Tony de Zorzi: ಟೀಮ್ ಇಂಡಿಯಾ ವಿರುದ್ಧ ಸೆಂಚುರಿ ಸಿಡಿಸಿ ದಾಖಲೆ ಬರೆದ ಟೋನಿ

| Updated By: ಝಾಹಿರ್ ಯೂಸುಫ್

Updated on: Dec 20, 2023 | 6:57 AM

SA vs IND 2nd ODI: 212 ರನ್​ಗಳ ಸುಲಭ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡಕ್ಕೆ ರೀಝ ಹೆಂಡ್ರಿಕ್ಸ್ ಹಾಗೂ ಟೋನಿ ಡಿ ಝೋರ್ಝಿ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 130 ರನ್​ ಬಾರಿಸಿ ಹೆಂಡ್ರಿಕ್ಸ್​ (52) ಔಟಾಗಿದ್ದರು. ಆದರೆ ಮತ್ತೊಂದೆಡೆ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ್ದ ಟೋನಿ ಡಿ ಝೋರ್ಝಿ 122 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 119 ರನ್ ಬಾರಿಸಿದರು.

Tony de Zorzi: ಟೀಮ್ ಇಂಡಿಯಾ ವಿರುದ್ಧ ಸೆಂಚುರಿ ಸಿಡಿಸಿ ದಾಖಲೆ ಬರೆದ ಟೋನಿ
Tony de Zorzi
Follow us on

ಗೆಬ್ಬೆಗಾದ ಸೆಂಟ್ ಜಾರ್ಜ್​​ ಪಾರ್ಕ್​ನಲ್ಲಿ ನಡೆದ ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ (Team India) ಪರ ಸಾಯಿ ಸುದರ್ಸನ್ (62) ಹಾಗೂ ಕೆಎಲ್ ರಾಹುಲ್ (56) ಅರ್ಧಶತಕ ಬಾರಿಸಿದ್ದರು. ಇದಾಗ್ಯೂ 46.2 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು 211 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಸೌತ್ ಆಫ್ರಿಕಾ ಬೌಲರ್​ಗಳು ಯಶಸ್ವಿಯಾಗಿದ್ದರು.

212 ರನ್​ಗಳ ಸುಲಭ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡಕ್ಕೆ ರೀಝ ಹೆಂಡ್ರಿಕ್ಸ್ ಹಾಗೂ ಟೋನಿ ಡಿ ಝೋರ್ಝಿ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 130 ರನ್​ ಬಾರಿಸಿ ಹೆಂಡ್ರಿಕ್ಸ್​ (52) ಔಟಾಗಿದ್ದರು. ಆದರೆ ಮತ್ತೊಂದೆಡೆ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ್ದ ಟೋನಿ ಡಿ ಝೋರ್ಝಿ 122 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 119 ರನ್ ಬಾರಿಸಿದರು. ಈ ಶತಕದ ನೆರವಿನಿಂದ ಸೌತ್ ಆಫ್ರಿಕಾ ತಂಡವು 42.3 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿಮುಟ್ಟುವ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಈ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸಿ ಮಿಂಚಿದ್ದ ಟೋನಿ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡರು. ಅಂದರೆ ಕಳೆದೊಂದು ದಶಕದಿಂದ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಶತಕ ಬಾರಿಸಿದ ಮೂರನೇ ಸೌತ್ ಆಫ್ರಿಕಾದ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆ ಟೋನಿ ಡಿ ಝೋರ್ಝಿ ಪಾತ್ರರಾದರು.

ಇದಕ್ಕೂ ಮುನ್ನ ಕ್ವಿಂಟನ್ ಡಿಕಾಕ್ ಹಾಗೂ ಹಾಶಿಮ್ ಆಮ್ಲ ಈ ಸಾಧನೆ ಮಾಡಿದ್ದರು. ಅಷ್ಟೇ ಅಲ್ಲದೆ ಸೆಂಟ್ ಜಾರ್ಜ್​​ ಪಾರ್ಕ್​ ಸ್ಟೇಡಿಯಂನಲ್ಲಿ ಭಾರತದ ವಿರುದ್ಧ ಶತಕ ಬಾರಿಸಿದ ಸೌತ್ ಆಫ್ರಿಕಾದ ಮೊದಲ ಬ್ಯಾಟರ್ ಎಂಬ ವಿಶೇಷ ದಾಖಲೆ ಕೂಡ ಟೋನಿ ಪಾಲಾಯಿತು. ಈ ಮೂಲಕ ತಮ್ಮ 4ನೇ ಏಕದಿನ ಪಂದ್ಯದಲ್ಲೇ ಸೌತ್ ಆಫ್ರಿಕಾ ತಂಡದ 26 ವರ್ಷದ ಯುವ ಬ್ಯಾಟರ್​ ಟೋನಿ ಡಿ ಝೋರ್ಝಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಟೋನಿ ಡಿ ಝೋರ್ಝಿ , ರೀಝ ಹೆಂಡ್ರಿಕ್ಸ್ , ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ , ಐಡೆನ್ ಮಾರ್ಕ್ರಾಮ್ (ನಾಯಕ) , ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್) , ಡೇವಿಡ್ ಮಿಲ್ಲರ್ , ವಿಯಾನ್ ಮುಲ್ಡರ್ , ಕೇಶವ್ ಮಹಾರಾಜ್ , ನಾಂಡ್ರೆ ಬರ್ಗರ್ , ಲಿಜಾದ್ ವಿಲಿಯಮ್ಸ್ , ಬ್ಯೂರಾನ್ ಹೆಂಡ್.

ಇದನ್ನೂ ಓದಿ: IPL 2024 RCB Squad: RCB ಹೊಸ ತಂಡ ಹೀಗಿದೆ

ಟೀಮ್ ಇಂಡಿಯಾ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್ , ಸಾಯಿ ಸುದರ್ಸನ್, ತಿಲಕ್ ವರ್ಮಾ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಕೆಎಲ್ ರಾಹುಲ್ (ನಾಯಕ) , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷ್ದೀಪ್ ಸಿಂಗ್ , ಅವೇಶ್ ಖಾನ್ , ಕುಲದೀಪ್ ಯಾದವ್ , ಮುಕೇಶ್ ಕುಮಾರ್.