ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿದೆ . ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ 20 ಓವರ್ಗಳಲ್ಲಿ 144 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು 18.5 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡ 5 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿದೆ.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ಯುಜ್ವೇಂದ್ರ ಚಹಲ್.
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಪ್ರಭ್‌ಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋವ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ, ಸ್ಯಾಮ್ ಕರನ್ (ನಾಯಕ), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ನಾಥನ್ ಎಲ್ಲಿಸ್, ರಾಹುಲ್ ಚಹರ್, ಅರ್ಶ್‌ದೀಪ್ ಸಿಂಗ್.
ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 28 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ 16 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಪಂಜಾಬ್ ಕಿಂಗ್ಸ್ 12 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ.
ಪಂಜಾಬ್ ಕಿಂಗ್ಸ್ ತಂಡ: ಜಾನಿ ಬೈರ್‌ಸ್ಟೋವ್(ವಿಕೆಟ್ ಕೀಪರ್), ಪ್ರಭ್‌ಸಿಮ್ರಾನ್ ಸಿಂಗ್, ರಿಲೀ ರೋಸೋವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ, ಸ್ಯಾಮ್ ಕರನ್ (ನಾಯಕ), ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ರಾಹುಲ್ ಚಹರ್, ಅರ್ಷ್‌ದೀಪ್ ಸಿಂಗ್, ವಿಧ್ವತ್ ಕಾವೇರಪ್ಪ, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ವೋಕ್ಸ್, ರಿಷಿ ಧವನ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ತನಯ್ ತ್ಯಾಗರಾಜನ್, ಶಿಖರ್ ಧವನ್, ಅಥರ್ವ ಟೈಡೆ, ಶಿವಂ ಸಿಂಗ್, ಪ್ರಿನ್ಸ್ ಚೌಧರಿ, ವಿಶ್ವನಾಥ್ ಸಿಂಗ್.
ರಾಜಸ್ಥಾನ್ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಲ್, ರೋವ್ಮನ್ ಪೊವೆಲ್, ನಾಂಡ್ರೆ ಬುರ್ಗರ್, ಕೇಶವ್ ಮಹಾರಾಜ್, ತನುಷ್ ಕೋಟ್ಯಾನ್, ಕುಲದೀಪ್ ಸೇನ್, ಡೊನೊವನ್ ಫೆರೇರಾ, ಅಬಿದ್ ಮುಷ್ತಾಕ್, ಶುಭಂ ದುಬೆ, ಕುನಾಲ್ ಸಿಂಗ್ ರಾಥೋಡ್, ನವದೀಪ್ ಸೈನಿ.
ಸಂದೀಪ್ ಶರ್ಮಾ ಎಸೆದ 18ನೇ ಓವರ್ನ ಕೊನೆಯ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಸ್ಯಾಮ್ ಕರನ್.
ಕೊನೆಯ 12 ಎಸೆತಗಳಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ 15 ರನ್ಗಳ ಅವಶ್ಯಕತೆ.
ಕ್ರೀಸ್ನಲ್ಲಿ ಅಶುತೋಷ್ ಶರ್ಮಾ ಹಾಗೂ ಸ್ಯಾಮ್ ಕರನ್ ಬ್ಯಾಟಿಂಗ್.
ಅವೇಶ್ ಖಾನ್ ಎಸೆದ 17ನೇ ಓವರ್ನ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿದ ಅಶುತೋಷ್ ಶರ್ಮಾ.
ಪಂಜಾಬ್ ಕಿಂಗ್ಸ್ ತಂಡಕ್ಕೆ 18 ಎಸೆತಗಳಲ್ಲಿ 25 ರನ್ಗಳ ಅವಶ್ಯಕತೆ.
ಕ್ರೀಸ್ನಲ್ಲಿ ಅಶುತೋಷ್ ಶರ್ಮಾ ಹಾಗೂ ಸ್ಯಾಮ್ ಕರನ್ ಬ್ಯಾಟಿಂಗ್.
ಯುಜ್ವೇಂದ್ರ ಚಹಲ್ ಎಸೆದ 16ನೇ ಓವರ್ನ 4ನೇ ಎಸೆತದಲ್ಲಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಜಿತೇಶ್ ಶರ್ಮಾ.
20 ಎಸೆತಗಳಲ್ಲಿ 22 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಜಿತೇಶ್ ಶರ್ಮಾ.
ಕ್ರೀಸ್ನಲ್ಲಿ ಅಶುತೋಷ್ ಶರ್ಮಾ ಹಾಗೂ ಸ್ಯಾಮ್ ಕರನ್ ಬ್ಯಾಟಿಂಗ್.
ಅಶ್ವಿನ್ ಎಸೆದ 15ನೇ ಓವರ್ನ 2ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಜಿತೇಶ್ ಶರ್ಮಾ.
4ನೇ ಎಸೆತದಲ್ಲಿ ಸ್ಯಾಮ್ ಕರನ್ ಬ್ಯಾಟ್ನಿಂದ ಮತ್ತೊಂದು ಸಿಕ್ಸ್.
ಈ ಸಿಕ್ಸ್ನೊಂದಿಗೆ ಶತಕ ಪೂರೈಸಿದ ಪಂಜಾಬ್ ಕಿಂಗ್ಸ್.
ಪಂಜಾಬ್ ಕಿಂಗ್ಸ್ಗೆ ಗೆಲ್ಲಲು 30 ಎಸೆತಗಳಲ್ಲಿ ಕೇವಲ 42 ರನ್ಗಳ ಅವಶ್ಯಕತೆ.
ಯುಜ್ವೇಂದ್ರ ಚಹಲ್ ಎಸೆದ 12ನೇ ಓವರ್ನ 4ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಸ್ಯಾಮ್ ಕರನ್.
ಕ್ರೀಸ್ನಲ್ಲಿ ಜಿತೇಶ್ ಶರ್ಮಾ ಹಾಗೂ ಸ್ಯಾಮ್ ಕರನ್ ಬ್ಯಾಟಿಂಗ್.
12 ಓವರ್ಗಳಲ್ಲಿ 76 ರನ್ ಕಲೆಹಾಕಲಷ್ಟೇ ಶಕ್ತರಾದ ಪಂಜಾಬ್ ಕಿಂಗ್ಸ್.
12 ಓವರ್ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 83 ರನ್ ಕಲೆಹಾಕಿದ್ದ ರಾಜಸ್ಥಾನ್ ರಾಯಲ್ಸ್.
ಮೊದಲ 10 ಓವರ್ಗಳಲ್ಲಿ 4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದ ರಾಜಸ್ಥಾನ್ ರಾಯಲ್ಸ್ ಬೌಲರ್ಗಳು.
ಕ್ರೀಸ್ನಲ್ಲಿ ಜಿತೇಶ್ ಶರ್ಮಾ ಹಾಗೂ ಸ್ಯಾಮ್ ಕರನ್ ಬ್ಯಾಟಿಂಗ್.
ಪಂಜಾಬ್ ಕಿಂಗ್ಸ್ಗೆ ಗೆಲ್ಲಲು 60 ಎಸೆತಗಳಲ್ಲಿ 82 ರನ್ಗಳ ಅವಶ್ಯಕತೆ.
ರವಿಚಂದ್ರನ್ ಅಶ್ವಿನ್ ಎಸೆದ 9ನೇ ಓವರ್ನ 5ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಜಿತೇಶ್ ಶರ್ಮಾ.
9 ಓವರ್ಗಳ ಮುಕ್ತಾಯದ ವೇಳೆಗೆ ಪಂಜಾಬ್ ಕಿಂಗ್ಸ್ ತಂಡದ ಸ್ಕೋರ್ 55 ರನ್ಗಳು.
ಕ್ರೀಸ್ನಲ್ಲಿ ಜಿತೇಶ್ ಶರ್ಮಾ ಹಾಗೂ ಸ್ಯಾಮ್ ಕರನ್ ಬ್ಯಾಟಿಂಗ್.
ಯುಜ್ವೇಂದ್ರ ಚಹಲ್ ಎಸೆದ 8ನೇ ಓವರ್ನ ಕೊನೆಯ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿದ ಜಾನಿ ಬೈರ್‌ಸ್ಟೋವ್.
ಬೌಂಡರಿ ಲೈನ್ನಲ್ಲಿ ಡೊನವನ್ ಫೆರೇರಾ ಅತ್ಯುತ್ತಮ ಕ್ಯಾಚ್… ಜಾನಿ ಬೈರ್‌ಸ್ಟೋವ್ (14) ಔಟ್.
ಕ್ರೀಸ್ನಲ್ಲಿ ಜಿತೇಶ್ ಶರ್ಮಾ ಹಾಗೂ ಸ್ಯಾಮ್ ಕರನ್ ಬ್ಯಾಟಿಂಗ್.
ಮೊದಲ 6 ಓವರ್ಗಳಲ್ಲಿ ಕೇವಲ 39 ರನ್ ಕಲೆಹಾಕಿದ ಪಂಜಾಬ್ ಕಿಂಗ್ಸ್.
ಪವರ್ಪ್ಲೇನಲ್ಲಿ 3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ರಾಜಸ್ಥಾನ್ ರಾಯಲ್ಸ್.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ಸ್ಯಾಮ್ ಕರನ್ ಬ್ಯಾಟಿಂಗ್.
ಅವೇಶ್ ಖಾನ್ ಎಸೆದ 5ನೇ ಓವರ್ನ 3ನೇ ಎಸೆತದಲ್ಲಿ ಕ್ಯಾಚ್ ನೀಡಿದ ರೈಲಿ ರೊಸೊವ್.
13 ಎಸೆತಗಳಲ್ಲಿ 22 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಎಡಗೈ ದಾಂಡಿಗ ರೈಲಿ ರೊಸೊವ್.
5ನೇ ಎಸೆತದಲ್ಲಿ ಶಶಾಂಕ್ ಸಿಂಗ್ ಎಲ್ಡಬ್ಲ್ಯೂ… ಔಟ್.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ಸ್ಯಾಮ್ ಕರನ್ ಬ್ಯಾಟಿಂಗ್.
ಸಂದೀಪ್ ಶರ್ಮಾ ಎಸೆದ 4ನೇ ಓವರ್ನಲ್ಲೂ 2 ಭರ್ಜರಿ ಬೌಂಡರಿ ಬಾರಿಸಿದ ರೈಲಿ ರೊಸೊವ್.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ರೈಲಿ ರೊಸೊವ್ ಬ್ಯಾಟಿಂಗ್.
ಪಂಜಾಬ್ ಕಿಂಗ್ಸ್ ಭರ್ಜರಿ ಬ್ಯಾಟಿಂಗ್.
ಪ್ರಭ್‌ಸಿಮ್ರಾನ್ ಸಿಂಗ್ (4) ಔಟ್.
ಟ್ರೆಂಟ್ ಬೌಲ್ಟ್ ಎಸೆದ 3ನೇ ಓವರ್ನ 4ನೇ ಮತ್ತು 5ನೇ ಎಸೆತಗಳಲ್ಲಿ ಲೆಗ್ ಸೈಡ್ನತ್ತ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ರೈಲಿ ರೊಸೊವ್.
3 ಓವರ್ಗಳ ಮುಕ್ತಾಯದ ವೇಳೆಗೆ ಪಂಜಾಬ್ ಕಿಂಗ್ಸ್ ತಂಡದ ಸ್ಕೋರ್ 26 ರನ್ಗಳು.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ರೈಲಿ ರೊಸೊವ್ ಬ್ಯಾಟಿಂಗ್.
ಸಂದೀಪ್ ಶರ್ಮಾ ಎಸೆದ 2ನೇ ಓವರ್ನ 5ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ರೈಲಿ ರೊಸೊವ್.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ರೈಲಿ ರೊಸೊವ್ ಬ್ಯಾಟಿಂಗ್.
ಟ್ರೆಂಟ್ ಬೌಲ್ಟ್ ಎಸೆದ ಮೊದಲ ಓವರ್ನ ಮೂರನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಪ್ರಭ್‌ಸಿಮ್ರಾನ್ ಸಿಂಗ್.
4ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದ ಫ್ರಭ್ಸಿಮ್ರಾನ್.
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮೊದಲ ಓವರ್ನಲ್ಲೇ ಮೊದಲ ಯಶಸ್ಸು.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ರೈಲಿ ರೊಸೊವ್ ಬ್ಯಾಟಿಂಗ್.
20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 144 ರನ್ ಕಲೆಹಾಕಿದ ರಾಜಸ್ಥಾನ್ ರಾಯಲ್ಸ್.
ಪಂಜಾಬ್ ಕಿಂಗ್ಸ್ ತಂಡಕ್ಕೆ 145 ರನ್ಗಳ ಸುಲಭ ಟಾರ್ಗೆಟ್ ನೀಡಿದ ಆರ್ಆರ್.
ಪಂಜಾಬ್ ಕಿಂಗ್ಸ್ ಪರ ತಲಾ 2 ವಿಕೆಟ್ ಕಬಳಿಸಿದ ಮಿಂಚಿದ ಸ್ಯಾಮ್ ಕರನ್, ರಾಹುಲ್ ಚಹರ್ ಹಾಗೂ ಹರ್ಷಲ್ ಪಟೇಲ್.
ರಾಜಸ್ಥಾನ್ ರಾಯಲ್ಸ್ ಪರ 48 ರನ್ ಬಾರಿಸಿದ ರಿಯಾನ್ ಪರಾಗ್.
ಹರ್ಷಲ್ ಪಟೇಲ್ ಎಸೆದ 20ನೇ ಓವರ್ನ 2ನೇ ಎಸೆತದಲ್ಲಿ ರಿಯಾನ್ ಪರಾಗ್ ಎಲ್ಬಿಡಬ್ಲ್ಯೂ…ಔಟ್.
34 ಎಸೆತಗಳಲ್ಲಿ 48 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ರಿಯಾನ್ ಪರಾಗ್.
ಕ್ರೀಸ್ನಲ್ಲಿ ಅವೇಶ್ ಖಾನ್ ಹಾಗೂ ಟ್ರೆಂಟ್ ಬೌಲ್ಟ್ ಬ್ಯಾಟಿಂಗ್.
ನಾಥನ್ ಎಲ್ಲಿಸ್ ಎಸೆದ 19ನೇ ಓವರ್ನ 3ನೇ ಮತ್ತು 4ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಟ್ರೆಂಟ್ ಬೌಲ್ಡ್.
19 ಓವರ್ಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಸ್ಕೋರ್ 138 ರನ್ಗಳು.
‘ಕ್ರೀಸ್ನಲ್ಲಿ ರಿಯಾನ್ ಪರಾಗ್ ಹಾಗೂ ಟ್ರೆಂಟ್ ಬೌಲ್ಟ್ ಬ್ಯಾಟಿಂಗ್.
ಹರ್ಷಲ್ ಪಟೇಲ್ ಎಸೆದ 18ನೇ ಓವರ್ನ 3ನೇ ಎಸೆತದಲ್ಲಿ ಡೊನವನ್ ಫೆರೇರಾ ಭರ್ಜರಿ ಹೊಡೆತಕ್ಕೆ ಯತ್ನ..ಬೌಂಡರಿ ಲೈನ್ನಲ್ಲಿ ರೈಲಿ ರೊಸೊವ್ ಉತ್ತಮ ಕ್ಯಾಚ್.
8 ಎಸೆತಗಳಲ್ಲಿ 7 ರನ್ ಬಾರಿಸಿ ಔಟಾದ ಫೆರೇರಾ.
ಕ್ರೀಸ್ನಲ್ಲಿ ರಿಯಾನ್ ಪರಾಗ್ ಹಾಗೂ ಟ್ರೆಂಟ್ ಬೌಲ್ಟ್ ಬ್ಯಾಟಿಂಗ್.
ಅರ್ಷದೀಪ್ ಸಿಂಗ್ ಎಸೆದ 17ನೇ ಓವರ್ನ ಮೊದಲೆರಡು ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ರಿಯಾನ್ ಪರಾಗ್.
17 ಓವರ್ಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಸ್ಕೋರ್ 122 ರನ್ಗಳು.
ಕ್ರೀಸ್ನಲ್ಲಿ ರಿಯಾನ್ ಪರಾಗ್ ಹಾಗೂ ಡೊನವನ್ ಫೆರೇರಾ ಬ್ಯಾಟಿಂಗ್.
ರಾಹುಲ್ ಚಹರ್ ಎಸೆದ 15ನೇ ಓವರ್ನ 3ನೇ ಎಸೆತದಲ್ಲಿ ನೇರವಾಗಿ ಕ್ಯಾಚ್ ನೀಡಿದ ರೋವ್ಮನ್ ಪೊವೆಲ್.
5 ಎಸೆತಗಳಲ್ಲಿ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ರೋವ್ಮನ್ ಪೊವೆಲ್.
ಕ್ರೀಸ್ನಲ್ಲಿ ರಿಯಾನ್ ಪರಾಗ್ ಹಾಗೂ ಡೊನವನ್ ಫೆರೇರಾ ಬ್ಯಾಟಿಂಗ್.
ಸ್ಯಾಮ್ ಕರನ್ ಎಸೆದ 14ನೇ ಓವರ್ನ 3ನೇ ಎಸೆತದಲ್ಲಿ ಫ್ರಂಟ್ ಫೀಲ್ಡರ್ಗೆ ಸುಲಭ ಕ್ಯಾಚ್ ನೀಡಿದ ಧ್ರುವ್ ಜುರೇಲ್ (0).
5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರಾಜಸ್ಥಾನ್ ರಾಯಲ್ಸ್ ತಂಡ.
ಕ್ರೀಸ್ನಲ್ಲಿ ರಿಯಾನ್ ಪರಾಗ್ ಹಾಗೂ ರೋವ್ಮನ್ ಪೊವೆಲ್ ಬ್ಯಾಟಿಂಗ್.
ಅರ್ಷದೀಪ್ ಸಿಂಗ್ ಎಸೆದ 13ನೇ ಓವರ್ನ ಕೊನೆಯ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದ ರವಿಚಂದ್ರನ್ ಅಶ್ವಿನ್.
19 ಎಸೆತಗಳಲ್ಲಿ 28 ರನ್ಗಳ ಕೊಡುಗೆ ನೀಡಿ ಪೆವಿಲಿಯನ್ಗೆ ಹಿಂತಿರುಗಿದ ಅಶ್ವಿನ್.
ಕ್ರೀಸ್ನಲ್ಲಿ ರಿಯಾನ್ ಪರಾಗ್ ಹಾಗೂ ಧ್ರುವ್ ಜುರೇಲ್ ಬ್ಯಾಟಿಂಗ್.
ರಾಹುಲ್ ಚಹರ್ ಎಸೆದ 12ನೇ ಓವರ್ನ 4ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಬಾರಿಸಿದ ಅಶ್ವಿನ್.
5ನೇ ಮತ್ತು 6ನೇ ಎಸೆತಗಳಲ್ಲಿ ಲಾಂಗ್ ಆಫ್ನತ್ತ ಬ್ಯಾಕ್ ಟು ಬ್ಯಾಕ್ ಬೌಂಡರಿ ಸಿಡಿಸಿದ ಅಶ್ವಿನ್.
12ನೇ ಓವರ್ನಲ್ಲಿ 17 ರನ್ ಕಲೆಹಾಕಿದ ರಾಜಸ್ಥಾನ್ ರಾಯಲ್ಸ್.
10 ಓವರ್ಗಳ ಮುಕ್ತಾಯದ ವೇಳೆಗೆ 58 ರನ್ ಕಲೆಹಾಕಿದ ರಾಜಸ್ಥಾನ್ ರಾಯಲ್ಸ್.
ಪಂಜಾಬ್ ಕಿಂಗ್ಸ್ ಬೌಲರ್ಗಳಿಂದ ಅತ್ಯುತ್ತಮ ಪ್ರದರ್ಶನ.
ಕ್ರೀಸ್ನಲ್ಲಿ ರಿಯಾನ್ ಪರಾಗ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್.
ಯಶಸ್ವಿ ಜೈಸ್ವಾಲ್ (4), ಟಾಮ್ ಕೊಹ್ಲರ್ (18) ಮತ್ತು ಸಂಜು ಸ್ಯಾಮ್ಸನ್ (18) ಔಟ್.
ರಾಹುಲ್ ಚಹರ್ ಎಸೆದ 8ನೇ ಓವರ್ನ 2ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ಆದ ಟಾಮ್ ಕೊಹ್ಲರ್.
23 ಎಸೆತಗಳಲ್ಲಿ 18 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಟಾಮ್ ಕೊಹ್ಲರ್.
ಕ್ರೀಸ್ನಲ್ಲಿ ರಿಯಾನ್ ಪರಾಗ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್.
ನಾಥನ್ ಎಲ್ಲಿಸ್ ಎಸೆದ 7ನೇ ಓವರ್ನ 4ನೇ ಎಸೆತದಲ್ಲಿ ಸ್ಕ್ವೇರ್ ಫೀಲ್ಡರ್ ಚಹರ್ಗೆ ಸುಲಭ ಕ್ಯಾಚ್ ನೀಡಿದ ಸಂಜು ಸ್ಯಾಮ್ಸನ್.
15 ಎಸೆತಗಳಲ್ಲಿ 18 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಸಂಜು ಸ್ಯಾಮ್ಸನ್.
ಕ್ರೀಸ್ನಲ್ಲಿ ರಿಯಾನ್ ಪರಾಗ್ ಹಾಗೂ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಬ್ಯಾಟಿಂಗ್.
6ನೇ ಓವರ್ನಲ್ಲಿ ಕೇವಲ 4 ರನ್ ನೀಡಿದ ಹರ್ಷಲ್ ಪಟೇಲ್.
ಪವರ್ಪ್ಲೇನಲ್ಲಿ ಕೇವಲ 38 ರನ್ ಕಲೆಹಾಕಲಷ್ಟೇ ಶಕ್ತರಾದ ರಾಜಸ್ಥಾನ್ ರಾಯಲ್ಸ್.
ಯಶಸ್ವಿ ಜೈಸ್ವಾಲ್ (4) ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಸ್ಯಾಮ್ ಕರನ್.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಬ್ಯಾಟಿಂಗ್.
5ನೇ ಓವರ್ನಲ್ಲಿ ಬಿಗಿ ದಾಳಿಯೊಂದಿಗೆ ಕೇವಲ 2 ರನ್ ಮಾತ್ರ ನೀಡಿದ ವೇಗಿ ನಾಥನ್ ಎಲ್ಲಿಸ್.
5 ಓವರ್ಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಸ್ಕೋರ್ 34 ರನ್ಗಳು.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಬ್ಯಾಟಿಂಗ್.
ಅರ್ಷದೀಪ್ ಸಿಂಗ್ ಎಸೆದ 4ನೇ ಓವರ್ನ 2ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಸಂಜು ಸ್ಯಾಮ್ಸನ್.
4ನೇ ಎಸೆತದಲ್ಲಿ ಸ್ಯಾಮ್ಸನ್ ಬ್ಯಾಟ್ನಿಂದ ಆಫ್ ಸೈಡ್ನತ್ತ ಮತ್ತೊಂದು ಫೋರ್.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಬ್ಯಾಟಿಂಗ್.
ಸ್ಯಾಮ್ ಕರನ್ ಎಸೆದ 3ನೇ ಓವರ್ನ 2ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಟಾಮ್ ಕೊಹ್ಲರ್.
ಮೂರು ಓವರ್ಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಸ್ಕೋರ್ 21 ರನ್ಗಳು.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಬ್ಯಾಟಿಂಗ್.
ಅರ್ಷದೀಪ್ ಸಿಂಗ್ ಎಸೆದ 2ನೇ ಓವರ್ನ ಕೊನೆಯ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಸಂಜು ಸ್ಯಾಮ್ಸನ್.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಬ್ಯಾಟಿಂಗ್.
ಮೊದಲ ಓವರ್ನಲ್ಲಿ ವಿಕೆಟ್ ಒಪ್ಪಿಸಿದ ಯಶಸ್ವಿ ಜೈಸ್ವಾಲ್ (4).
ಸ್ಯಾಮ್ ಕರನ್ ಎಸೆದ ಮೊದಲ ಓವರ್ನ ಮೊದಲ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಯಶಸ್ವಿ ಜೈಸ್ವಾಲ್.
4ನೇ ಎಸೆತದಲ್ಲಿ ಬ್ಯಾಟ್ ಇನ್ಸೈಡ್ ಎಡ್ಜ್ ಆಗಿ ಯಶಸ್ವಿ ಜೈಸ್ವಾಲ್ ಬೌಲ್ಡ್ (4).
ಪಂಜಾಬ್ ಕಿಂಗ್ಸ್ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟ ನಾಯಕ ಸ್ಯಾಮ್ ಕರನ್.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಬ್ಯಾಟಿಂಗ್.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ರಾಜಸ್ಥಾನ್ ರಾಯಲ್ಸ್.
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಪ್ರಭ್‌ಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋವ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ, ಸ್ಯಾಮ್ ಕರನ್ (ನಾಯಕ), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ನಾಥನ್ ಎಲ್ಲಿಸ್, ರಾಹುಲ್ ಚಹರ್, ಅರ್ಶ್‌ದೀಪ್ ಸಿಂಗ್.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ಯುಜ್ವೇಂದ್ರ ಚಹಲ್.
ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಪಂದ್ಯ: ರಾಜಸ್ಥಾನ್ ರಾಯಲ್ಸ್ vs ಪಂಜಾಬ್ ಕಿಂಗ್ಸ್
ಟಾಸ್ ಪ್ರಕ್ರಿಯೆ: 7 ಗಂಟೆಗೆ
ಪಂದ್ಯ ಶುರು: 7.30 ರಿಂದ
ಸ್ಥಳ: ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ.
The #TATAIPL 2024 action moves to Guwahati 🥳
Rajasthan Royals 🩷 host the Punjab Kings ❤️
Who will have a memorable game? 🤔 #RRvPBKS pic.twitter.com/pl4GTEPwmR
— IndianPremierLeague (@IPL) May 15, 2024
ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 27 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ 16 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಪಂಜಾಬ್ ಕಿಂಗ್ಸ್ 11 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ.
ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಟಾಪ್-2 ನಲ್ಲಿ ಸ್ಥಾನ ಪಡೆಯಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶ ಪಡೆಯಲಿದೆ.
Published On - 6:29 pm, Wed, 15 May 24