1 ವಿಕೆಟ್ ಕಳೆದುಕೊಂಡು 110 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 62 ರನ್ ಹಾಗೂ ಸಂಜು ಸ್ಯಾಮ್ಸನ್ 10 ರನ್ ಗಳಿಸಿ ಆಡುತ್ತಿದ್ದಾರೆ.
ಯಶಸ್ವಿ ಜೈಸ್ವಾಲ್ ಈ ಸೀಸನ್ನಲ್ಲಿ ತಮ್ಮ ಮೊದಲ ಅರ್ಧಶತಕವನ್ನು ಪೂರೈಸಿದ್ದಾರೆ. ಯಶಸ್ವಿ ಜೈಸ್ವಾಲ್ 31 ಎಸೆತಗಳಲ್ಲಿ 50 ರನ್‌ಗಳ ಗಡಿ ಮುಟ್ಟಿದರು.
ರಾಜಸ್ಥಾನ್ ರಾಯಲ್ಸ್ 74 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿದೆ. ಜೋಸ್ ಬಟ್ಲರ್ 35 ರನ್ ಗಳಿಸಿ ಔಟಾದರು.
ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಜೈಪುರದಲ್ಲಿ ತುಂತುರು ಮಳೆಯಾಗಿದ್ದು, ಪಂದ್ಯವನ್ನು ನಿಲ್ಲಿಸಲಾಗಿದೆ.
ಮೊದಲ 4 ಓವರ್‌ಗಳಲ್ಲಿ ರಾಜಸ್ಥಾನ್ ರಾಯಲ್ಸ್ ಯಾವುದೇ ವಿಕೆಟ್ ನಷ್ಟವಿಲ್ಲದೆ 35 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 19 ರನ್ ಹಾಗೂ ಜೋಸ್ ಬಟ್ಲರ್ 14 ರನ್ ಗಳಿಸಿ ಆಡುತ್ತಿದ್ದಾರೆ.
ರಾಜಸ್ಥಾನ್ ರಾಯಲ್ಸ್ ಮೊದಲ ಎರಡು ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 13 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 2 ರನ್ ಹಾಗೂ ಜೋಸ್ ಬಟ್ಲರ್ 11 ರನ್ ಗಳಿಸಿ ಆಡುತ್ತಿದ್ದಾರೆ.
ರಾಜಸ್ಥಾನ ವಿರುದ್ಧ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿದೆ.
ಮುಂಬೈ ಇಂಡಿಯನ್ಸ್ 176 ರನ್‌ಗಳಿಗೆ 7ನೇ ವಿಕೆಟ್ ಕಳೆದುಕೊಂಡಿದೆ. ತಿಲಕ್ ವರ್ಮಾ 45 ಎಸೆತಗಳಲ್ಲಿ 65 ರನ್ ಗಳಿಸಿ ಔಟಾದರು.
ಮುಂಬೈ ಇಂಡಿಯನ್ಸ್ ಐದನೇ ವಿಕೆಟ್ ಕಳೆದುಕೊಂಡಿದೆ. ನೆಹಾಲ್ ವಧೇರಾ 24 ಎಸೆತಗಳಲ್ಲಿ 49 ರನ್ ಗಳಿಸಿ ಔಟಾದರು. ಮುಂಬೈ ಸ್ಕೋರ್ 16.1 ಓವರ್‌ಗಳಲ್ಲಿ 151 ರನ್ ಆಗಿದೆ.
ತಿಲಕ್ ವರ್ಮಾ 38 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅರ್ಧಶತಕ ಪೂರೈಸಿದ್ದಾರೆ.
ಮುಂಬೈ ಇಂಡಿಯನ್ಸ್ 13 ಓವರ್‌ಗಳಲ್ಲಿ ಶತಕ ಪೂರೈಸಿದೆ. ತಿಲಕ್ ವರ್ಮಾ ಮತ್ತು ನೆಹಾಲ್ ವಧೇರಾ ಕ್ರೀಸ್‌ನಲ್ಲಿದ್ದಾರೆ. ತಿಲಕ್ ವರ್ಮಾ 37 ರನ್ ಹಾಗೂ ನೇಹಾಲ್ ವಧೇರಾ ಕೂಡ 18 ರನ್ ಗಳಿಸಿದ್ದಾರೆ.
ಮುಂಬೈ ಇಂಡಿಯನ್ಸ್ 52 ರನ್ ಗಳಿಸುವಷ್ಟರಲ್ಲಿ ನಾಲ್ಕನೇ ವಿಕೆಟ್ ಕಳೆದುಕೊಂಡಿದೆ. ಮೊಹಮ್ಮದ್ ನಬಿ 17 ಎಸೆತಗಳಲ್ಲಿ 23 ರನ್ ಗಳಿಸಿ ಔಟಾದರು. ಮೊಹಮ್ಮದ್ ನಬಿ ಅವರನ್ನು ಯುಜ್ವೇಂದ್ರ ಚಹಾಲ್ ಔಟ್ ಮಾಡಿದರು.
ಮುಂಬೈ ಇಂಡಿಯನ್ಸ್ ಮೊದಲ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 45 ರನ್ ಗಳಿಸಿದೆ. ತಿಲಕ್ ವರ್ಮಾ 6 ರನ್ ಹಾಗೂ ಮೊಹಮ್ಮದ್ ನಬಿ 20 ರನ್ ಗಳಿಸಿ ಆಡುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ಕೂಡ ಮೂರನೇ ವಿಕೆಟ್ ಕಳೆದುಕೊಂಡಿದೆ. ಸೂರ್ಯಕುಮಾರ್ ಯಾದವ್ 8 ಎಸೆತಗಳಲ್ಲಿ 10 ರನ್ ಗಳಿಸಿ ಔಟಾದರು. ಮುಂಬೈ ತಂಡ 3.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 20 ರನ್ ಗಳಿಸಿದೆ.
ಮುಂಬೈ ಇಂಡಿಯನ್ಸ್ ಎರಡನೇ ವಿಕೆಟ್ ಕಳೆದುಕೊಂಡಿದೆ. ಇಶಾನ್ ಕಿಶನ್ ಕೂಡ ಔಟಾಗಿದ್ದಾರೆ. ಇಶಾನ್ ಕಿಶನ್ ಖಾತೆ ತೆರೆಯದೆ ಪೆವಿಲಿಯನ್ಗೆ ಮರಳಿದ್ದಾರೆ.
ಮುಂಬೈ ಇಂಡಿಯನ್ಸ್ ಮೊದಲ ಓವರ್ನಲ್ಲಿಯೇ ಮೊದಲ ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ 5 ಎಸೆತಗಳಲ್ಲಿ 6 ರನ್ ಗಳಿಸಿ ಔಟಾದರು. ಇದೀಗ ಸೂರ್ಯಕುಮಾರ್ ಯಾದವ್ ಕ್ರೀಸ್‌ಗೆ ಬಂದಿದ್ದಾರೆ.
ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.
ಇಂಪ್ಯಾಕ್ಟ್ ಪ್ಲೇಯರ್: ಜೋಸ್ ಬಟ್ಲರ್, ಕೇಶವ್ ಮಹಾರಾಜ್, ಶುಭಂ ದುಬೆ, ನವದೀಪ್ ಸೈನಿ, ಟಾಮ್ ಕೊಹ್ಲರ್-ಕ್ಯಾಡ್ಮೋರ್.
ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಮೊಹಮ್ಮದ್ ನಬಿ, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ.
ಇಂಪ್ಯಾಕ್ಟ್ ಪ್ಲೇಯರ್: ನುವಾನ್ ತುಷಾರ, ಆಕಾಶ್ ಮಧ್ವಲ್, ನಮನ್ ಧೀರ್, ಶಮ್ಸ್ ಮುಲಾನಿ, ಡೆವಾಲ್ಡ್ ಬ್ರೂಯಿಸ್.
ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಐಪಿಎಲ್ 2024ರ 38ನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯ ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ.
Published On - 6:41 pm, Mon, 22 April 24