AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಓವರ್​ಗಳ ಪಂದ್ಯ: ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ

IPL Rajasthan Royals vs Mumbai Indians Playing XI: ರಾಜಸ್ಥಾನ್ ರಾಯಲ್ಸ್ ತಂಡವು ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ದಾಖಲಿಸಿದರೆ, ಮುಂಬೈ ಇಂಡಿಯನ್ಸ್ ತಂಡವು ಕಳೆದ ಮ್ಯಾಚ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಾಲಿಗೆ ಗೆಲುವು ಅನಿವಾರ್ಯ.

11 ಓವರ್​ಗಳ ಪಂದ್ಯ: ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ
RR vs MI
ಝಾಹಿರ್ ಯೂಸುಫ್
|

Updated on:Apr 07, 2026 | 10:03 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹದಿಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್​ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟ್ ಮಾಡಲಿದೆ.

ಮಳೆಯ ಕಾರಣ ತಡವಾಗಿ ಆರಂಭವಾಗಿರುವ ಈ ಪಂದ್ಯದಿಂದ ಒಟ್ಟು 18 ಓವರ್​ಗಳನ್ನು ಓವರ್ ಕಡಿತ ಮಾಡಲಾಗಿದೆ. ಅದರಂತೆ ಪ್ರತಿ ಇನಿಂಗ್ಸ್​ನಲ್ಲಿ 11 ಓವರ್​ಗಳನ್ನು ಮಾತ್ರ ಆಡಲಾಗುತ್ತದೆ. 11 ಓವರ್​ಗಳಲ್ಲಿ 3.2 ಓವರ್​ಗಳು ಪವರ್​ಪ್ಲೇ ಆಗಿರಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳು ಈ ಕೆಳಗಿನಂತಿದೆ…

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಅಲ್ಲಾ ಗಝನ್ಫನ್, ಟ್ರೆಂಟ್ ಬೌಲ್ಟ್, ಜಸ್​ಪ್ರೀತ್ ಬುಮ್ರಾ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ.

ಉಭಯ ತಂಡಗಳ ಮುಖಾಮುಖಿ:

ಐಪಿಎಲ್​ನಲ್ಲಿ ಉಭಯ ತಂಡಗಳು ಈವರೆಗೆ 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 16 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ತಂಡವು 14 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನೊಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು. ಇಲ್ಲಿ ಉಭಯ ತಂಡಗಳ ಮುಖಾಮುಖಿಯನ್ನು ಗಣನೆಗೆ ತೆಗೆದುಕೊಂಡರೆ ಎರಡೂ ತಂಡಗಳು ಉತ್ತಮ ಪೈಪೋಟಿ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲೂ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಬಹುದು.

ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ (ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ಯುಧ್ವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್ರೆ ಬರ್ಗರ್, ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರ್, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್​, ಕುಲದೀಪ್ ಸೇನ್.

ಇದನ್ನೂ ಓದಿ: RR vs MI IPL 2026 Live Score: ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಯಾನ್ ರಿಕಲ್ಟನ್, ರಾಬಿನ್ ಮಿಂಝ್, ರಾಜ್ ಬಾವಾ, ರಘು ಶರ್ಮಾ, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಷ್, ನಮನ್ ಧೀರ್, ಜಸ್​ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಲ್ಲಾ ಗಫನ್ಝರ್, ಅಶ್ವನಿ ಕುಮಾರ್, ದೀಪಕ್ ಚಹರ್‌, ವಿಲ್ ಜ್ಯಾಕ್ಸ್, ಶೆರ್ಫೇನ್ ರದರ್​ಫೋರ್ಡ್​,​ ಮಯಾಂಕ್ ಮಾರ್ಕಂಡೆ, ಶಾರ್ದೂಲ್ ಠಾಕೂರ್, ಕ್ವಿಂಟನ್ ಡಿ ಕಾಕ್, ಡ್ಯಾನಿಶ್ ಮಾಲೆವಾರ್, ಮೊಹಮ್ಮದ್ ಇಝಾರ್, ಅಥರ್ವ ಅಂಕೋಲೆಕರ್, ಮಯಾಂಕ್ ರಾವತ್.

Published On - 10:03 pm, Tue, 7 April 26

Follow Us
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!