ಐಸಿಸಿ ಏಕದಿನ ವಿಶ್ವಕಪ್ 2023ರ (ICC ODI World Cup 2023) 32ನೇ ಪಂದ್ಯದಲ್ಲಿ ಇಂದು ಅಂದರೆ ನವೆಂಬರ್ 1 ರಂದು ಎರಡು ಬಲಿಷ್ಠ ತಂಡಗಳಾದ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (New Zealand vs South Africa) ಮುಖಾಮುಖಿಯಾಗುತ್ತಿವೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವೆ ಈ ಹಣಾಹಣಿ ನಡೆಯಲಿದೆ. ಈ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಅಗ್ರ-5ರಲ್ಲಿ ಸ್ಥಾನ ಪಡೆದಿವೆ. ಇಂತಹ ಪರಿಸ್ಥಿತಿಯಲ್ಲಿ ಯಾವ ತಂಡ ಗೆದ್ದರೂ ಸೆಮಿಫೈನಲ್ ಕಡೆಗೆ ಮತ್ತೊಂದು ಬಲಿಷ್ಠ ಹೆಜ್ಜೆ ಇಡಲಿದೆ. ಅದೇ ಸಮಯದಲ್ಲಿ, ಸೋತ ತಂಡಕ್ಕೆ ಸೆಮಿಸ್ ಲೆಕ್ಕಾಚಾರದಲ್ಲಿ ದೊಡ್ಡ ಹೊಡೆತ ಬೀಳಲಿದೆ. ಅದರಲ್ಲೂ ಸತತ ಎರಡು ಸೋಲುಗಳನ್ನು ಎದುರಿಸಿರುವ ನ್ಯೂಜಿಲೆಂಡ್‌ಗೆ ಈ ಪಂದ್ಯ ಗೆಲ್ಲುವುದು ಅತ್ಯಂತ ಮಹತ್ವದ್ದಾಗಿದೆ.
2023 ರ ವಿಶ್ವಕಪ್‌ನಲ್ಲಿ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್‌ನಲ್ಲಿ ಒಟ್ಟು ಎರಡು ಪಂದ್ಯಗಳನ್ನು ಆಡಲಾಗಿದೆ. ಈ ಎರಡೂ ಪಂದ್ಯಗಳಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ತಂಡವೇ ಗೆದ್ದಿದೆ. ಮೊದಲ ಪಂದ್ಯ ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಏಳು ವಿಕೆಟ್‌ಗಳ ಜಯ ಸಾಧಿಸಿತ್ತು. ಅಫ್ಘಾನಿಸ್ತಾನ ಕೂಡ ಇದೇ ಮೈದಾನದಲ್ಲಿ ಶ್ರೀಲಂಕಾವನ್ನು 7 ರನ್‌ಗಳಿಂದ ಸೋಲಿಸಿತು.
ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ ಎರಡನೇ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ..!
ಇಂತಹ ಪರಿಸ್ಥಿತಿಯಲ್ಲಿ ಪುಣೆಯಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸುತ್ತದೆ ಎಂಬ ವಿಷಯ ಸ್ಪಷ್ಟವಾಗಿದೆ. ಪುಣೆಯ ಪಿಚ್‌ನಲ್ಲಿ ವೇಗದ ಬೌಲರ್‌ಗಳಿಗೆ ಸಾಕಷ್ಟು ಸಹಾಯವಿದೆ. ಹಾಗೆಯೇ ಪಿಚ್‌ನಲ್ಲಿ ಬೌನ್ಸ್ ಕೂಡ ಚೆನ್ನಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬ್ಯಾಟ್ಸ್‌ಮನ್‌ಗಳು ಹೊಸ ಚೆಂಡಿನೊಂದಿಗೆ ಆಡಲು ಸಾಕಷ್ಟು ತೊಂದರೆ ಎದುರಿಸಬೇಕಾಗುತ್ತದೆ.
ಸಂಜೆಯ ವೇಳೆಗೆ ಅದರಲ್ಲೂ ಪಿಚ್ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಸೂಕ್ತವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಮೈದಾನದಲ್ಲಿ 280 ರಿಂದ 300 ರ ನಡುವಿನ ಟಾರ್ಗೆಟ್ ಹೋರಾಟದ ಮೊತ್ತವಾಗಿರುತ್ತದೆ. ಆದಾಗ್ಯೂ, ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ತಂಡವು 350 ಕ್ಕೂ ಅಧಿಕ ಟಾರ್ಗೆಟ್ ನೀಡಲು ಪ್ರಯತ್ನಿಸಬೇಕಾಗುತ್ತದೆ.
ನವೆಂಬರ್ 1 ರಂದು ಪುಣೆಯಲ್ಲಿ ಹವಾಮಾನವು ಸಂಪೂರ್ಣವಾಗಿ ಸ್ಪಷ್ಟವಾಗಿರುತ್ತದೆ. ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದೆ. ಗರಿಷ್ಠ ತಾಪಮಾನ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 29 ಡಿಗ್ರಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ.
ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇದುವರೆಗೆ ನಡೆದ 71 ಏಕದಿನ ಪಂದ್ಯಗಳಲ್ಲಿ ನ್ಯೂಜಿಲೆಂಡ್ 25 ಮತ್ತು ದಕ್ಷಿಣ ಆಫ್ರಿಕಾ 41 ಪಂದ್ಯಗಳನ್ನು ಗೆದ್ದಿವೆ. ಉಭಯ ತಂಡಗಳ ನಡುವೆ ತಟಸ್ಥ ಸ್ಥಳಗಳಲ್ಲಿ ನಡೆದ 20 ಏಕದಿನ ಪಂದ್ಯಗಳಲ್ಲಿ, ನ್ಯೂಜಿಲೆಂಡ್ 8 ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 12 ಪಂದ್ಯಗಳನ್ನು ಗೆದ್ದಿದೆ, 5 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ.
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್/ನಾಯಕ), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಟಿಮ್ ಸೌಥಿ, ಇಶ್ ಸೋಧಿ, ಮಾರ್ಕ್ ಚಾಪ್ಮನ್
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ತಬ್ರೈಜ್ ಶಮ್ಸಿ, ರೀಜಾ ಹೆಂಡ್ರಿಕ್ಸ್, ಕಗಿಸೊ ರಬಾಡ, ಆಂಡಿಲೆ ಫೆಹ್ಲುಕ್ವಾಯೊ, ಲಿಜಾಡ್ ವಿಲಿಯಮ್ಸ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:06 am, Wed, 1 November 23