SA vs IND: ದಕ್ಷಿಣ ಆಫ್ರಿಕಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಲು ಇದುವೇ ಕಾರಣ..!

SA vs IND: ದಕ್ಷಿಣ ಆಫ್ರಿಕಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಲು ಇದುವೇ ಕಾರಣ..!
SA vs IND

India vs South Africa: 1990 ರ ದಶಕದವರೆಗೆ ಸಕ್ರಿಯ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಟುಟು ಅವರಿಗೆ ಕೆಲ ವರ್ಷಗಳ ಹಿಂದೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.

TV9kannada Web Team

| Edited By: Zahir PY

Dec 26, 2021 | 3:51 PM

ಭಾರತ-ದಕ್ಷಿಣ ಆಫ್ರಿಕಾ ನಡುವಣ ಬಾಕ್ಸಿಂಗ್ ಡೇ ಟೆಸ್ಟ್​ ಶುರುವಾಗಿದೆ. ಸೆಂಚುರಿಯನ್‌ನಲ್ಲಿರುವ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಅದರಂತೆ ಫೀಲ್ಡಿಂಗ್​ಗೆ ಆಗಮಿಸಿದ ದಕ್ಷಿಣ ಆಫ್ರಿಕಾ ಆಟಗಾರರು ಕಪ್ಪು ತೋಳು ಪಟ್ಟಿಯನ್ನು ಧರಿಸಿ ಕಣಕ್ಕಿಳಿದಿದ್ದರು. ಇದಕ್ಕೆ ಮುಖ್ಯ ಕಾರಣ ಭಾನುವಾರ ದಕ್ಷಿಣ ಆಫ್ರಿಕಾದ ಆರ್ಚ್​ಬಿಷಪ್ ಡೆಸ್ಮೆಂಡ್ ಟುಟು ನಿಧನರಾಗಿರುವುದು. ಹೌದು, ಡೆಸ್ಮಂಡ್ ಟುಟು ಅವರ ನಿಧನಕ್ಕೆ ಸಂತಾಸ ಸೂಚಿಸಿ ದಕ್ಷಿಣ ಆಫ್ರಿಕಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.

90 ವರ್ಷ ವಯಸ್ಸಿನವರಾಗಿದ್ದ ಡೆಸ್ಮೆಂಡ್ ಟುಟು ಅವರು ತಮ್ಮ ಜೀವನದುದ್ದಕ್ಕೂ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ್ದರು. ಇದೇ ಕಾರಣದಿಂದ ಅವರನ್ನು ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿಯ ವಿರೋಧಿ ಸಂಕೇತ ಎಂದೂ ಕರೆಯಲಾಗುತ್ತದೆ. ಅಷ್ಟೇ ಅಲ್ಲದೆ ಅವರ ಈ ಹೋರಾಟದ ಫಲವಾಗಿ 1984 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಪಡೆದಿದ್ದರು.

1990 ರ ದಶಕದವರೆಗೆ ಸಕ್ರಿಯ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಟುಟು ಅವರಿಗೆ ಕೆಲ ವರ್ಷಗಳ ಹಿಂದೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೀಗಾಗಿ ಹಲವು ವರ್ಷಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಭಾನುವಾರ ತಮ್ಮ 90ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಮೊದಲ ಟೆಸ್ಟ್​ ಪಂದ್ಯಕ್ಕಾಗಿ ಉಭಯ ತಂಡಗಳು ಹೀಗಿವೆ: ಭಾರತದ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್. ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್

ದಕ್ಷಿಣ ಆಫ್ರಿಕಾದ ಪ್ಲೇಯಿಂಗ್ ಇಲೆವೆನ್: ಡೀನ್ ಎಲ್ಗರ್ (ನಾಯಕ), ಏಡನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರೋಸಿ ವ್ಯಾನ್ ಡರ್ ಡುಸ್ಸೆನ್, ಟೆಂಬಾ ಬೌಮಾ, ಕ್ವಿಂಟನ್ ಡಿ ಕಾಕ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಮಾರ್ಕೊ ಜಾನ್ಸನ್

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(SA vs IND: Why are South African players wearing black armbands?)

Follow us on

Related Stories

Most Read Stories

Click on your DTH Provider to Add TV9 Kannada