AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs NZ: ಮೊದಲ ಸೆಮೀಸ್ ಕಾಳಗಕ್ಕೆ ಮಳೆ ಅಡ್ಡಿ? ಮೀಸಲು ದಿನದ ನಿಯಮವೇನು?

South Africa vs New Zealand Semifinal: ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಮಾರ್ಚ್ 4 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಹವಾಮಾನ ಸ್ಪಷ್ಟವಾಗಿದ್ದು, ಮಳೆಯ ಭೀತಿ ಇಲ್ಲ. ಈಡನ್ ಗಾರ್ಡನ್ಸ್ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದ್ದು, ಇಬ್ಬನಿ ಕಾರಣದಿಂದ ಎರಡನೇ ಇನ್ನಿಂಗ್ಸ್‌ನಲ್ಲಿ ಗುರಿ ಬೆನ್ನಟ್ಟುವುದು ಸುಲಭ. ಪಂದ್ಯ ರದ್ದುಗೊಂಡರೆ ಮಾರ್ಚ್ 5 ಮೀಸಲು ದಿನವಾಗಿದ್ದು, ಆಗಲೂ ಸಾಧ್ಯವಾಗದಿದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಫೈನಲ್‌ಗೆ ಪ್ರವೇಶಿಸಲಿದೆ.

SA vs NZ: ಮೊದಲ ಸೆಮೀಸ್ ಕಾಳಗಕ್ಕೆ ಮಳೆ ಅಡ್ಡಿ? ಮೀಸಲು ದಿನದ ನಿಯಮವೇನು?
Sa Vs Nz Weather
ಪೃಥ್ವಿಶಂಕರ
|

Updated on: Mar 03, 2026 | 10:05 PM

Share

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ತಂಡಗಳು 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ (T20 World Cup Semifinal 2026) ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಮಾರ್ಚ್ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ತಲುಪಲು ಎದುರು ನೋಡುತ್ತಿವೆ. ದಕ್ಷಿಣ ಆಫ್ರಿಕಾ ಈ ಪಂದ್ಯಾವಳಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಮತ್ತೊಂದೆಡೆ, ಅದೃಷ್ಟದ ಬಲದಿಂದ ನ್ಯೂಜಿಲೆಂಡ್ ಸೆಮಿಫೈನಲ್ ತಲುಪಿದೆ. ಈಗ ಉಭಯ ತಂಡಗಳು ಸೆಮಿಫೈನಲ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಕೋಲ್ಕತ್ತಾದ ಹವಾಮಾನ ಹೇಗಿರಲಿದೆ? ಈ ಪಂದ್ಯಕ್ಕೆ ಮೀಸಲು ದಿನವಿದೆಯಾ?. ಮೀಸಲು ದಿನದ ನಿಯಮಗಳೇನು? ಹಾಗೆಯೇ ಈಡನ್ ಗಾರ್ಡನ್ಸ್‌ ಪಿಚ್ ಯಾರಿಗೆ ಸಹಕಾರಿಯಾಗಲಿದೆ ಎಂಬ ವರದಿ ಇಲ್ಲಿದೆ.

ಹವಾಮಾನ ಹೇಗಿರುತ್ತದೆ?

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಾರ್ಚ್ 4 ರಂದು ಕೋಲ್ಕತ್ತಾದಲ್ಲಿ ಆಕಾಶವು ಸ್ಪಷ್ಟವಾಗಿರಲಿದೆ. ಅಂದರೆ ಮಳೆ ಬರುವ ಸಾಧ್ಯತೆ ಇಲ್ಲ. ಆದ್ದರಿಂದ, ಈ ಪಂದ್ಯವನ್ನು ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ವೀಕ್ಷಿಸಬಹುದು. ಕನಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಆದ್ದರಿಂದ, ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಇರಲಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡುವುದು ಕಷ್ಟಕರವಾಗುತ್ತದೆ. ಆದ್ದರಿಂದ, ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವ ಸಾಧ್ಯತೆಗಳು ಹೆಚ್ಚಿವೆ.

ಮೀಸಲು ದಿನ ನಿಗದಿ

ನಿಗದಿಪಡಿಸಿದ ದಿನದಂದು ಮಳೆ ಅಥವಾ ಇತರೆ ಕಾರಣದಿಂದಾಗಿ ಪಂದ್ಯ ನಡೆಯದಿದ್ದರೆ, ಮೀಸಲು ದಿನದಂದು ಪಂದ್ಯವನ್ನು ನಡೆಸಲಾಗುತ್ತದೆ. ಇದರರ್ಥ ಐಸಿಸಿ ಈ ಎರಡು ಸೆಮಿಫೈನಲ್ ಪಂದ್ಯಗಳಿಗೆ ಮೀಸಲು ದಿನವನ್ನು ನಿಗದಿಪಡಿಸಿದೆ. ಅಂದರೆ ಮಾರ್ಚ್​ 4 ರಂದು ನಡೆಯಬೇಕಿರುವ ಮೊದಲ ಸೆಮಿಫೈನಲ್‌ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ, ಈ ಪಂದ್ಯವನ್ನು ಮಾರ್ಚ್​ 5 ರಂದು ನಡೆಸಲಾಗುತ್ತದೆ. ಆ ದಿನದಂದು ಕೂಡ ಪಂದ್ಯ ನಡೆಯದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ಫೈನಲ್​ಗೇರಲಿದೆ. ಅಂದರೆ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಫೈನಲ್​ಗೆ ಟಿಕೆಟ್ ಪಡೆಯಲಿದೆ.

ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

ಈಡನ್ ಗಾರ್ಡನ್ಸ್ ಪಿಚ್ ಯಾರಿಗೆ ಸಹಕಾರಿ?

ಈಡನ್ ಗಾರ್ಡನ್ಸ್‌ನ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಹೀಗಾಗಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಯಾಗುವುದರಲ್ಲಿ ಸಂದೇಹವಿಲ್ಲ. ಚೆಂಡು ವಿಕೆಟ್ ಮೇಲೆ ಉತ್ತಮ ಬೌನ್ಸ್ ಪಡೆಯುತ್ತದೆ ಮತ್ತು ಚೆಂಡು ಬ್ಯಾಟ್‌ಗೆ ಬರುತ್ತದೆ. ಅಲ್ಲದೆ ಇಲ್ಲಿ ಇಬ್ಬನಿ ಪ್ರಮುಖ ಪಾತ್ರವಹಿಸುವುದರಿಂದ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡುವುದು ಉತ್ತಮ ಆಯ್ಕೆ. ಏಕೆಂದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಗುರಿ ಬೆನ್ನಟ್ಟುವುದು ಸುಲಭವಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!