IND vs SA: ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್; ಏಕದಿನಕ್ಕೆ ರಿಂಕು ಸಿಂಗ್ ಪದಾರ್ಪಣೆ

|

Updated on: Dec 19, 2023 | 4:43 PM

IND vs SA: ಈ ಪಂದ್ಯದ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡನ್ ಮಾರ್ಕ್ರಾಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲಿ ಬದಲಾವಣೆಗಳಾಗಿವೆ.

IND vs SA: ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್; ಏಕದಿನಕ್ಕೆ ರಿಂಕು ಸಿಂಗ್ ಪದಾರ್ಪಣೆ
ಟೀಂ ಇಂಡಿಯಾ
Follow us on

ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ (India vs South Africa) ನಡುವಿನ ಎರಡನೇ ಏಕದಿನ ಪಂದ್ಯ ನವೆಂಬರ್ 19 ರಂದು ಗ್ವೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ (St George’s Park) ನಡೆಯುತ್ತಿದೆ. ಈ ಪಂದ್ಯದ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡನ್ ಮಾರ್ಕ್ರಾಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲಿ ಬದಲಾವಣೆಗಳಾಗಿವೆ. ಅದರಂತೆ ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶ್ರೇಯಸ್ ಅಯ್ಯರ್ ಬದಲಿಗೆ ಟಿ20 ಸೂಪರ್ ಸ್ಟಾರ್ ರಿಂಕು ಸಿಂಗ್​ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ರಿಂಕು ಸಿಂಗ್ ಪದಾರ್ಪಣೆ

ಏಕದಿನ ಸರಣಿಯ ನಂತರ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಹೀಗಾಗಿ ಟೆಸ್ಟ್ ಸರಣಿಗೆ ತಯಾರಿ ನಡೆಸಲು ಶ್ರೇಯಸ್ ಅಯ್ಯರ್ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಶ್ರೇಯಸ್ ಅಯ್ಯರ್ ಬದಲಿಗೆ ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ರಿಂಕು ಸಿಂಗ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿದೆ. ರಿಂಕು ಸಿಂಗ್​ಗೆ ಇದು ಮೊದಲ ಏಕದಿನ ಪಂದ್ಯವಾಗಿದೆ. ರಿಂಕು ಈ ಹಿಂದೆ ಐರ್ಲೆಂಡ್ ವಿರುದ್ಧ ಟಿ20 ಮಾದರಿಗೆ ಪಾದಾರ್ಪಣೆ ಮಾಡಿದ್ದರು.

IND vs SA 2nd ODI Live Score: ಟಾಸ್ ಸೋತ ಭಾರತ; ರುತುರಾಜ್ ಔಟ್

ಉಭಯ ತಂಡಗಳು

ಭಾರತ ತಂಡ: ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

ದಕ್ಷಿಣ ಆಫ್ರಿಕಾ ತಂಡ: ಟೋನಿ ಡಿ ಜೋರ್ಜಿ, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಗರ್, ಲಿಜಾದ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Tue, 19 December 23