AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB Prediction Playing XI: ಆರ್​ಸಿಬಿ ತಂಡದಲ್ಲಿ ಬದಲಾವಣೆ ಖಚಿತ! ಉಭಯ ತಂಡಗಳ ಸಂಭಾವ್ಯ XI

RR vs RCB Prediction Playing XI: ವಾಸ್ತವವಾಗಿ ಬೆಂಗಳೂರಿಗೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ನಡೆಯುತ್ತಿತ್ತು. ಕಳೆದ ಪಂದ್ಯದಲ್ಲಿ ಅವರು ಸೋತಿರಬಹುದು, ಆದರೆ ಅವರನ್ನು ಲಘುವಾಗಿ ಪರಿಗಣಿಸುವುದು ತಪ್ಪಾಗುತ್ತದೆ. ಬೆಂಗಳೂರಿನ ಪ್ಲೇಯಿಂಗ್-11 ರಲ್ಲಿ ನೋಡಿದರೆ, ಅದರ ಆರಂಭಿಕ ಜೋಡಿಯಲ್ಲಿ ಸ್ವಲ್ಪ ಕೊರತೆಯಿದೆ.

RR vs RCB Prediction Playing XI: ಆರ್​ಸಿಬಿ ತಂಡದಲ್ಲಿ ಬದಲಾವಣೆ ಖಚಿತ! ಉಭಯ ತಂಡಗಳ ಸಂಭಾವ್ಯ XI
RR vs RCB
TV9 Web
| Updated By: ಪೃಥ್ವಿಶಂಕರ|

Updated on: Apr 25, 2022 | 6:01 PM

Share

ಐಪಿಎಲ್-2022 (IPL 2022)ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತನ್ನ ಕೊನೆಯ ಪಂದ್ಯವನ್ನು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಏಪ್ರಿಲ್ 23 ರಂದು ಆಡಿತು. ಈ ಪಂದ್ಯದಲ್ಲಿ ಬೆಂಗಳೂರು ತಂಡ ಹೀನಾಯ ಸೋಲು ಕಂಡಿತ್ತು. ಸನ್‌ರೈಸರ್ಸ್ ಎದುರು 70 ರನ್‌ಗಳನ್ನು ದಾಟಲು ಸಾಧ್ಯವಾಗದೆ ಕೇವಲ 68 ರನ್‌ಗಳಿಗೆ ಆಲೌಟ್ ಆಗಿತ್ತು. ಬೆಂಗಳೂರಿನ ಬಲಿಷ್ಠ ಬ್ಯಾಟಿಂಗ್ ಕ್ರಮಾಂಕ ಈ ಪಂದ್ಯದಲ್ಲಿ ಆಡಲಿಲ್ಲ. ವಿರಾಟ್ ಕೊಹ್ಲಿ (Virat Kohli) ಸತತ ಎರಡನೇ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಖಾತೆ ತೆರೆಯದೆ ಔಟಾದರು. ಇದೀಗ ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದಲ್ಲಿ ಆರ್​ಸಿಬಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ತಂಡ ಈ ಋತುವಿನಲ್ಲಿ ಅತ್ಯುತ್ತಮ ಕ್ರಿಕೆಟ್ ಆಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರು ಗೆಲುವಿನ ಹಾದಿಗೆ ಮರಳಲು ಈ ತಂಡದ ವಿರುದ್ಧ ತನ್ನೆಲ್ಲ ಶಕ್ತಿಯನ್ನೂ ಹಾಕಬೇಕಿದೆ.

ರಾಜಸ್ಥಾನದ ಕಡೆಯಿಂದ ಬೆಂಗಳೂರನ್ನು ಹೆಚ್ಚು ಚಿಂತೆಗೀಡು ಮಾಡುವ ಆಟಗಾರ ಎಂದರೆ ಆರಂಭಿಕ ಜೋಸ್ ಬಟ್ಲರ್. ಬಟ್ಲರ್ ಈ ಆವೃತ್ತಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅವರು ಇದುವರೆಗೆ ಆಡಿರುವ ಏಳು ಪಂದ್ಯಗಳಲ್ಲಿ ಮೂರು ಶತಕ ಮತ್ತು ಎರಡು ಅರ್ಧ ಶತಕಗಳನ್ನು ಗಳಿಸಿದ್ದಾರೆ. ಇದು ಈ ಎರಡು ತಂಡಗಳ ನಡುವೆ ಈ ಋತುವಿನ ಎರಡನೇ ಪಂದ್ಯವಾಗಿದೆ. ಮೊನ್ನೆ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ ರಾಜಸ್ಥಾನವನ್ನು ಮಣಿಸಿದ್ದು, ಇದೀಗ ಆ ಸೋಲಿನ ಸೇಡು ತೀರಿಸಿಕೊಳ್ಳಲು ರಾಜಸ್ಥಾನ ಹವಣಿಸುತ್ತಿದೆ.

ರಾಜಸ್ಥಾನದಲ್ಲಿ ಬದಲಾವಣೆ ಕಡಿಮೆ ರಾಜಸ್ಥಾನ್ ರಾಯಲ್ಸ್ ತನ್ನ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸಿತು. ಈ ಪಂದ್ಯದಲ್ಲಿ ರಾಜಸ್ಥಾನ 222 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಸ್ಕೋರ್ ಇದುವರೆಗಿನ IPL-2022 ರ ಅತಿದೊಡ್ಡ ಸ್ಕೋರ್ ಆಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸಂಜು ತನ್ನ ವಿಜೇತ ತಂಡದೊಂದಿಗೆ ಬದಲಾವಣೆಗಳನ್ನು ಮಾಡುವ ಮನಸ್ಥಿತಿಯಲ್ಲಿ ಇರುವುದಿಲ್ಲ. ಆದಷ್ಟು ಮಟ್ಟಿಗೆ ರಾಜಸ್ಥಾನ ಯಾವುದೇ ಬದಲಾವಣೆ ಇಲ್ಲದೆ ಬೆಂಗಳೂರಿನ ವಿರುದ್ಧ ಸೆಣಸಲಿದೆ. ಬಟ್ಲರ್ ಜೊತೆ ಇನ್ನಿಂಗ್ಸ್ ಆರಂಭಿಸಿದ ದೇವದತ್ ಪಡಿಕ್ಕಲ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ನಾಯಕ ಸಂಜು ಸ್ಯಾಮ್ಸನ್ ಅವರ ಬ್ಯಾಟ್ ಕೂಡ ಕೊಡುಗೆ ನೀಡುತ್ತಿದೆ. ವೆಸ್ಟ್ ಇಂಡೀಸ್‌ನ ಶಿಮ್ರಾನ್ ಹೆಟ್ಮೆಯರ್ ಫಿನಿಶರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಬೌಲಿಂಗ್‌ನಲ್ಲಿ ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜುವೇಂದ್ರ ಚಾಹಲ್ ಮತ್ತು ರವಿಚಂದ್ರನ್ ಅಶ್ವಿನ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಇದು ಬೆಂಗಳೂರಿಗೆ ಆತಂಕದ ವಿಚಾರ ವಾಸ್ತವವಾಗಿ ಬೆಂಗಳೂರಿಗೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ನಡೆಯುತ್ತಿತ್ತು. ಕಳೆದ ಪಂದ್ಯದಲ್ಲಿ ಅವರು ಸೋತಿರಬಹುದು, ಆದರೆ ಅವರನ್ನು ಲಘುವಾಗಿ ಪರಿಗಣಿಸುವುದು ತಪ್ಪಾಗುತ್ತದೆ. ಬೆಂಗಳೂರಿನ ಪ್ಲೇಯಿಂಗ್-11 ರಲ್ಲಿ ನೋಡಿದರೆ, ಅದರ ಆರಂಭಿಕ ಜೋಡಿಯಲ್ಲಿ ಸ್ವಲ್ಪ ಕೊರತೆಯಿದೆ. ನಾಯಕ ಫಾಫ್ ಡು ಪ್ಲೆಸಿಸ್ ತಮ್ಮ ಕೆಲಸವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ ಆದರೆ ಅನುಜ್ ರಾವತ್ ಕೆಲವು ಇನ್ನಿಂಗ್ಸ್ ಹೊರತುಪಡಿಸಿ ನಿರಾಸೆ ಮೂಡಿಸಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಬದಲಾವಣೆಗಳನ್ನು ಇಲ್ಲಿ ಕಾಣಬಹುದು. ಮಹಿಪಾಲ್ ಲೊಮೊರರ್ ಇಲ್ಲಿ ಅವಕಾಶ ಪಡೆಯಬಹುದು.

ಎರಡೂ ತಂಡಗಳು ಸಂಭಾವ್ಯ 11 ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮೊರರ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯುಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಶಿಮ್ರೋನ್ ಹೆಟ್ಮೆಯರ್, ರಿಯಾನ್ ಪರಾಗ್, ಕರುಣ್ ನಾಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಓಬೇದ್ ಮೆಕಾಯ್, ಯುಜ್ವೇಂದ್ರ ಚಾಹಲ್, ಪ್ರಸಿದ್ದ್ ಕೃಷ್ಣ.

ಇದನ್ನೂ ಓದಿ:IPL 2022: ಈ ಒಂದು ಕಾರಣಕ್ಕಾಗಿ ನಾನು ಐಪಿಎಲ್ ಪ್ರಶಸ್ತಿಗಳನ್ನು ಗೆಲ್ಲಬೇಕಿದೆ ಎಂದ ರಾಹುಲ್..!

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!