ಕೊಹ್ಲಿಯಿಂದ ಆರೆಂಜ್ ಕ್ಯಾಪ್ ಕಿತ್ತ ರಿಯಾನ್ ಪರಾಗ್: ಪಾಯಿಂಟ್ಸ್ ಟೇಬಲ್​ನಲ್ಲಿ ರಾಜಸ್ಥಾನ್ ಟಾಪರ್

IPL 2024 Points Table: ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟರ್ ರಿಯಾನ್ ಪರಾಗ್ ಅಗ್ರ ಸ್ಥಾನದಲ್ಲಿದ್ದಾರೆ. ಇವರು ಆಡಿರುವ ಮೂರು ಪಂದ್ಯಗಳಲ್ಲಿ ಒಟ್ಟು 181 ರನ್ ಗಳಿಸಿದ್ದಾರೆ. ಹಾಗೆಯೆ ಆರ್​ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೂಡ ಮೂರು ಪಂದ್ಯಗಳಿಂದ 181 ರನ್ ಕಲೆಹಾಕಿದ್ದಾರೆ.

ಕೊಹ್ಲಿಯಿಂದ ಆರೆಂಜ್ ಕ್ಯಾಪ್ ಕಿತ್ತ ರಿಯಾನ್ ಪರಾಗ್: ಪಾಯಿಂಟ್ಸ್ ಟೇಬಲ್​ನಲ್ಲಿ ರಾಜಸ್ಥಾನ್ ಟಾಪರ್
Riyan Parag and MI vs RR

Updated on: Apr 02, 2024 | 9:11 AM

ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಟೂರ್ನಿ ಆರಂಭವಾಗಿ ಒಂದು ವಾರ ಕಳೆದಿದ್ದು, ಈವರೆಗೆ ಒಟ್ಟು ಹದಿನಾಲ್ಕು ಪಂದ್ಯಗಳು ನಡೆದಿವೆ. ಸೋಮವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ರಿಯಾನ್ ಪರಾಗ್ ಅಜೇಯ 54 ರನ್ ಸಿಡಿಸಿ ಅದ್ಭುತ ಪ್ರದರ್ಶನ ತೋರಿದರು. ಟ್ರೆಂಟ್ ಬೌಲ್ಟ್ 3 ವಿಕೆಟ್ ಕಿತ್ತು ಮಿಂಚಿದರು. ಇಂದು ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೇಂಟ್ಟ್ ತಂಡಗಳು ಮುಖಾಮುಖಿ ಆಗಲಿವೆ. ಇದೀಗ ಐಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ.

  1. ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಸ್ಥಾನದಿಂದ ಅಗ್ರಸ್ಥಾನಕ್ಕೇರಿದೆ. ಆಡಿದ ಮೂರೂ ಪಂದ್ಯದಲ್ಲಿ ಜಯ ಸಾಧಿಸಿ ಆರು ಅಂಕ ಪಡೆದು +1.249 ರನ್​ರೇಟ್ ಹೊಂದಿದೆ.
  2. ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ. ಇವರು ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿ 4 ಪಾಯಿಂಟ್ಸ್ ಪಡೆದಿದೆ. ಇವರ ನೆಟ್​ ರನ್​ರೇಟ್ +1.047 ಆಗಿದೆ.
  3. ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೂರನೇ ಸ್ಥಾನಕ್ಕೆ ಕುಸಿದಿದೆ. ಇವರು ಆಡಿರುವ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಜಯ, ಒಂದರಲ್ಲಿ ಸೋಲು ಕಂಡು ನಾಲ್ಕು ಅಂಕ ಪಡೆದು +0.976 ರನ್​ರೇಟ್ ಹೊಂದಿದೆ.
  4. ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಇವರು ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಜಯ-ಒಂದರಲ್ಲಿ ಸೋಲು ಕಂಡು 4 ಪಾಯಿಂಟ್ಸ್ ಪಡೆದಿದೆ. ಇವರ ನೆಟ್​ ರನ್​ರೇಟ್ -0.738 ಆಗಿದೆ.
  5. ಇನ್ನು ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡ ಆಡಿದ ಮೂರು ಪಂದ್ಯಗಳಲ್ಲಿ ಎರಡು ಸೋಲು- ಒಂದು ಜಯ ಕಂಡು 2 ಪಾಯಿಂಟ್ಸ್ ಪಡೆದು ಐದನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ +0.204ಆಗಿದೆ.
  6. ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ಆರನೇ ಸ್ಥಾನದಲ್ಲಿದೆ. ಇವರು ಆಡಿದ ಎರಡು ಪಂದ್ಯಗಳಲ್ಲಿ ತಲಾ ಒಂದು ಜಯ-ಸೋಲು ಕಂಡು 2 ಅಂಕ ಪಡೆದುಕೊಂಡಿದೆ. ಇವರ ನೆಟ್​ ರನ್​ರೇಟ್ +0.025 ಆಗಿದೆ.
  7. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ ಮೂರು ಪಂದ್ಯಗಳಲ್ಲಿ ಎರಡು ಸೋಲು ಕಂಡು, ಒಂದು ಜಯದೊಂದಿಗೆ 2 ಪಾಯಿಂಟ್ಸ್ ಪಡೆದು ಏಳನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.016 ಆಗಿದೆ.
  8. ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಆಡಿದ ಮೂರು ಪಂದ್ಯದಲ್ಲಿ ಒಂದು ಜಯ, ಎರಡು ಸೋಲು ಕಂಡು 2 ಪಾಯಿಂಟ್ಸ್ ಪಡೆದು ಎಂಟನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ +0.337 ಆಗಿದೆ.
  9. ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಂಬತ್ತನೇ ಸ್ಥಾನಕ್ಕೆ ಕುಸಿದಿದೆ. ಆಡಿದ 3 ಪಂದ್ಯದಲ್ಲಿ ಎರಡು ಸೋಲು, ಒಂದು ಜಯ ಕಂಡು 2 ಅಂಕ ಪಡೆದು ಕೊಂಡಿದೆ. ಇವರ ನೆಟ್​ ರನ್​ರೇಟ್ -0.711 ಆಗಿದೆ.
  10. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಆಡಿದ ಮೂರೂ ಪಂದ್ಯದಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಹತ್ತನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -1.423 ಆಗಿದೆ.

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟರ್ ರಿಯಾನ್ ಪರಾಗ್ ಅಗ್ರ ಸ್ಥಾನದಲ್ಲಿದ್ದಾರೆ. ಇವರು ಆಡಿರುವ ಮೂರು ಪಂದ್ಯಗಳಲ್ಲಿ ಒಟ್ಟು 181 ರನ್ ಗಳಿಸಿದ್ದಾರೆ. ಹಾಗೆಯೆ ಆರ್​ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೂಡ ಮೂರು ಪಂದ್ಯಗಳಿಂದ 181 ರನ್ ಕಲೆಹಾಕಿದ್ದಾರೆ. ಆದರೆ, ಸರಾಸರಿ ಆಧಾರದ ಮೇಲೆ ಪರಾಗ್ ಮೇಲಿದ್ದಾರೆ. ಹೈದರಾಬಾದ್ ತಂಡದ ಹೆನ್ರಿಚ್ ಕ್ಲಾಸೆನ್ ಮೂರನೇ ಸ್ಥಾನದಲ್ಲಿದ್ದಾರೆ. ಇವರು ಆಡಿರುವ ಮೂರು ಪಂದ್ಯಗಳಲ್ಲಿ 167 ರನ್ ಕಲೆಹಾಕಿದ್ದಾರೆ.

ಪರ್ಪಲ್-ಕ್ಯಾಪ್ ಪಟ್ಟಿಯಲ್ಲಿ, ಸಿಎಸ್​ಕೆ ತಂಡದ ಮುಸ್ತಫಿಜುರ್ ರೆಹಮಾನ್ ಒಟ್ಟು 7 ವಿಕೆಟ್ ಪಡೆದು ಅಗ್ರ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ. ಅವರ ಹಿಂದೆ ರಾಜಸ್ಥಾನ್ ತಂಡದ ಯುಜ್ವೇಂದ್ರ ಚಹಲ್ ಅವರಿದ್ದು, ಇವರು ಆಡಿರುವ ಮೂರು ಪಂದ್ಯಗಳಿಂದ 6 ವಿಕೆಟ್ ಪಡೆದಿದ್ದಾರೆ. ಗುಜರಾತ್ ತಂಡದ ಮೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದು, ಇವರು ಕೂಡ 6 ವಿಕೆಟ್ ಕಿತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ