Sign In

By signing in or creating an account, you agree with Associated Broadcasting Company's Terms & Conditions and Privacy Policy.

Heinrich Klaasen: ಕ್ಲಾಸೆನ್ ಕ್ಲಾಸ್…43 ಎಸೆತಗಳಲ್ಲಿ ಸ್ಪೋಟಕ ಶತಕ

SA20: 255 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸೂಪರ್ ಜೈಂಟ್ಸ್​ ಬೌಲರ್​ಗಳು ಯಶಸ್ವಿಯಾದರು.

Heinrich Klaasen: ಕ್ಲಾಸೆನ್ ಕ್ಲಾಸ್...43 ಎಸೆತಗಳಲ್ಲಿ ಸ್ಪೋಟಕ ಶತಕ
Heinrich Klaasen
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 06, 2023 | 9:25 PM

ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಹೆನ್ರಿಕ್ ಕ್ಲಾಸೆನ್ (Heinrich Klaasen) ಕೇವಲ 43 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಪ್ರಿಟೋರಿಯಾ ಕ್ಯಾಪಿಟಲ್ಸ್ ಹಾಗೂ ಡರ್ಬನ್ ಸೂಪರ್ ಜೈಂಟ್ಸ್ ನಡುವಣ ಈ ಪಂದ್ಯದಲ್ಲಿ ಟಾಸ್ ಗೆದ್ದ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಇನಿಂಗ್ಸ್ ಆರಂಭಿಸಿದ ಸೂಪರ್ ಜೈಂಟ್ಸ್​ ತಂಡಕ್ಕೆ ನಾಯಕ ಕ್ವಿಂಟನ್ ಡಿಕಾಕ್ (43) ಹಾಗೂ ಬೆನ್ ಮೆಕ್​ಡೆರ್ಮಾಟ್ (41) ಉತ್ತಮ ಆರಂಭ ಒದಗಿಸಿದ್ದರು. ಪವರ್​ಪ್ಲೇನಲ್ಲಿ 76 ರನ್​ ಬಾರಿಸಿದ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಕೊನೆಗೂ ಜಿಮ್ಮಿ ನೀಶಮ್ ಯಶಸ್ವಿಯಾದರು. ಅದರಂತೆ ಡಿಕಾಕ್ ಮೊದಲಿಗರಾಗಿ ಹೊರನಡೆದರು.

ಈ ವೇಳೆ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್​ ಹೆನ್ರಿಕ್ ಕ್ಲಾಸೆನ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪ್ರಿಟೋರಿಯಾ ಕ್ಯಾಪಿಟಲ್ಸ್ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ಕ್ಲಾಸೆನ್ ಮೈದಾನದ ಮೂಲೆ ಮೂಲೆಗೆ ಚೆಂಡನ್ನು ತಲುಪಿಸಿದರು. ಪರಿಣಾಮ 6 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಕೇವಲ 43 ಎಸೆತಗಳಲ್ಲಿ ಶತಕ ಪೂರೈಸಿದರು.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಹೆನ್ರಿಕ್ ಕ್ಲಾಸೆನ್ (104) ಅವರ ಈ ಅಜೇಯ ಶತಕದೊಂದಿಗೆ ಡರ್ಬನ್ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 254 ರನ್​ ಕಲೆಹಾಕಿತು.

255 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸೂಪರ್ ಜೈಂಟ್ಸ್​ ಬೌಲರ್​ಗಳು ಯಶಸ್ವಿಯಾದರು. ಪರಿಣಾಮ ತಂಡದ ಮೊತ್ತ 51 ಆಗುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಇದನ್ನೂ ಓದಿ: Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?

ಮಾರಕ ದಾಳಿ ಸಂಘಟಿಸಿದ ಜೂನಿಯರ್ ಡಾಲ 3 ವಿಕೆಟ್ ಕಬಳಿಸಿ ಮಿಂಚಿದರು. ಡ್ವೈನ್ ಪ್ರಿಟೋರಿಯಸ್ ಹಾಗೂ ವಿಯಾನ್ ಮುಲ್ಡರ್ ಕರಾರುವಾಕ್ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಕ್ಯಾಪಿಟಲ್ಸ್ ಬ್ಯಾಟರ್​ಗಳು ಪರದಾಡಿದರು. ಅಂತಿಮವಾಗಿ 13.5 ಓವರ್​ಗಳಲ್ಲಿ 103 ರನ್​ಗಳಿಗೆ ಸರ್ವಪತನ ಕಾಣುವ ಮೂಲಕ ಪ್ರಿಟೋರಿಯಾ ಕ್ಯಾಪಿಟಲ್ಸ್ 151 ರನ್​ಗಳಿಂದ ಹೀನಾಯ ಸೋಲೊಪ್ಪಿಕೊಂಡಿತು.

44 ಎಸೆತಗಳಲ್ಲಿ 10 ಫೋರ್ ಹಾಗೂ 6 ಭರ್ಜರಿ ಸಿಕ್ಸ್ ಸಿಡಿಸಿ ಅಜೇಯ 104 ಬಾರಿಸಿ ಮಿಂಚಿದ್ದ ಡರ್ಬನ್ ಸೂಪರ್ ಜೈಂಟ್ಸ್ ಆಟಗಾರ ಹೆನ್ರಿಕ್ ಕ್ಲಾಸೆನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು