
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹದಿಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟ್ ಮಾಡಲಿದೆ.
ಮಳೆಯ ಕಾರಣ ತಡವಾಗಿ ಆರಂಭವಾಗಿರುವ ಈ ಪಂದ್ಯದಿಂದ ಒಟ್ಟು 18 ಓವರ್ಗಳನ್ನು ಓವರ್ ಕಡಿತ ಮಾಡಲಾಗಿದೆ. ಅದರಂತೆ ಪ್ರತಿ ಇನಿಂಗ್ಸ್ನಲ್ಲಿ 11 ಓವರ್ಗಳನ್ನು ಮಾತ್ರ ಆಡಲಾಗುತ್ತದೆ. 11 ಓವರ್ಗಳಲ್ಲಿ 3.2 ಓವರ್ಗಳು ಪವರ್ಪ್ಲೇ ಆಗಿರಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳು ಈ ಕೆಳಗಿನಂತಿದೆ…
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಅಲ್ಲಾ ಗಝನ್ಫನ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ.
ಐಪಿಎಲ್ನಲ್ಲಿ ಉಭಯ ತಂಡಗಳು ಈವರೆಗೆ 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 16 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ತಂಡವು 14 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನೊಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು. ಇಲ್ಲಿ ಉಭಯ ತಂಡಗಳ ಮುಖಾಮುಖಿಯನ್ನು ಗಣನೆಗೆ ತೆಗೆದುಕೊಂಡರೆ ಎರಡೂ ತಂಡಗಳು ಉತ್ತಮ ಪೈಪೋಟಿ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಇಂದಿನ ಮ್ಯಾಚ್ನಲ್ಲೂ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಬಹುದು.
ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ (ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ಯುಧ್ವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್ರೆ ಬರ್ಗರ್, ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರ್, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್, ಕುಲದೀಪ್ ಸೇನ್.
ಇದನ್ನೂ ಓದಿ: RR vs MI IPL 2026 Live Score: ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಯಾನ್ ರಿಕಲ್ಟನ್, ರಾಬಿನ್ ಮಿಂಝ್, ರಾಜ್ ಬಾವಾ, ರಘು ಶರ್ಮಾ, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಷ್, ನಮನ್ ಧೀರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಲ್ಲಾ ಗಫನ್ಝರ್, ಅಶ್ವನಿ ಕುಮಾರ್, ದೀಪಕ್ ಚಹರ್, ವಿಲ್ ಜ್ಯಾಕ್ಸ್, ಶೆರ್ಫೇನ್ ರದರ್ಫೋರ್ಡ್, ಮಯಾಂಕ್ ಮಾರ್ಕಂಡೆ, ಶಾರ್ದೂಲ್ ಠಾಕೂರ್, ಕ್ವಿಂಟನ್ ಡಿ ಕಾಕ್, ಡ್ಯಾನಿಶ್ ಮಾಲೆವಾರ್, ಮೊಹಮ್ಮದ್ ಇಝಾರ್, ಅಥರ್ವ ಅಂಕೋಲೆಕರ್, ಮಯಾಂಕ್ ರಾವತ್.
Published On - 10:03 pm, Tue, 7 April 26