AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

288 ರನ್​ಗಳ ಗುರಿ ರೋಚಕ ಘಟ್ಟದಲ್ಲಿ ಸೌತ್ ಆಫ್ರಿಕಾ-ಆಸ್ಟ್ರೇಲಿಯಾ ಪಂದ್ಯ

ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿತ್ತು. ದ್ವಿತೀಯ ಪಂದ್ಯದಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡಿ ಸೌತ್ ಆಫ್ರಿಕಾ ಆಸೀಸ್ ಪಡೆಯನ್ನು ಹೀನಾಯವಾಗಿ ಸೋಲಿಸಿದ್ದರು. ಇದೀಗ ಸರಣಿ ನಿರ್ಣಾಯಕವಾಗಿರುವ ಮೂರನೇ ಪಂದ್ಯ ಕೇಪ್​ಟೌನ್​ನಲ್ಲಿ ನಡೆಯುತ್ತಿದೆ.

288 ರನ್​ಗಳ ಗುರಿ ರೋಚಕ ಘಟ್ಟದಲ್ಲಿ ಸೌತ್ ಆಫ್ರಿಕಾ-ಆಸ್ಟ್ರೇಲಿಯಾ ಪಂದ್ಯ
Sa Vs AusImage Credit source: GettyImages
ಝಾಹಿರ್ ಯೂಸುಫ್
|

Updated on: Oct 31, 2026 | 8:40 AM

Share

ಕೇಪ್​ಟೌನ್​ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ರೋಚಕ ಘಟ್ಟಕ್ಕೆ ಬಂದು ನಿಂತಿದೆ. ಪಂದ್ಯದ ನಾಲ್ಕು ದಿನಗಳ ಆಟ ಮುಗಿದಿದ್ದು, ಇದೀಗ ಐದನೇ ದಿನದಲ್ಲಿ ಕೊನೆಯ ಇನಿಂಗ್ಸ್​ನ ಅಸಲಿ ರೋಚಕತೆ ಶುರುವಾಗಿದೆ. ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ಗೆಲುವಿಗೆ 288 ರನ್​ ಬೇಕಿದ್ದರೆ, ಇತ್ತ ಸೌತ್ ಆಫ್ರಿಕಾ ತಂಡಕ್ಕೆ ಗೆಲ್ಲಲು 10 ವಿಕೆಟ್​ಗಳ ಅಗತ್ಯವಿದೆ. ಹೀಗಾಗಿ ಕೊನೆಯ ದಿನದಾಟದಲ್ಲಿ ಉಭಯ ತಂಡಗಳ ನಡುವೆ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 329 ರನ್ ಕಲೆಹಾಕಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡವು ಜೋಶ್ ಇಂಗ್ಲಿಸ್ (101) ಅವರ ಶತಕದ ನೆರವಿನೊಂದಿಗೆ 429 ರನ್​ ಕಲೆಹಾಕಿ ಸರ್ವಪತನ ಕಂಡಿತು.

100 ರನ್​ಗಳ ಹಿನ್ನಡೆ:

ಮೊದಲ ಇನಿಂಗ್ಸ್​ನಲ್ಲಿನ 100 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ಪರ ರಯಾನ್ ರಿಕೆಲ್ಟನ್ 101 ರನ್ ಬಾರಿಸಿದರೆ, ವಿಯಾನ್ ಮುಲ್ಡರ್ 115 ರನ್ ಚಚ್ಚಿದರು. ಈ ಮೂಲಕ ದ್ವಿತೀಯ ಇನಿಂಗ್ಸ್​ನಲ್ಲಿ 387 ರನ್ ಪೇರಿಸಿ ಆಲೌಟ್ ಆಗಿದೆ.

ಇತ್ತ ಮೊದಲ ಇನಿಂಗ್ಸ್​ನಲ್ಲಿನ 100 ರನ್​ಗಳ ಮುನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡ 288 ರನ್​ಗಳ ಗುರಿ ಪಡೆದುಕೊಂಡಿದೆ. ಇದೀಗ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದ್ದು, ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡ 288 ರನ್ ಕಲೆಹಾಕಲಿದೆಯಾ ಅಥವಾ ಅದರೊಳಗೆ ಸೌತ್ ಆಫ್ರಿಕಾ 10 ವಿಕೆಟ್ ಉರುಳಿಸಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್ , ಮಾರ್ಕ್ಸ್ ಅಕೆರ್ಮನ್ , ಡೇವಿಡ್ ಬೆಡಿಂಗ್ಹ್ಯಾಮ್ , ಟೆಂಬಾ ಬವುಮಾ (ನಾಯಕ) , ಮ್ಯಾಥ್ಯೂ ಬ್ರೀಟ್​​ಝ್ಕೆ , ರಯಾನ್ ರಿಕಲ್ಟನ್ (ವಿಕೆಟ್ ಕೀಪರ್ ), ವಿಯಾನ್ ಮುಲ್ಡರ್ , ಮಾರ್ಕೊ ಯಾನ್ಸೆನ್ , ಸೈಮನ್ ಹಾರ್ಮರ್ , ಜೆರಾಲ್ಡ್ ಕೋಟ್ಝಿ , ಕಗಿಸೊ ರಬಾಡ.

ಇದನ್ನೂ ಓದಿ: ಬೆಂಕಿ ಬಿರುಗಾಳಿ… ಒಂದೇ ಮ್ಯಾಚ್​ನಲ್ಲಿ 20 ದಾಖಲೆಗಳು ಧೂಳೀಪಟ!

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಮ್ಯಾಟ್ ರೆನ್ಶಾ , ಮಾರ್ನಸ್ ಲಾಬುಶೇನ್ , ಕ್ಯಾಮರೋನ್ ಗ್ರೀನ್ , ಜೋಶ್ ಇಂಗ್ಲಿಸ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಕೂಪರ್ ಕೊನೊಲಿ , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಜೋಶ್ ಹೇಝಲ್​ವುಡ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ತಾರಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಆಸ್ತಿ ವಿವಾದ
ತಾರಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಆಸ್ತಿ ವಿವಾದ
ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್
ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್
‘ಬಸವ ಮಂಟಪ’ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು
‘ಬಸವ ಮಂಟಪ’ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು
ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್
ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್
ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್
ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್
ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಚಿನ್ನ ಖರೀದಿಸಬೇಡಿ ಎಂಬ ಕರೆಯನ್ನು ಪಾಲಿಸಿದ ಭಾರತೀಯರಿಗೆ ಮೋದಿ ಮೆಚ್ಚುಗೆ
ಚಿನ್ನ ಖರೀದಿಸಬೇಡಿ ಎಂಬ ಕರೆಯನ್ನು ಪಾಲಿಸಿದ ಭಾರತೀಯರಿಗೆ ಮೋದಿ ಮೆಚ್ಚುಗೆ
ಕೊಚ್ಚಿನ್ ಏರ್​ಪೋರ್ಟ್​ನಲ್ಲಿ ಲೇಖಕ ರವಿ ಹಂಜ್ ವಿಚಾರಣೆ
ಕೊಚ್ಚಿನ್ ಏರ್​ಪೋರ್ಟ್​ನಲ್ಲಿ ಲೇಖಕ ರವಿ ಹಂಜ್ ವಿಚಾರಣೆ
ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಡಿಸಿ ನಿವಾಸದಲ್ಲಿ ಮೋಜು-ಮಸ್ತಿ
ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಡಿಸಿ ನಿವಾಸದಲ್ಲಿ ಮೋಜು-ಮಸ್ತಿ
ನವೆಂಬರ್ 23ರಿಂದ 29ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 23ರಿಂದ 29ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ