AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ನೇ ವಯಸ್ಸಿಗೆ ಕ್ರಿಕೆಟ್‌ಗೆ ವಿದಾಯ ಹೇಳಿದ ಭಾರತದ ಆಟಗಾರ್ತಿ ಎಸ್. ಮೇಘನಾ!

ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ಎಸ್. ಮೇಘನಾ ತಮ್ಮ 30ನೇ ವಯಸ್ಸಿನಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಟಾಪ್ ಆರ್ಡರ್ ಬ್ಯಾಟರ್ ಆಗಿದ್ದ ಇವರು, ಭಾರತ ತಂಡ ಹಾಗೂ WPL ನಲ್ಲಿ ಆರ್‌ಸಿಬಿ ಪರ ಆಡಿದ್ದರು. ಕೃತಜ್ಞತೆ ವ್ಯಕ್ತಪಡಿಸಿರುವ ಮೇಘನಾ, ನಿವೃತ್ತಿಯ ನಂತರವೂ ಕ್ರಿಕೆಟ್‌ನೊಂದಿಗೆ ತಮ್ಮ ಸಂಬಂಧ ಮುಂದುವರಿಸುವುದಾಗಿ, ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವ ಉದ್ದೇಶ ಹೊಂದಿದ್ದಾರೆ.

30ನೇ ವಯಸ್ಸಿಗೆ ಕ್ರಿಕೆಟ್‌ಗೆ ವಿದಾಯ ಹೇಳಿದ ಭಾರತದ ಆಟಗಾರ್ತಿ ಎಸ್. ಮೇಘನಾ!
S Meghana
ಪೃಥ್ವಿಶಂಕರ
|

Updated on: Oct 23, 2026 | 9:26 PM

Share

ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ಎಸ್. ಮೇಘನಾ ತಮ್ಮ 30ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಟಾಪ್ ಆರ್ಡರ್ ಬ್ಯಾಟರ್ ಆಗಿದ್ದ ಮೇಘನಾ, 2022ರ ಅಕ್ಟೋಬರ್‌ನಲ್ಲಿ ಭಾರತ ತಂಡದ ಪರ ಕೊನೆಯ ಪಂದ್ಯವನ್ನಾಡಿದ್ದರು. ಬಳಿಕ 2025ರ ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಆಡಿದ್ದ ಅವರು, ಇದೀಗ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಆಟಗಾರ್ತಿಯಾಗಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿರುವ ಈ ಸಂದರ್ಭದಲ್ಲಿ ನನ್ನ ಮನಸ್ಸು ಕೃತಜ್ಞತೆಯಿಂದ ತುಂಬಿದೆ. ಕ್ರಿಕೆಟ್ ಮೈದಾನ ನನಗೆ ಎರಡನೇ ಮನೆಯಂತಿತ್ತು. ಅದು ನನಗೆ ಕಷ್ಟಗಳನ್ನು ಎದುರಿಸುವ ಶಕ್ತಿ, ವಿನಯವನ್ನು ಕಲಿಸಿತು. ಜೀವನಪೂರ್ತಿ ನೆನಪಿನಲ್ಲಿ ಉಳಿಯುವ ಅನೇಕ ಕ್ಷಣಗಳು ಮತ್ತು ಸ್ನೇಹಗಳನ್ನು ಕೊಟ್ಟಿದೆ ಎಂದು ಮೇಘನಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಆಂಧ್ರ ಪ್ರದೇಶದ ಆಟಗಾರ್ತಿಯಾಗಿರುವ ಮೇಘನಾ, 2016ರ ನವೆಂಬರ್‌ನಲ್ಲಿ ವಿಜಯವಾಡದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ತಮ್ಮ ಮೊದಲ ಪಂದ್ಯದಲ್ಲಿ 16 ಎಸೆತಗಳಲ್ಲಿ 17 ರನ್ ಗಳಿಸಿದ್ದರು. ಆದರೆ, ಆ ಪಂದ್ಯದಲ್ಲಿ ಭಾರತ 31 ರನ್‌ಗಳಿಂದ ಸೋಲು ಕಂಡಿತ್ತು.

2022ರಲ್ಲಿ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ

ಏಕದಿನ ಕ್ರಿಕೆಟ್‌ಗೆ ಅವರು ಪಾದಾರ್ಪಣೆ ಮಾಡಿದ್ದು 2022ರ ಫೆಬ್ರವರಿಯಲ್ಲಿ. ನ್ಯೂಜಿಲೆಂಡ್‌ನ ಕ್ವೀನ್ಸ್‌ಟೌನ್‌ನಲ್ಲಿ ನಡೆದ ಪಂದ್ಯದಲ್ಲಿ 14 ಎಸೆತಗಳನ್ನು ಎದುರಿಸಿ ಕೇವಲ 4 ರನ್ ಗಳಿಸಿದ್ದರು. ಆದರೆ, ಅದೇ ಸರಣಿಯ ಮುಂದಿನ ಎರಡು ಪಂದ್ಯಗಳಲ್ಲಿ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಎರಡನೇ ಪಂದ್ಯದಲ್ಲಿ 50 ಎಸೆತಗಳಲ್ಲಿ 49 ರನ್ ಗಳಿಸಿದರೆ, ಮೂರನೇ ಪಂದ್ಯದಲ್ಲಿ 41 ಎಸೆತಗಳಲ್ಲಿ 61 ರನ್ ಸಿಡಿಸಿ ಮಿಂಚಿದ್ದರು. ಆದರೆ, ನ್ಯೂಜಿಲೆಂಡ್ ಪ್ರವಾಸದಲ್ಲಿ ಆಡಿದ ಆ ಮೂರು ಪಂದ್ಯಗಳೇ ಅವರ ಏಕದಿನ ವೃತ್ತಿಜೀವನದ ಏಕೈಕ ಪಂದ್ಯಗಳಾದವು. ಏಕದಿನ ಕ್ರಿಕೆಟ್‌ನಲ್ಲಿ ಅವರು ಒಟ್ಟು 114 ರನ್ ಗಳಿಸಿದ್ದಾರೆ. ಭಾರತದ ಪರ 17 ಟಿ20 ಪಂದ್ಯಗಳನ್ನಾಡಿರುವ ಮೇಘನಾ, 102.78ರ ಸ್ಟ್ರೈಕ್‌ರೇಟ್‌ನಲ್ಲಿ ಒಟ್ಟು 258 ರನ್ ಗಳಿಸಿದ್ದಾರೆ. ಈ ಪೈಕಿ ಒಂದು ಅರ್ಧಶತಕವೂ ಸೇರಿದೆ.

ಕ್ರೀಡೆಗಾಗಿ ಕೆಲಸ ಮಾಡುವುದು ನನ್ನ ಉದ್ದೇಶ

ನನ್ನ ಕ್ರಿಕೆಟ್ ಆಟದ ದಿನಗಳು ಮುಗಿದರೂ ಕ್ರಿಕೆಟ್‌ನೊಂದಿಗಿನ ನನ್ನ ಸಂಬಂಧ ಎಂದಿಗೂ ಕೊನೆಗೊಳ್ಳುವುದಿಲ್ಲ. ನಾನು ಸದಾ ಈ ಆಟದೊಂದಿಗೆ ನಿಕಟ ಸಂಬಂಧ ಹೊಂದಿರುತ್ತೇನೆ. ಮುಂದಿನ ಪೀಳಿಗೆಯ ಆಟಗಾರರಿಗೆ ಮಾರ್ಗದರ್ಶನ ನೀಡುವುದು, ಕ್ರಿಕೆಟ್‌ಗೆ ನನ್ನಿಂದ ಸಾಧ್ಯವಾದ ಕೊಡುಗೆ ನೀಡುವುದು ಮತ್ತು ನನಗೆ ಎಲ್ಲವನ್ನೂ ಕೊಟ್ಟ ಈ ಕ್ರೀಡೆಗಾಗಿ ಕೆಲಸ ಮಾಡುವುದು ನನ್ನ ಉದ್ದೇಶವಾಗಿದೆ ಎಂದು ಮೇಘನಾ ತಮ್ಮ ನಿವೃತ್ತಿ ಸಂದೇಶದಲ್ಲಿ ತಿಳಿಸಿದ್ದಾರೆ.

ಆರ್​​ಸಿಬಿ ತಂಡದಲ್ಲಿದ ಮೇಘನಾ

ಮಹಿಳಾ ಪ್ರೀಮಿಯರ್ ಲೀಗ್‌ನಲ್ಲೂ ಮೇಘನಾ ಮೂರು ಆವೃತ್ತಿಗಳಲ್ಲಿ ಆಡಿದ್ದಾರೆ. ಆರಂಭದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸಿದ್ದ ಅವರು, ನಂತರ ಎರಡು ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದರು. 2024ರಲ್ಲಿ ಆರ್‌ಸಿಬಿ ಚೊಚ್ಚಲ ಬಾರಿಗೆ ಡಬ್ಲ್ಯುಪಿಎಲ್ ಪ್ರಶಸ್ತಿ ಗೆದ್ದಾಗ, ಆ ತಂಡದ ಭಾಗವಾಗಿದ್ದರು. ಇದೀಗ ಅಂತರರಾಷ್ಟ್ರೀಯ ಹಾಗೂ ಲೀಗ್ ಕ್ರಿಕೆಟ್‌ನಲ್ಲಿ ಆಡಿದ ಅನುಭವದೊಂದಿಗೆ ಮೇಘನಾ ತಮ್ಮ ಆಟಗಾರ್ತಿಯ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?