SA vs PAK: ಚೊಚ್ಚಲ ಟೆಸ್ಟ್ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್; ಇತಿಹಾಸ ಬರೆದ ಆಫ್ರಿಕಾ ವೇಗಿ

SA vs PAK: ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ, ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ಆಫ್ರಿಕಾದ ಕಾರ್ಬಿನ್ ಬಾಷ್ ಅವರು ತಮ್ಮ ಮೊದಲ ಎಸೆತದಲ್ಲೇ ವಿಕೆಟ್ ಪಡೆದು ಇತಿಹಾಸ ನಿರ್ಮಿಸಿದ್ದಾರೆ. ಇದರ ಜೊತೆಗೆ ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಪದಾರ್ಪಣೆ ಮಾಡಿ ಈ ಸಾಧನೆ ಮಾಡಿದ ಆಫ್ರಿಕಾದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

SA vs PAK: ಚೊಚ್ಚಲ ಟೆಸ್ಟ್ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್; ಇತಿಹಾಸ ಬರೆದ ಆಫ್ರಿಕಾ ವೇಗಿ
ಕಾರ್ಬಿನ್ ಬಾಷ್
Follow us
ಪೃಥ್ವಿಶಂಕರ
|

Updated on: Dec 26, 2024 | 5:36 PM

ಒಂದೆಡೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ನಡೆಯುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸಹ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಉಭಯ ತಂಡಗಳ ನಡುವೆ ಇಂದಿನಿಂದ ಅಂದರೆ ಡಿಸೆಂಬರ್ 26 ರಿಂದ ಪ್ರಾರಂಭವಾಗಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟಾಸ್ ಸೋತ ಪಾಕಿಸ್ತಾನ ಮೊದಲ ಇನ್ನಿಂಗ್ಸ್ ಆರಂಭಿಸಿದ್ದು ಇದುವರೆಗೆ ಉಭಯ ತಂಡಗಳಿಂದ ಸಮಬಲದ ಹೋರಾಟ ಕಂಡುಬಂದಿದೆ. ಇದೇ ವೇಳೆ ಆಫ್ರಿಕಾ ಪರ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುತ್ತಿರುವ ವೇಗದ ಬೌಲರ್ ಕಾರ್ಬಿನ್ ಬಾಷ್ ತಮ್ಮ ವೃತ್ತಿಜೀವನದ ಮೊದಲ ಎಸೆತದಲ್ಲೇ ವಿಕೆಟ್ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಪಾಕಿಸ್ತಾನಕ್ಕೆ ಉತ್ತಮ ಆರಂಭ

ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವೆ ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಟೆಸ್ಟ್​ನಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಪಾಕಿಸ್ತಾನ ತಂಡಕ್ಕೆ ಆರಂಭಿಕರಿಬ್ಬರು ಉತ್ತಮ ಆರಂಭ ಒದಗಿಸಿಕೊಟ್ಟರು. ಹೀಗಾಗಿ ವಿಕೆಟ್​ಗಾಗಿ ಹಾತೊರೆಯುತ್ತಿದ್ದ ಆಫ್ರಿಕಾ ನಾಯಕ ಟೆಂಬಾ ಬವುಮಾ ತಂಡದ ಪ್ರಮುಖ ಬೌಲಿಂಗ್ ಅಸ್ತ್ರಗಳಾದ ಕಗಿಸೊ ರಬಾಡ ಮತ್ತು ಅನುಭವಿ ವೇಗಿ ಮಾರ್ಕೊ ಯಾನ್ಸನ್​ರನ್ನು ಒಬ್ಬರ ಹಿಂದೆ ಒಬ್ಬರಂತೆ ಬೌಲಿಂಗ್‌ನಲ್ಲಿ ಬಳಸಿದರೂ ಅವರಿಗೆ ವಿಕೆಟ್​ ಸಿಗಲಿಲ್ಲ.

ಮೊದಲ ಎಸೆತದಲ್ಲಿಯೇ ವಿಕೆಟ್

ಹೀಗಾಗಿ ದಕ್ಷಿಣ ಆಫ್ರಿಕಾಕ್ಕೆ ಪಂದ್ಯದ ಮೊದಲ ಗಂಟೆಯಲ್ಲಿ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ೀ ವೇಳೆ ಬೌಲಿಂಗ್‌ನಲ್ಲಿ ಬದಲಾವಣೆ ಮಾಡಿದ ಬವುಮಾ ವೇಗಿ ಡ್ಯಾನ್ ಪ್ಯಾಟರ್ಸನ್ ಅವರನ್ನು ಕಣಕ್ಕಿಳಿಸಿದರು. ಆದರೂ ತಂಡಕ್ಕೆ ವಿಕೆಟ್ ಸಿಗಲಿಲ್ಲ. ನಂತರ 15 ನೇ ಓವರ್‌ನಲ್ಲಿ ಮತ್ತೊಮ್ಮೆ ಬೌಲಿಂಗ್‌ನಲ್ಲಿ ಬದಲಾವಣೆ ಮಾಡಿದ ಬವುಮಾ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ವೇಗಿ ಕಾರ್ಬಿನ್ ಬಾಷ್ ಅವರನ್ನು ದಾಳಿಗಿಳಿಸಿದರು. ನಾಯಕನ ಆಣತಿಯಂತೆ ದಾಳಿಗಿಳಿದ ಕಾರ್ಬಿನ್ ಬಾಷ್ ತಾವು ಬೌಲ್ ಮಾಡಿದ ಮೊದಲ ಎಸೆತದಲ್ಲಿಯೇ ಪಾಕ್ ನಾಯಕ ಮಸೂದ್ ವಿಕೆಟ್ ಪಡೆಯುವ ಮೂಲಕ ತಂಡಕ್ಕೆ ಅಮೋಘ ಯಶಸ್ಸು ತಂದುಕೊಟ್ಟರು.

ಈ ಸಾಧನೆ ಮಾಡಿದ ಮೊದಲ ವೇಗಿ

ಇದರೊಂದಿಗೆ, ಕಾರ್ಬಿನ್ ಬಾಷ್ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ತಮ್ಮ ಮೊದಲ ಎಸೆತದಲ್ಲಿ ವಿಕೆಟ್ ಪಡೆದ ದಕ್ಷಿಣ ಆಫ್ರಿಕಾದ ಐದನೇ ಬೌಲರ್ ಎನಿಸಿಕೊಂಡರು. ಅವರಿಗಿಂತ ಮೊದಲು, ಬರ್ಟ್ ವೋಗ್ಲರ್ (1906), ಡಾನ್ ಪೀಟ್ (2014), ಹಾರ್ಡಸ್ ವಿಲ್ಹೌನ್ (2016) ಮತ್ತು ತ್ಶೆಪೊ ಮೊರೆಕಿ (2024) ಅವರು ಚೊಚ್ಚಲ ಟೆಸ್ಟ್‌ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಪಡೆದಿದ್ದರು. ಆದರೆ ಬಾಷ್ ಅವರ ಚೊಚ್ಚಲ ವಿಕೆಟ್ ಸಾಧನೆ ಐತಿಹಾಸಿಕವಾಗಿದ್ದು, ದಕ್ಷಿಣ ಆಫ್ರಿಕಾದ 135 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ವೇಗಿಯೊಬ್ಬ ತಾನು ಬೌಲ್ ಮಾಡಿದ ಮೊದಲ ಎಸೆತದಲ್ಲೇ ವಿಕೆಟ್ ಪಡೆದಿರುವುದು ಇದೇ ಮೊದಲು. ಹೀಗಾಗಿ ಬಾಷ್ ದಕ್ಷಿಣ ಆಫ್ರಿಕಾ ತಂಡದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಇದಾದ ಬಳಿಕವೂ ತಮ್ಮ ವಿಕೆಟ್ ಬೇಟೆ ಮುಂದುವರೆಸಿರುವ ಬಾಷ್, ಸೌದ್ ಶಕೀಲ್ ಅವರ ವಿಕೆಟ್ ಕೂಡ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್