South Africa vs India ODI: ನಾಳೆ ಮೊದಲ ಏಕದಿನ: ಟೀಮ್ ಇಂಡಿಯಾ ಪರ ಪದಾರ್ಪಣೆಗೆ ಸಜ್ಜಾದ ಈ ಆಟಗಾರ

India vs South Africa 1st ODI: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿದೆ. ಈ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಭಾರತ ಪರ ಇಬ್ಬರು ಅಥವಾ ಓರ್ವ ಆಟಗಾರ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.

South Africa vs India ODI: ನಾಳೆ ಮೊದಲ ಏಕದಿನ: ಟೀಮ್ ಇಂಡಿಯಾ ಪರ ಪದಾರ್ಪಣೆಗೆ ಸಜ್ಜಾದ ಈ ಆಟಗಾರ
india vs south africa Second ODI
Follow us
TV9 Web
| Updated By: Vinay Bhat

Updated on: Jan 18, 2022 | 11:23 AM

ನಾಳೆ (ಜ. 19) ಯಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​ನಲ್ಲಿ ನಡೆಯಲಿದ್ದು, ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಇಲ್ಲಿಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡವನ್ನು ಕೆಎಲ್ ರಾಹುಲ್ (KL Rahul) ಮುನ್ನಡೆಸುತ್ತಿದ್ದಾರೆ. ಜಸ್​ಪ್ರೀತ್ ಬುಮ್ರಾ ಉಪ ನಾಯಕನಾಗಿದ್ದಾರೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ಸರಣಿಯನ್ನು ಮುನ್ನಡೆಸುತ್ತಿರುವ ರಾಹುಲ್ ಅಭ್ಯಾಸದ ವೇಳೆ ತಮ್ಮ ಸಹ ಆಟಗಾರರೊಂದಿಗೆ ಸುದೀರ್ಘ ಚರ್ಚೆಯಲ್ಲಿ ತೊಡಗಿ ಗೇಮ್ ಪ್ಲಾನ್ ರೂಪಿಸುತ್ತಿದ್ದಾರೆ. ಐಪಿಎಲ್ ಸೇರಿದಂತೆ ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಗಮನಸೆಳೆದಿರುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಹಾಗೂ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2017ರ ಬಳಿಕ ಮೊದಲ ಬಾರಿಗೆ ಭಾರತ ಏಕದಿನ ತಂಡಕ್ಕೆ ವಾಪಸಾಗಿದ್ದಾರೆ. ಹೀಗೆ ಭಾರತ ತಂಡ ಬಲಿಷ್ಠವಾಗಿದ್ದು, ಯಾವರೀತಿ ಪ್ರದರ್ಶನ ತೋರಲಿದೆ ಎಂಬುದು ಕುತೂಹಲ ಕೆರಳಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಭಾರತ ಪರ ಇಬ್ಬರು ಅಥವಾ ಓರ್ವ ಆಟಗಾರ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ. ಅವರೇ ವೆಂಕಟೇಶ್ ಅಯ್ಯರ್ ಮತ್ತು ರುತುರಾಜ್ ಗಾಯಕ್ವಾಡ್. ಕೆಎಲ್ ರಾಹುಲ್ ಜೊತೆ ಅನುಭವಿ ಓಪನರ್ ಶಿಖರ್ ಧವನ್ ಇರುವ ಕಾರಣ ಗಾಯಕ್ವಾಡ್​ಗೆ ಸ್ಥಾನ ಅನುಮಾನ. ಆದರೆ, ವೆಂಕಟೇಶ್ ಅಯ್ಯರ್​ಗೆ ಸ್ಥಾನ ಖಚಿತವಾಗಿದೆ. ಇವರು ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿ ಆಲ್ರೌಂಡರ್ ಜವಾಬ್ದಾರಿ ಹೊರಲಿದ್ದಾರೆ.

ಅಶ್ವಿನ್​ಗೆ ಸ್ಥಾನ?:

ಸ್ಪಿನ್ನರ್​ಗಳ ಸಾಲಿನಲ್ಲಿ ಯುಜ್ವೇಂದ್ರ ಚಹಾಲ್, ಆರ್. ಅಶ್ವಿನ್ ಮತ್ತು ಜಯಂತ್ ಯಾದವ್ ಸ್ಥಾನ ಪಡೆದುಕೊಂಡಿದ್ದಾರೆ. ಚಹಾಲ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಆದರೆ, ಅನುಭವದ ಆಧಾರದ ಮೇಲೆ ಅಶ್ವಿನ್​ರನ್ನು ಆಡಿಸುತ್ತಾರೋ ಅಥವಾ ಆಲ್ರೌಂಡರ್ ಆಗಿರುವ ಜಯಂತ್​ಗೆ ಸ್ಥಾನ ನೀಡ್ತಾರ ಎಂಬುದು ನೋಡಬೇಕಿದೆ.

ಪಂತ್-ಕಿಶನ್:

ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ಪೈಕಿ ಯಾರಿಗೆ ಸ್ಥಾನ ಎಂಬುದು ಮ್ಯಾನೇಜ್ಮೆಂಟ್​ಗೆ ದೊಡ್ಡ ತಲೆನೋವಾಗಿದೆ. ಇಬ್ಬರೂ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಅವರನ್ನು ಆಡಿಸುವುದೋ ಅಥವಾ ಶ್ರೇಯಸ್ ಅಯ್ಯರ್​ಗೆ ಸ್ಥಾನ ನೀಡಬೇಕಾ ಎಂಬ ಗೊಂದಲದಲ್ಲಿ ಕೋಚ್ ಹಾಗೂ ನಾಯಕನಿದ್ದಾರೆ.

ಸಿರಾಜ್ ಫಿಟ್:

ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ವೇಳೆ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದರಿಂದಾಗಿ ಮೂರನೇ ಟೆಸ್ಟ್​ಗೆ ಅಲಭ್ಯರಾಗಿದ್ದರು. ಅಲ್ಲದೆ ಸಿರಾಜ್ ಚೇತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೀಸಲು ಆಟಗಾರನಾಗಿ ವೇಗದ ಬೌಲರ್ ನವದೀಪ್ ಸೈನಿ ಏಕದಿನ ತಂಡಕ್ಕೆ ಬಿಸಿಸಿಐ ಹೆಸರಿಸಿತ್ತು. ಆದರೀಗ ಸಿರಾಜ್ ಸಂಪೂರ್ಣ ಗುಣಮುಖರಾಗಿದ್ದು, ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಬುಮ್ರಾ ಮಾಹಿತಿ ನೀಡಿದ್ದಾರೆ.

ಏಕದಿನ ಸರಣಿಗೆ ಭಾರತ ತಂಡ:

ಕೆ.ಎಲ್.ರಾಹುಲ್ (ನಾಯಕ), ಜಸ್‌ಪ್ರೀತ್ ಬುಮ್ರಾ (ಉಪ-ನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ಕೀಪರ್), ಇಶಾನ್ ಕಿಶನ್ (ವಿಕೆಟ್‌ಕೀಪರ್), ಯುಜ್ವೇಂದ್ರ ಚಹಾಲ್, ಆರ್. ಅಶ್ವಿನ್, ಭುವನೇಶ್ವರ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಯಂತ್ ಯಾದವ್ ಹಾಗೂ ನವದೀಪ್ ಸೈನಿ.

South Africa vs India: ಏಕದಿನ ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಗುಡ್ ನ್ಯೂಸ್: ಸ್ಟಾರ್ ಆಟಗಾರ ಕಮ್​ಬ್ಯಾಕ್

Beijing Winter Olympic: ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌: ವೀಕ್ಷಕರಿಗಿಲ್ಲ ಅವಕಾಶ, ಟಿಕೆಟ್ ಮಾರಾಟ ನಿಷೇಧ

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು