ಫಾಫ್ ಡುಪ್ಲೆಸಿಸ್ ವಯಸ್ಸು 40 ವರ್ಷ. ವಯಸ್ಸಿನ ಕಾರಣದಿಂದಲೇ ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಡುಪ್ಲೆಸಿಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬಿಡುಗಡೆ ಮಾಡಿತ್ತು. ಇನ್ನು ಇದೇ ವಯಸ್ಸಿನ ಕಾರಣ ಫಾಫ್ ಖರೀದಿಗೆ ಯಾವುದೇ ಫ್ರಾಂಚೈಸಿ ಹೆಚ್ಚಿನ ಆಸಕ್ತಿ ತೋರಲಿಲ್ಲ. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು 2 ಕೋಟಿ ರೂ. ಮೂಲ ಬೆಲೆಗೆ ಡುಪ್ಲೆಸಿಸ್ ಅವರನ್ನು ಖರೀದಿಸಿದ್ದರು.
ಇದೀಗ ಅದೇ 40 ವರ್ಷದ ಫಾಫ್ ಡುಪ್ಲೆಸಿಸ್ ಯುವಕರೇ ನಾಚುವಂತೆ ಫೀಲ್ಡಿಂಗ್ ಮಾಡಿ ತೋರಿಸಿದ್ದಾರೆ. ಅಷ್ಟೇ ಅಲ್ಲದೆ ಅದ್ಭುತ ಫ್ಲೇಯಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ.
ಸೆಂಚುರಿಯನ್ನ ಸ್ಪೋರ್ಟ್ಪಾರ್ಕ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್ನ ಎಲಿಮಿನೇಟರ್ ಪಂದ್ಯದಲ್ಲಿ ಫಾಫ್ ಅತ್ಯದ್ಭುತ ಕ್ಯಾಚ್ ಹಿಡಿದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜೋಬರ್ಗ್ ಸೂಪರ್ ಕಿಂಗ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು.
ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಡೇವಿಡ್ ಬೆಡಿಂಗ್ಹ್ಯಾಮ್ (27) ಉತ್ತಮ ಆರಂಭ ಒದಗಿಸಿದ್ದರು. ಆದರೆ ಇಮ್ರಾನ್ ತಾಹಿರ್ ಎಸೆದ 5ನೇ ಓವರ್ನ ಮೊದಲ ಎಸೆತದಲ್ಲಿ ಬೆಡಿಂಗ್ಹ್ಯಾಮ್ ಮಿಡ್-ಆಫ್‌ನತ್ತ ಬಾರಿಸಿದ್ದರು.
ಚೆಂಡು ಇನ್ನೇನು ಥರ್ಟಿ ಯಾರ್ಡ್ ಸರ್ಕಲ್ ದಾಟಲಿದೆ ಅನ್ನುವಷ್ಟರಲ್ಲಿ ಅದ್ಭುತವಾಗಿ ಜಿಗಿದ ಫಾಫ್ ಡುಪ್ಲೆಸಿಸ್ ಅತ್ಯುತ್ತಮ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದರು. ಈ ಮೂಲಕ ಮತ್ತೊಮ್ಮೆ ವಯಸ್ಸು ಕೇವಲ ನಂಬರ್ ಅಷ್ಟೇ ಎಂಬುದನ್ನು ನಿರೂಪಿಸಿದರು. ಇದೀಗ ಫಾಫ್ ಡುಪ್ಲೆಸಿಸ್ ಅವರ ಈ ಅತ್ಯುತ್ತಮ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು, ಸೌತ್ ಆಫ್ರಿಕಾ ಕ್ರಿಕೆಟಿಗ ಫೀಲ್ಡಿಂಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
Absolutely FAF-tastic 🤯 Faf du Plessis continues to defy the laws of physics #BetwaySA20 #SECvJSK #WelcomeToIncredible pic.twitter.com/WAnGnTex5P
— Betway SA20 (@SA20_League) February 5, 2025
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಜೋಬರ್ಗ್ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 152 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡ 32 ರನ್ಗಳ ಜಯ ಸಾಧಿಸಿದೆ.