AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಸು ಜಸ್ಟ್ ನಂಬರ್… ಅತ್ಯದ್ಭುತ ಕ್ಯಾಚ್ ಹಿಡಿದು ನಿಬ್ಬೆರಗಾಗಿಸಿದ ಫಾಫ್ ಡುಪ್ಲೆಸಿಸ್

Sunrisers Eastern Cape vs Joburg Super Kings: ಸೌತ್ ಆಫ್ರಿಕಾ ಟಿ20 ಲೀಗ್​ನ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 184 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಜೋಬರ್ಗ್ ಸೂಪರ್ ಕಿಂಗ್ಸ್ 152 ರನ್​ಗಳಿಸಲಷ್ಟೇ ಶಕ್ತವಾಗಿದೆ. ಈ ಮೂಲಕ ಸನ್​ರೈಸರ್ಸ್ ಈಸ್ಟರ್ನ್ ಕೇಪ್ 32 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಹಿಡಿದ ಕ್ಯಾಚ್ ವಿಡಿಯೋ ಇದೀಗ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ವಯಸ್ಸು ಜಸ್ಟ್ ನಂಬರ್... ಅತ್ಯದ್ಭುತ ಕ್ಯಾಚ್ ಹಿಡಿದು ನಿಬ್ಬೆರಗಾಗಿಸಿದ ಫಾಫ್ ಡುಪ್ಲೆಸಿಸ್
Faf Du Plessis Catch
ಝಾಹಿರ್ ಯೂಸುಫ್
|

Updated on: Feb 06, 2025 | 9:31 AM

Share

ಫಾಫ್ ಡುಪ್ಲೆಸಿಸ್ ವಯಸ್ಸು 40 ವರ್ಷ. ವಯಸ್ಸಿನ ಕಾರಣದಿಂದಲೇ ಈ ಬಾರಿಯ ಐಪಿಎಲ್​​ ಹರಾಜಿಗೂ ಮುನ್ನ ಡುಪ್ಲೆಸಿಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬಿಡುಗಡೆ ಮಾಡಿತ್ತು. ಇನ್ನು ಇದೇ ವಯಸ್ಸಿನ ಕಾರಣ ಫಾಫ್ ಖರೀದಿಗೆ ಯಾವುದೇ ಫ್ರಾಂಚೈಸಿ ಹೆಚ್ಚಿನ ಆಸಕ್ತಿ ತೋರಲಿಲ್ಲ. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು 2 ಕೋಟಿ ರೂ. ಮೂಲ ಬೆಲೆಗೆ ಡುಪ್ಲೆಸಿಸ್ ಅವರನ್ನು ಖರೀದಿಸಿದ್ದರು.

ಇದೀಗ ಅದೇ 40 ವರ್ಷದ ಫಾಫ್ ಡುಪ್ಲೆಸಿಸ್ ಯುವಕರೇ ನಾಚುವಂತೆ ಫೀಲ್ಡಿಂಗ್ ಮಾಡಿ ತೋರಿಸಿದ್ದಾರೆ. ಅಷ್ಟೇ ಅಲ್ಲದೆ ಅದ್ಭುತ ಫ್ಲೇಯಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ.

ಸೆಂಚುರಿಯನ್​ನ ಸ್ಪೋರ್ಟ್​ಪಾರ್ಕ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್​ನ ಎಲಿಮಿನೇಟರ್ ಪಂದ್ಯದಲ್ಲಿ ಫಾಫ್ ಅತ್ಯದ್ಭುತ ಕ್ಯಾಚ್ ಹಿಡಿದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್​ ಕೇಪ್​ ತಂಡಕ್ಕೆ ಡೇವಿಡ್ ಬೆಡಿಂಗ್ಹ್ಯಾಮ್ (27) ಉತ್ತಮ ಆರಂಭ ಒದಗಿಸಿದ್ದರು. ಆದರೆ ಇಮ್ರಾನ್ ತಾಹಿರ್ ಎಸೆದ 5ನೇ ಓವರ್​ನ ಮೊದಲ ಎಸೆತದಲ್ಲಿ ಬೆಡಿಂಗ್ಹ್ಯಾಮ್ ಮಿಡ್-ಆಫ್‌ನತ್ತ ಬಾರಿಸಿದ್ದರು.

ಚೆಂಡು ಇನ್ನೇನು ಥರ್ಟಿ ಯಾರ್ಡ್ ಸರ್ಕಲ್ ದಾಟಲಿದೆ ಅನ್ನುವಷ್ಟರಲ್ಲಿ ಅದ್ಭುತವಾಗಿ ಜಿಗಿದ ಫಾಫ್ ಡುಪ್ಲೆಸಿಸ್ ಅತ್ಯುತ್ತಮ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದರು. ಈ ಮೂಲಕ ಮತ್ತೊಮ್ಮೆ ವಯಸ್ಸು ಕೇವಲ ನಂಬರ್ ಅಷ್ಟೇ ಎಂಬುದನ್ನು ನಿರೂಪಿಸಿದರು. ಇದೀಗ ಫಾಫ್ ಡುಪ್ಲೆಸಿಸ್ ಅವರ ಈ ಅತ್ಯುತ್ತಮ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು, ಸೌತ್ ಆಫ್ರಿಕಾ ಕ್ರಿಕೆಟಿಗ ಫೀಲ್ಡಿಂಗ್​ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಫಾಫ್ ಡುಪ್ಲೆಸಿಸ್ ಕ್ಯಾಚ್ ವಿಡಿಯೋ:

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಜೋಬರ್ಗ್ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 152 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ 32 ರನ್​ಗಳ ಜಯ ಸಾಧಿಸಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್