Ruturaj Gaikwad: ಚೊಚ್ಚಲ ಐಪಿಎಲ್ ಶತಕ ಸಿಡಿಸಿ ಆರೆಂಜ್ ಕ್ಯಾಪ್ ತೊಟ್ಟ ರುತುರಾಜ್ ಗಾಯಕ್ವಾಡ್

IPL 2021 Orange Cap: ಆರ್​ಆರ್ ಬೌಲರ್​ ಮುಸ್ತಫಿಜುರ್‌ ಅವರ ಇನ್ನಿಂಗ್ಸಿನ ಅಂತಿಮ ಎಸೆತವನ್ನು ಮಿಡ್‌ ವಿಕೆಟ್‌ ಮೂಲಕ ಸಿಕ್ಸರ್‌ಗೆ ಬಡಿದಟ್ಟಿದ ಗಾಯಕ್ವಾಡ್‌ ತಮ್ಮ ಮೊದಲ ಐಪಿಎಲ್‌ ಸೆಂಚುರಿಯನ್ನು ಪೂರ್ತಿಗೊಳಿಸಿದರು. ಜೊತೆಗೆ ಆರೆಂಜ್ ಕ್ಯಾಪ್ ಕೂಡ ತಮ್ಮದಾಗಿಸಿದರು.

Ruturaj Gaikwad: ಚೊಚ್ಚಲ ಐಪಿಎಲ್ ಶತಕ ಸಿಡಿಸಿ ಆರೆಂಜ್ ಕ್ಯಾಪ್ ತೊಟ್ಟ ರುತುರಾಜ್ ಗಾಯಕ್ವಾಡ್
Ruturaj Gaikwad Orange Cap
Follow us
TV9 Web
| Updated By: Vinay Bhat

Updated on: Oct 03, 2021 | 10:42 AM

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಎರಡನೇ ಚರಣ ಅಂತಿಮ ಹಂತಕ್ಕೆ ತಲುಪುತ್ತಿದ್ದು ಸಾಕಷ್ಟು ರೋಚಕತೆ ಸೃಷ್ಟಿಸುತ್ತಿದೆ. ಸನ್​ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಟೂರ್ನಿಯಿಂದ ಹೊರಬಿದ್ದಿದೆ. ರಿಷಭ್ ಪಂತ್ (Rishabh Pant) ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಇಂದಿನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs PBKS) ತಂಡ ಗೆದ್ದರೆ ಮೂರನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಲಿದೆ. ಶನಿವಾರ ನಡೆದ ರಾಜಸ್ಥಾನ್ ರಾಯಲ್ಸ್ (RR vs CSK) ವಿರುದ್ಧದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ (Ruturaj Gaikwad) ಚೊಚ್ಚಲ ಐಪಿಎಲ್ ಶತಕದ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಕಂಡಿದೆ. ಗಾಯಕ್ವಾಡ್ ಅಜೇಯ 101 ರನ್‌ ಬಾರಿಸಿದ್ದು ಮಾತ್ರವಲ್ಲದೆ ಆರೆಂಜ್ ಕ್ಯಾಪ್ (IPL 2021 Orange Cap) ಕೂಡ ತಮ್ಮದಾಗಿಸಿದರು.

ಹೌದು, ಆರ್​ಆರ್ ಬೌಲರ್​ ಮುಸ್ತಫಿಜುರ್‌ ಅವರ ಇನ್ನಿಂಗ್ಸಿನ ಅಂತಿಮ ಎಸೆತವನ್ನು ಮಿಡ್‌ ವಿಕೆಟ್‌ ಮೂಲಕ ಸಿಕ್ಸರ್‌ಗೆ ಬಡಿದಟ್ಟಿದ ಗಾಯಕ್ವಾಡ್‌ ತಮ್ಮ ಮೊದಲ ಐಪಿಎಲ್‌ ಸೆಂಚುರಿಯನ್ನು ಪೂರ್ತಿಗೊಳಿಸಿದರು. ಇದು ಕೇವಲ 60 ಎಸೆತಗಳಲ್ಲಿ ಬಂತು. 5 ಸಿಕ್ಸರ್‌ ಹಾಗೂ 9 ಫೋರ್‌ ಬಾರಿಸಿದರು. ಈ ಮೂಲಕ ಐಪಿಎಲ್ 2021 ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ತೊಟ್ಟರು. ಐಪಿಎಲ್ 2021 ರಲ್ಲಿ ಗಾಯಕ್ವಾಡ್ 12 ಪಂದ್ಯಗಳಲ್ಲಿ 508 ರನ್ ಪೂರೈಸಿದ್ದಾರೆ. ಇದರಲ್ಲಿ ಒಂದು ಶತಕ, ಮೂರು ಅರ್ಧಶತಕ ಸೇರಿವೆ.

ಎರಡನೇ ಸ್ಥಾನದಲ್ಲಿ ಕೆ. ಎಲ್ ರಾಹುಲ್ ಇದ್ದು, 111 ಪಂದ್ಯಗಳಲ್ಲಿ ಇವರು 489 ರನ್ ಕಲೆಹಾಕಿದ್ದಾರೆ. ಈ ಆವೃತ್ತಿಯಲ್ಲಿ ಇವರು 5 ಅರ್ಧಶತಕ ಬಾರಿಸಿದ್ದಾರೆ. ಇನ್ನೂ ಮೂರನೇ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ ಇದ್ದು ಇವರು 12 ಪಂದ್ಯಗಳಲ್ಲಿ 479 ರನ್ ಸಿಡಿಸಿದ್ದಾರೆ. ಶಿಖರ್ ಧವನ್ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ. ಇವರು 12 ಪಂದ್ಯಗಳಲ್ಲಿ 462 ರನ್ ಗಳಿಸಿದ್ದಾರೆ. ಐದನೇ ಸ್ಥಾನದಲ್ಲಿ ಸಿಎಸ್​ಕೆ ತಂಡದ ಫಾಫ್ ಡುಪ್ಲೆಸಿಸ್ ಅವರಿದ್ದು 12 ಪಂದ್ಯಗಳಲ್ಲಿ 460 ರನ್ ಗಳಿಸಿದ್ದಾರೆ.

ಇನ್ನೂ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿರುವ ಆಟಗಾರ ಆರ್​ಸಿಬಿ ತಂಡದ ಹರ್ಷಲ್ ಪಟೇಲ್. ಇವರು 11 ಪಂದ್ಯಗಳಲ್ಲಿ 26 ವಿಕೆಟ್ ಕಬಳಿಸಿದ್ದಾರೆ. ಈ ಬಾರಿ ಒಂದು ಸಲ 5 ವಿಕೆಟ್ ಮತ್ತು 1 ಬಾರಿ 4 ವಿಕೆಟ್ ಪಡೆದ ಸಾಧನೆ ಜೊತೆಗೆ ಒಂದು ಬಾರಿ ಹ್ಯಾಟ್ರಿಕ್ ವಿಕೆಟ್ ಕಿತ್ತಿದ್ದಾರೆ.

ಎರಡನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆವೇಶ್ ಖಾನ್ ಇದ್ದು ಇವರು 12 ಪಂದ್ಯಗಳಲ್ಲಿ 21 ವಿಕೆಟ್ ಕಿತ್ತಿದ್ದಾರೆ. ಮೂರನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಜಸ್​ಪ್ರೀತ್ ಬುಮ್ರಾ ಅವರಿದ್ದು 12 ಪಂದ್ಯಗಳಲ್ಲಿ 17 ವಿಕೆಟ್ ಪಡೆದಿದ್ದಾರೆ.

MS Dhoni: ರಾಜಸ್ಥಾನ್ ಸ್ಫೋಟಕ ಚೇಸಿಂಗ್​ ಬಗ್ಗೆ ಪಂದ್ಯ ಮುಗಿದ ಬಳಿಕ ಎಂ. ಎಸ್ ಧೋನಿ ಏನಂದ್ರು ಗೊತ್ತಾ?

IPL 2021, KKR vs SRH: ಹೈದರಾಬಾದ್​ಗೆ ಔಪಚಾರಿಕ ಪಂದ್ಯ: ಕೆಕೆಆರ್ ಗೆದ್ದರೆ ಪ್ಲೇ ಆಫ್​ಗೆ ಮತ್ತಷ್ಟು ಸನಿಹ

(Ruturaj Gaikwad smashes century and take the first place in IPL 2021 Orange Cap list)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ