AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs NZ: ನಿರ್ಣಾಯಕ ಪಂದ್ಯದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ

South Africa vs New Zealand T20: ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ 4ನೇ ಟಿ20 ಪಂದ್ಯದಲ್ಲಿ ಆಫ್ರಿಕಾ ತಂಡ 19 ರನ್‌ಗಳ ಗೆಲುವು ಸಾಧಿಸಿ ಸರಣಿಯನ್ನು 2-2ಕ್ಕೆ ಸಮಬಲಗೊಳಿಸಿದೆ. ಕಾನರ್ ಎಸ್ಟರ್‌ಹೈಜೆನ್ ಅವರ ಅರ್ಧಶತಕ (57 ರನ್) ಮತ್ತು ಜೆರಾಲ್ಡ್ ಕೋಟ್ಜಿಯಾ ಅವರ 3 ವಿಕೆಟ್‌ಗಳ ನೆರವಿನಿಂದ ದಕ್ಷಿಣ ಆಫ್ರಿಕಾ 164 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ನ್ಯೂಜಿಲೆಂಡ್ 145 ರನ್‌ಗಳಿಗೆ ಆಲೌಟ್ ಆಯಿತು. ಅಂತಿಮ ಪಂದ್ಯ ಸರಣಿ ವಿಜೇತರನ್ನು ನಿರ್ಧರಿಸಲಿದೆ.

SA vs NZ: ನಿರ್ಣಾಯಕ ಪಂದ್ಯದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ
Sa Vs Nz
ಪೃಥ್ವಿಶಂಕರ
|

Updated on: Mar 22, 2026 | 9:07 PM

Share

ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ (South Africa vs New Zealand) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಫ್ರಿಕಾ ತಂಡ ಗೆಲುವು ಸಾಧಿಸಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ತಂಡವನ್ನು 19 ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಉಭಯ ತಂಡಗಳ ನಡುವಿನ ಈ ಸರಣಿಯನ್ನು 2-2 ರಿಂದ ಸಮಬಲಗೊಂಡಿದೆ. ಹೀಗಾಗಿ ಐದನೇ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 164 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 145 ರನ್​ಗಳಿಗೆ ಆಲೌಟ್ ಆಗುವ ಮೂಲಕ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತು.

164 ರನ್ ಗಳಿಸಿದ ಆಫ್ರಿಕಾ

ಸ್ಕೈ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 164 ರನ್ ಗಳಿಸಿತು. ಮೊದಲ ಓವರ್‌ನಲ್ಲಿಯೇ ಆರಂಭಿಕ ಆಟಗಾರ ವಿಯಾನ್ ಮುಲ್ಡರ್ ಅವರನ್ನು ಕಳೆದುಕೊಂಡರೂ, ಕಾನರ್ ಎಸ್ಟರ್‌ಹೈಜೆನ್ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಪಾದಾರ್ಪಣೆ ಸರಣಿಯ 4ನೇ ಪಂದ್ಯದಲ್ಲಿ ಮಿಂಚಿದ ಕಾನರ್ 36 ಎಸೆತಗಳಲ್ಲಿ 57 ರನ್​ಗಳ ಇನ್ನಿಂಗ್ಸ್ ಆಡಿದರು. ಇದರಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಇದು ಕಾನರ್ ಅವರ ವೃತ್ತಿಜೀವನದ ಮೊದಲ ಅರ್ಧಶತಕವಾಗಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು. ಇವರನ್ನು ಹೊರತುಪಡಿಸಿ ರೂಬಿನ್ ಹರ್ಮನ್ ಕೂಡ 28 ರನ್​ಗಳ ಕಾಣಿಕೆ ನೀಡಿದರು. ಉಳಿದಂತೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಸಣ್ಣ ಆದರೆ ಪ್ರಮುಖ ಕೊಡುಗೆ ನೀಡಿದರು. ನ್ಯೂಜಿಲೆಂಡ್ ಪರ ಕೈಲ್ ಜೇಮಿಸನ್ 2 ವಿಕೆಟ್ ಪಡೆದರು.

145 ರನ್‌ಗಳಿಗೆ ಕಿವೀಸ್ ಆಲೌಟ್

ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್​ಗೆ ಉತ್ತಮ ಆರಂಭ ಸಿಗಲಿಲ್ಲ.ಆರಂಭಿಕ ಆಟಗಾರ ಕೀಟನ್ ಕ್ಲಾರ್ಕ್ ಬೇಗನೇ ವಿಕೆಟ್ ಒಪ್ಪಿಸಿದರು. ಆದರೆ ಟಿಮ್ ರಾಬಿನ್ಸನ್ ಮತ್ತು ಡೇನ್ ಕ್ಲೀವರ್ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿದರು. ಆದಾಗ್ಯೂ, 9 ನೇ ಓವರ್ ವೇಳೆಗೆ ಇಬ್ಬರೂ ಪೆವಿಲಿಯನ್‌ ಸೇರಿಕೊಂಡರು. ಅದಾದ ನಂತರ, ಕಿವೀಸ್ ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪರೇಡ್ ಶುರುವಾಯಿತು. ಆಫ್ರಿಕಾ ಸ್ಪಿನ್ ದಾಳಿಗೆ ನಲುಗಿದ ಕಿವೀಸ್ ತಂಡವು ಅಂತಿಮವಾಗಿ 18.5 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್ ಆಯಿತು. ಅಫ್ರಿಕಾ ಪರ ಇಬ್ಬರೂ ಬೌಲರ್‌ಗಳು ತಲಾ ಎರಡು ವಿಕೆಟ್‌ಗಳನ್ನು ಪಡೆದರೆ, ವೇಗದ ಬೌಲರ್ ಜೆರಾಲ್ಡ್ ಕೋಟ್ಜಿಯಾ ಮೂರು ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!