SA vs Ind: ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ: ಪ್ರಮುಖ ಆಟಗಾರ ಔಟ್

| Updated By: ಝಾಹಿರ್ ಯೂಸುಫ್

Updated on: Jan 10, 2022 | 4:14 PM

India vs South Africa 3rd Test: ಭಾರತ ತಂಡ ಇದುವರೆಗೆ ಕೇಪ್ ಟೌನ್‌ನಲ್ಲಿ 5 ಪಂದ್ಯಗಳನ್ನು ಆಡಿದೆ. ಆದರೆ ಒಮ್ಮೆಯೂ ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಇದಾಗ್ಯೂ ಈ ಮೈದಾನದಲ್ಲಿ ಭಾರತ ಎರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ.

SA vs Ind: ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ: ಪ್ರಮುಖ ಆಟಗಾರ ಔಟ್
Team India
Follow us on

ಭಾರತ-ದಕ್ಷಿಣ ಆಫ್ರಿಕಾ (India vs South Africa 3rd Test) ನಡುವಣ ಮೂರನೇ ಟೆಸ್ಟ್ ಪಂದ್ಯವು ಮಂಗಳವಾರದಿಂದ ಶುರುವಾಗಲಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಗೆದ್ದರೆ, 2ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯವು ಕೇಪ್​ ಟೌನ್​ನಲ್ಲಿ ನಡೆಯಲಿದ್ದು, ಈ ಪಂದ್ಯವು ಸರಣಿಯ ಫಲಿತಾಂಶವನ್ನು ನಿರ್ಣಯಿಸಲಿದೆ. ಹೀಗಾಗಿ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ. ಅದರಲ್ಲೂ ಕೇಪ್​ ಟೌನ್​ನ ನ್ಯೂಲ್ಯಾಂಡ್ಸ್​ ಪಿಚ್​ ವೇಗಿಗಳಿಗೆ ಸಹಕಾರಿ. ಆದರೆ ಈ ಪಂದ್ಯದಿಂದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೊರಗುಳಿಯುವುದು ಖಚಿತವಾಗಿದೆ. ಜೊಹಾರ್ನ್​ಬರ್ಗ್​​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ವೇಳೆ ಸಿರಾಜ್ ಮಂಡಿರಜ್ಜುಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದರು.

ಇದಾದ ಬಳಿಕ ಮತ್ತೆ ಮೈದಾನದಲ್ಲಿ ಕಾಣಿಸಿಕೊಂಡರೂ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಗಾಯದ ಸಮಸ್ಯೆಯ ಕಾರಣ 3ನೇ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಮೊಹಮ್ಮದ್ ಸಿರಾಜ್ ಸ್ಥಾನದಲ್ಲಿ ಉಮೇಶ್ ಯಾದವ್ ಅಥವಾ ಇಶಾಂತ್ ಶರ್ಮಾ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಇನ್ನು ಈ ಎರಡನೇ ಪಂದ್ಯದಿಂದ ಹೊರಗುಳಿದಿದ್ದ ನಾಯಕ ವಿರಾಟ್ ಕೊಹ್ಲಿ 3ನೇ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಕೊಹ್ಲಿ ಕಂಬ್ಯಾಕ್​ನಿಂದಾಗಿ ತಂಡದಿಂದ ಒಬ್ಬರು ಸ್ಥಾನ ಕಳೆದುಕೊಳ್ಳುವುದು ಖಚಿತ. ಏಕೆಂದರೆ 3ನೇ ಪಂದ್ಯದಲ್ಲಿ ಕೊಹ್ಲಿಯ ಸ್ಥಾನದಲ್ಲಿ ಹನುಮ ವಿಹಾರಿ ಆಡಿದ್ದರು. ಆದರೆ ವಿಹಾರಿ ಉತ್ತಮವಾಗಿ ಬ್ಯಾಟ್ ಮಾಡುವ ಮೂಲಕ ಗಮನ ಸೆಳೆದಿದ್ದರು. ಹೀಗಾಗಿ ಕೊಹ್ಲಿಯ ಕಂಬ್ಯಾಕ್ ಕಾರಣ ತಂಡದಿಂದ ಯಾರನ್ನು ಕೈ ಬಿಡಲಾಗುತ್ತದೆ ಎಂಬುದೇ ಈಗ ಕುತೂಹಲ.

ಒಟ್ಟಿನಲ್ಲಿ ಕೇಪ್​ ಟೌನ್ ಮೈದಾನದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದ್ದು, ಈ ಮೂಲಕ ದಕ್ಷಿಣ ಆಫ್ರಿಕಾದಲ್ಲಿ ಚೊಚ್ಚಲ ಬಾರಿ ಟೆಸ್ಟ್ ಸರಣಿ ಗೆಲ್ಲುವ ಇರಾದೆಯಲ್ಲಿದೆ. ಒಂದು ವೇಳೆ ಟೀಮ್ ಇಂಡಿಯಾ ಕೇಪ್ ಟೌನ್ ಟೆಸ್ಟ್​ ಗೆದ್ದರೆ ದಕ್ಷಿಣ ಆಫ್ರಿಕಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಮೊದಲ ನಾಯಕ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿ ಪಾಲಾಗಲಿದೆ.

ಟೀಮ್ ಇಂಡಿಯಾ ಪಾಲಿಗೆ ಕೇಪ್​ ಟೌನ್ ಕಹಿ:
ಭಾರತ ತಂಡ ಇದುವರೆಗೆ ಕೇಪ್ ಟೌನ್‌ನಲ್ಲಿ 5 ಪಂದ್ಯಗಳನ್ನು ಆಡಿದೆ. ಆದರೆ ಒಮ್ಮೆಯೂ ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಇದಾಗ್ಯೂ ಈ ಮೈದಾನದಲ್ಲಿ ಭಾರತ ಎರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಇನ್ನು ಮೂರರಲ್ಲಿ ಹೀನಾಯ ಸೋಲು ಕಂಡಿರುವುದು ವಿಶೇಷ. ಇನ್ನು ಕಳೆದ ಬಾರಿ ಅಂದರೆ 2018 ರಲ್ಲಿ ಈ ಮೈದಾನದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ದ 72 ರನ್‌ಗಳಿಂದ ಸೋಲನುಭವಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ ಕೊಹ್ಲಿ ಪಡೆ.

ಭಾರತ ತಂಡ ಹೀಗಿದೆ:
ಕೆಎಲ್ ರಾಹುಲ್ , ಮಯಾಂಕ್ ಅಗರ್ವಾಲ್ , ಚೇತೇಶ್ವರ್ ಪೂಜಾರ , ಅಜಿಂಕ್ಯ ರಹಾನೆ , ವಿರಾಟ್ ಕೊಹ್ಲಿ (ನಾಯಕ) , ರಿಷಬ್ ಪಂತ್ (ವಿಕೆಟ್ ಕೀಪರ್ ) , ರವಿಚಂದ್ರನ್ ಅಶ್ವಿನ್ , ಶಾರ್ದೂಲ್ ಠಾಕೂರ್ , ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ , ಉಮೇಶ್ ಯಾದವ್ , ವೃದ್ಧಿಮಾನ್ ಸಹಾ , ಜಯಂತ್ ಯಾದವ್ , ಶ್ರೇಯಸ್ ಅಯ್ಯರ್ , ಹನುಮ ವಿಹಾರಿ , ಪ್ರಿಯಾಂಕ್ ಪಾಂಚಾಲ್ , ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

 

(SA vs Ind: Mohammed Siraj ruled out of third Test)

Published On - 4:13 pm, Mon, 10 January 22