ಈ ವಾರ 6 ತಂಡಗಳ ನಡುವೆ ಟೆಸ್ಟ್ ಫೈಟ್
WTC 2025: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2025ರ ಫೈನಲ್ ಪಂದ್ಯವು ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ ನಡೆಯಲಿದೆ. ಈ ಪಂದ್ಯಕ್ಕೆ ಇಂಗ್ಲೆಂಡ್ನ ಲಾರ್ಡ್ಸ್ ಮೈದಾನ ಆತಿಥ್ಯವಹಿಸಲಿದ್ದು, ಇದೀಗ ಫೈನಲ್ನಲ್ಲಿ ಸ್ಥಾನ ಪಡೆಯಲು 5 ತಂಡಗಳ ನಡುವೆ ನೇರ ಪೈಪೋಟಿ ಇದೆ.
2025ರ ವರ್ಷಾಂತ್ಯದ ವೇಳೆ ಟೆಸ್ಟ್ ಕ್ರಿಕೆಟ್ ರಂಗೇರಿದೆ. ಅದರಲ್ಲೂ ಒಂದೇ ವಾರದೊಳಗೆ ಆರು ಬಲಿಷ್ಠ ತಂಡಗಳು ಕಣಕ್ಕಿಳಿಯುತ್ತಿದೆ. ಈ ಆರು ತಂಡಗಳಲ್ಲಿ 5 ಟೀಮ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಲ್ಲಿದೆ. ಹೀಗಾಗಿಯೇ ಈ ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶವು WTC ಫೈನಲ್ನಲ್ಲಿ ಅರ್ಹತೆಗಿಟ್ಟಿಸಿಕೊಳ್ಳುವಲ್ಲಿ ನಿರ್ಣಾಯಕ.
- ಡಿಸೆಂಬರ್ 5 ರಿಂದ ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳ ನಡುವೆ 2ನೇ ಟೆಸ್ಟ್ ಪಂದ್ಯ ನಡೆಯಲಿದೆ. ಗೆಬಹಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಜಯ ಸಾಧಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ. ಅತ್ತ ಶ್ರೀಲಂಕಾ ತಂಡ ಸೋತರೆ WTC ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ.
- ಡಿಸೆಂಬರ್ 6 ರಿಂದ ವೆಲ್ಲಿಂಗ್ಟನ್ನಲ್ಲಿ ಶುರುವಾಗಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ನ್ಯೂಝಿಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಲ್ಲಿ ಉಳಿಯಬಹುದು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಈ ಪಂದ್ಯವು ಕಿವೀಸ್ ಪಾಲಿಗೆ ನಿರ್ಣಾಯಕ.
- ಡಿಸೆಂಬರ್ 6 ರಂದೇ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಡೇ-ನೈಟ್ ಟೆಸ್ಟ್ ಪಂದ್ಯ ಎಂಬುದು ವಿಶೇಷ. ಇನ್ನು ಈ ಮ್ಯಾಚ್ನಲ್ಲಿ ಗೆದ್ದರೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ ಮತ್ತಷ್ಟು ಸುಗಮವಾಗಲಿದೆ. ಅತ್ತ ಆಸ್ಟ್ರೇಲಿಯಾ ತಂಡದ WTC ಫೈನಲ್ ರೇಸ್ ಹಾದಿಯನ್ನು ಈ ಪಂದ್ಯವು ನಿರ್ಧರಿಸಲಿದೆ. ಹೀಗಾಗಿ ಶುಕ್ರವಾರದಿಂದ ಶುರುವಾಗಲಿರುವ ಪಂದ್ಯವು ಉಭಯ ತಂಡಗಳಿಗೆ ಪಾಲಿಗೆ ತುಂಬಾ ಮಹತ್ವದ ಪಂದ್ಯ.
ಈ ಮೂರು ಪಂದ್ಯಗಳ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಅದರಲ್ಲೂ ಯಾವ ತಂಡ ಫೈನಲ್ಗೆ ಪ್ರವೇಶಿಸಲಿದೆ ಎಂಬುದಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಹೀಗಾಗಿಯೇ ಟೆಸ್ಟ್ ಕ್ರಿಕೆಟ್ ಪ್ರೇಮಿಗಳು ಇದೀಗ ಈ ವಾರ ನಡೆಯಲಿರುವ ಮೂರು ಪಂದ್ಯಗಳ ಮೇಲೆ ಕಣ್ಣಿಟ್ಟಿದ್ದಾರೆ.
ಇದನ್ನೂ ಓದಿ: 15.5 ಓವರ್ಗಳಲ್ಲಿ ಕೇವಲ 5 ರನ್: ದಾಖಲೆ ಪುಟಕ್ಕೆ ಜೇಡನ್ ಸೀಲ್ಸ್ ಎಂಟ್ರಿ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಯಾವಾಗ?
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2025ರ ಫೈನಲ್ ಪಂದ್ಯವು ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ ನಡೆಯಲಿದೆ. ಈ ಪಂದ್ಯಕ್ಕೆ ಇಂಗ್ಲೆಂಡ್ನ ಲಾರ್ಡ್ಸ್ ಮೈದಾನ ಆತಿಥ್ಯವಹಿಸಲಿದ್ದು, ಇದೀಗ ಫೈನಲ್ನಲ್ಲಿ ಸ್ಥಾನ ಪಡೆಯಲು 5 ತಂಡಗಳ ನಡುವೆ ನೇರ ಪೈಪೋಟಿ ಇದೆ. ಅಂದಹಾಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್ನಲ್ಲಿ ಮುಖಾಮುಖಿಯಾಗಲಿದೆ.
Published On - 9:11 am, Tue, 3 December 24