IPL 2025: 2025 ರ ಐಪಿಎಲ್ನಿಂದ ಹೊರಬಿದ್ದ ಸಿಎಸ್‌ಕೆ ನಾಯಕ ರುತುರಾಜ್ ಗಾಯಕ್ವಾಡ್
Ruturaj Gaikwad Injury: 2025ರ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸತತ ಸೋಲುಗಳನ್ನು ಅನುಭವಿಸುತ್ತಿದ್ದು, ಈಗ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅವರು ಮೊಣಕೈಗೆ ಗಂಭೀರ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಮೂಳೆ ಮುರಿತದಿಂದಾಗಿ ಅವರು ಇಡೀ ಸರಣಿಯಿಂದ ದೂರ ಉಳಿಯುವಂತಾಗಿದೆ. ಈಗ ಎಂ.ಎಸ್. ಧೋನಿ ಅವರು ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

2025 ರ ಐಪಿಎಲ್‌ನಲ್ಲಿ (IPL 2025) ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಇದೀಗ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ತಂಡದ ನಾಯಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಗಾಯದ ಕಾರಣದಿಂದಾಗಿ ಇಡೀ ಟೂರ್ನಿಯಿಂದ ಹೊರಬಿದಿದ್ದಾರೆ. ಬ್ಯಾಟಿಂಗ್ ಮಾಡುವಾಗ ರುತುರಾಜ್ ಮೊಣಕೈಗೆ ಗಾಯವಾಗಿತ್ತು. ವರದಿಯ ಪ್ರಕಾರ, ರುತುರಾಜ್ ಅವರ ಮೊಣಕೈಯಲ್ಲಿ ಮೂಳೆ ಮುರಿತ ಉಂಟಾಗಿದ್ದು, ಈ ಕಾರಣದಿಂದಾಗಿ ಅವರು ಮುಂಬರುವ ಪಂದ್ಯಗಳಲ್ಲಿ ಆಡುವುದು ಸಾಧ್ಯವಾಗುವುದಿಲ್ಲ. ರುತುರಾಜ್ ಅವರ ಅನುಪಸ್ಥಿತಿಯಲ್ಲಿ, ಎಂಎಸ್ ಧೋನಿ (MS Dhoni) ಈಗ ಸಿಎಸ್‌ಕೆ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ನಾಯಕ ರುತುರಾಜ್ ಗಾಯಕ್ವಾಡ್ ಇಂಜುರಿಯಿಂದ ಇಡೀ ಟೂರ್ನಿಯಿಂದ ಹೊರಬಿದ್ದಿರುವ ವಿಚಾರವನ್ನು ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಧೃಡಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು,‘ನಾಯಕ ರುತುರಾಜ್ ಗಾಯಕ್ವಾಡ್ ಮೊಣಕೈ ಗಾಯದಿಂದಾಗಿ ಇಡೀ ಸೀಸನ್ನಿಂದ ಹೊರಗುಳಿದಿದ್ದಾರೆ. ಹೀಗಾಗಿ ರುತುರಾಜ್ ಬದಲಿಗೆ ಧೋನಿ ಈಗ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.
🚨 OFFICIAL STATEMENT 🚨
Ruturaj Gaikwad ruled out of the season due to a hairline fracture of the elbow.
MS DHONI TO LEAD. 🦁
GET WELL SOON, RUTU ! ✨ 💛#WhistlePodu #Yellove🦁💛 pic.twitter.com/U0NsVhKlny
— Chennai Super Kings (@ChennaiIPL) April 10, 2025
ಕೆಕೆಆರ್ ವಿರುದ್ಧ ಮುಂದಿನ ಪಂದ್ಯ
ಸ್ಟೀಫನ್ ಫ್ಲೆಮಿಂಗ್ ಹೇಳಿಕೊಂಡಿರುವ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಂದಿನ ಪಂದ್ಯದಲ್ಲಿ ಧೋನಿ ತಂಡವನ್ನು ಮುನ್ನಡೆಸುವುದನ್ನು ಕಾಣಬಹುದಾಗಿದೆ. ಆ ಪ್ರಕಾರ ಸಿಎಸ್‌ಕೆ ತನ್ನ ಮುಂದಿನ ಪಂದ್ಯವನ್ನು ತನ್ನ ತವರು ನೆಲದಲ್ಲಿ ನಾಳೆ ಅಂದರೆ ಏಪ್ರಿಲ್ 11 ರಂದು ಎಂಎ ಚಿದಂಬರಂ ಮೈದಾನದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಧೋನಿ ಮತ್ತೊಮ್ಮೆ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
IPL 2025: ತನ್ನದೇ ಆಟಗಾರನಿಗೆ ನಿದ್ರೆ ತರಿಸಿದ ಸಿಎಸ್ಕೆಯ ಟೆಸ್ಟ್ ಬ್ಯಾಟಿಂಗ್; ಫೋಟೋ ವೈರಲ್
ಸಿಎಸ್‌ಕೆ ಕಳಪೆ ಪ್ರದರ್ಶನ
ಧೋನಿ ನಾಯಕತ್ವ ವಹಿಸಿಕೊಂಡ ಬಳಿಕವಾದರೂ ಚೆನ್ನೈನ ಸೋಲಿನ ಸರಣಿಗೆ ಬ್ರೇಕ್ ಬೀಳುತ್ತದಾ ಎಂಬುದನ್ನು ಕಾದುನೋಡಬೇಕಿದೆ. ಏಕೆಂದರೆ ರುತುರಾಜ್ ನಾಯಕತ್ವದಲ್ಲಿ ಸಿಎಸ್‌ಕೆ ಪ್ರದರ್ಶನ ತೀರ ಕಳಪೆಯಾಗಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸುವುದರೊಂದಿಗೆ ಟೂರ್ನಿ ಆರಂಭಿಸಿದ್ದ ಸಿಎಸ್‌ಕೆ ಆ ಬಳಿಕ ಒಂದೇ ಒಂದು ಪಂದ್ಯದಲ್ಲೂ ಗೆಲುವು ಸಾಧಿಸಿಲ್ಲ. ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 1 ರಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲು ಕಂಡಿದೆ. ಈ ಮೂಲಕ -0.88 ನೆಟ್ ರನ್ರೇಟ್ ಹಾಗೂ 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಹೀಗಾಗಿ ಮುಂದಿನ ಪಂದ್ಯದಿಂದ ನಾಯಕತ್ವವಹಿಸಿಕೊಳ್ಳುತ್ತಿರುವ ಧೋನಿ ತಂಡವನ್ನು ಹೇಗೆ ಮುನ್ನಡೆಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:38 pm, Thu, 10 April 25