VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್..!

England vs South Africa: ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ರೋಚಕ ಜಯ ಸಾಧಿಸಿದೆ. ಸೇಂಟ್​ ಲೂಸಿಯಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 163 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 156 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್..!
Aiden Markram
Follow us
ಝಾಹಿರ್ ಯೂಸುಫ್
|

Updated on: Jun 22, 2024 | 7:53 AM

T20 World Cup 2024: ಟಿ20 ವಿಶ್ವಕಪ್​ನಲ್ಲಿನ ಇಂಗ್ಲೆಂಡ್​ ತಂಡದ ಗೆಲುವಿನ ಓಟಕ್ಕೆ ಸೌತ್ ಆಫ್ರಿಕಾ ಬ್ರೇಕ್ ಹಾಕಿದೆ. ಸೇಂಟ್ ಲೂಸಿಯಾದಲ್ಲಿ ನಡೆದ ಸೂಪರ್-8 ಸುತ್ತಿನ ತನ್ನ 2ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ 38 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 65 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಸೌತ್ ಆಫ್ರಿಕಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 163 ರನ್ ಕಲೆಹಾಕಿತು.

ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 61 ರನ್​ ಕಲೆಹಾಕುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಹ್ಯಾರಿ ಬ್ರೂಕ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಅರ್ಧಶತಕದ ಜೊತೆಯಾಟವಾಡಿದರು.

ಪರಿಣಾಮ ಕೊನೆಯ ಓವರ್​ನಲ್ಲಿ ಇಂಗ್ಲೆಂಡ್ ತಂಡದ ಗೆಲುವಿಗೆ ಕೇವಲ 14 ರನ್​ಗಳ ಅವಶ್ಯಕತೆಯಿತ್ತು. ಆದರೆ ಈ ವೇಳೆ ಐಡೆನ್ ಮಾರ್ಕ್ರಾಮ್ ಹಿಡಿದ ಅಧ್ಭುತ ಕ್ಯಾಚ್​ ಇಡೀ ಪಂದ್ಯದ ಚಿತ್ರಣ ಬದಲಾಯಿತು.

ಮಾರ್ಕ್ರಾಮ್ ಸೂಪರ್​ಮ್ಯಾನ್ ಕ್ಯಾಚ್:

ಅನ್ರಿಕ್ ನೋಕಿಯಾ ಎಸೆದ 20 ಓವರ್​ನ ಮೊದಲ ಎಸೆತದಲ್ಲಿ ಹ್ಯಾರಿ ಬ್ರೂಕ್ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಲು ಯತ್ನಿಸಿದ್ದರು. ಚೆಂಡು ಗಾಳಿಯಲ್ಲಿರುವುದನ್ನು ಗಮನಿಸಿದ ಐಡೆನ್ ಮಾರ್ಕ್ರಾಮ್ ಮಿಡ್ ಆಫ್​ನಿಂದ ಹಿಮ್ಮುಖವಾಗಿ ಓಡಿ ಹೋಗಿ ಅದ್ಭುತವಾಗಿ ಡೈವಿಂಗ್ ಕ್ಯಾಚ್ ಹಿಡಿದರು.

View this post on Instagram

A post shared by ICC (@icc)

ಈ ಅತ್ಯುತ್ತಮ ಕ್ಯಾಚ್​ನಿಂದಾಗಿ 37 ಎಸೆತಗಳಲ್ಲಿ 53 ರನ್ ಬಾರಿಸಿದ ಹ್ಯಾರಿ ಬ್ರೂಕ್ ಔಟಾದರು. ಅದರಲ್ಲೂ ಕೊನೆಯ ಓವರ್​ನಲ್ಲಿ ಸಿಕ್ಕ ಈ ಅಮೂಲ್ಯ ಯಶಸ್ಸಿನಿಂದಾಗಿ ಸೌತ್ ಆಫ್ರಿಕಾ ತಂಡವು ಇಂಗ್ಲೆಂಡ್ ಬ್ಯಾಟರ್​ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

ಪರಿಣಾಮ ಕೊನೆಯ ಓವರ್​ನಲ್ಲಿ ಇಂಗ್ಲೆಂಡ್ ತಂಡವು ಕೇವಲ 6 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 7 ರನ್​ಗಳ ರೋಚಕ ಜಯ ಸಾಧಿಸಿದೆ.

ಇದನ್ನೂ ಓದಿ: Lockie Ferguson: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಲಾಕಿ ಫರ್ಗುಸನ್

ಈ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡವು ಗ್ರೂಪ್-2 ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಈ ಮೂಲಕ ಸೆಮಿಫೈನಲ್​ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಿದೆ.

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ