AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA20: ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಚಾಂಪಿಯನ್ಸ್

Sunrisers Eastern Cape: 2023 ರಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ ಮಾಲೀಕತ್ವದ ಸನ್​ರೈರ್ಸಸ್ ಈಸ್ಟರ್ನ್​ ಕೇಪ್ ತಂಡವು ಚಾಂಪಿಯನ್​​ ಪಟ್ಟ ಅಲಂಕರಿಸಿತ್ತು. ಇದೀಗ 2024 ರಲ್ಲೂ ಚಾಂಪಿಯನ್​ ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಐಡೆನ್ ಮಾರ್ಕ್ರಾಮ್ ನಾಯಕತ್ವದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಯಶಸ್ವಿಯಾಗಿದೆ.

SA20: ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಚಾಂಪಿಯನ್ಸ್
Sunrisers Eastern Cape
TV9 Web
| Edited By: |

Updated on: Feb 11, 2024 | 7:04 AM

Share

ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ (Sunrisers Eastern Cape) ಚಾಂಪಿಯನ್ಸ್​ ಆಗಿ ಹೊರಹೊಮ್ಮಿದೆ. ಕೇಪ್​ಟೌನ್​​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ವಿರುದ್ಧ 89 ರನ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಇನಿಂಗ್ಸ್ ಆರಂಭಿಸಿದ ಜೋರ್ಡನ್ ಹರ್ಮನ್ 26 ಎಸೆತಗಳಲ್ಲಿ 42 ರನ್​ ಬಾರಿಸುವ ಮೂಲಕ ಸನ್​ರೈಸರ್ಸ್​ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಮತ್ತೊಂದೆಡೆ ಡೇವಿಡ್ ಮಲಾನ್ ಕೇವಲ 6 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

ಈ ವೇಳೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಟಾಮ್ ಅಬೆಲ್ 34 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 55 ರನ್​ ಚಚ್ಚಿದ್ದರು. ಇನ್ನು ನಾಯಕ ಐಡೆನ್ ಮಾರ್ಕ್ರಾಮ್ 26 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 42 ರನ್ ಬಾರಿಸಿದರು.

ಅಂತಿಮ ಹಂತದಲ್ಲಿ ಅಬ್ಬರಿಸಿದ ಯುವ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ 30 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 56 ರನ್​ ಸಿಡಿಸಿದರು. ಈ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಕಲೆಹಾಕಿತು.

205 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಡರ್ಬನ್ ಸೂಪರ್ ಜೈಂಟ್ಸ್ ತಂಡವು ಯಾವುದೇ ಹಂತದಲ್ಲೂ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸಲಾಗಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸ್ಟಾರ್ ಆಟಗಾರ ಕ್ವಿಂಟನ್ ಡಿಕಾಕ್ 3 ರನ್ ಬಾರಿಸಿ ವಾರೊಲ್​ಗೆ ವಿಕೆಟ್​ ಒಪ್ಪಿಸಿದರೆ, ಮ್ಯಾಥ್ಯೂ ಬ್ರೀಟ್​​ಝ್ಕಿ 18 ರನ್​ಗಳಿಸಲು 27 ಎಸೆತಗಳನ್ನು ತೆಗೆದುಕೊಂಡಿದ್ದರು.

ಈ ಹಂತದಲ್ಲಿ ದಾಳಿಗಿಳಿದ ಮಾರ್ಕೊ ಯಾನ್ಸೆನ್ ಸ್ಮಟ್ಸ್ (1), ಭಾನುಕಾ ರಾಜಪಕ್ಸೆ (0) ವಿಕೆಟ್ ಪಡೆದ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಇನ್ನು ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವಲ್ಲಿ ಬಾರ್ಟ್​ಮ್ಯಾನ್ ಯಶಸ್ವಿಯಾದರು. ಕೇವಲ 65 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡ ಡರ್ಬನ್ ತಂಡವು ಆ ಬಳಿಕ ಚೇತರಿಸಿಕೊಳ್ಳಲೇ ಇಲ್ಲ.

ಅಂತಿಮವಾಗಿ 17 ಓವರ್​ಗಳಲ್ಲಿ 115 ರನ್​ಗಳಿಗೆ ಆಲೌಟ್ ಆಗುವ ಮೂಲಕ ಡರ್ಬನ್ ಸೂಪರ್ ಜೈಂಟ್ಸ್ ತಂಡವು 89 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

ಬ್ಯಾಕ್ ಟು ಬ್ಯಾಕ್ ಚಾಂಪಿಯನ್ಸ್​:

ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು ಸತತ 2ನೇ ಬಾರಿ ಚಾಂಪಿಯನ್ಸ್​ ಆಗಿರುವುದು ವಿಶೇಷ. ಅಂದರೆ 2023 ರಲ್ಲಿ ನಡೆದ ಚೊಚ್ಚಲ ಟೂರ್ನಿಯಲ್ಲೂ ಐಡೆನ್ ಮಾರ್ಕ್ರಾಮ್ ನೇತೃತ್ವದ ಸನ್​ರೈಸರ್ಸ್ ತಂಡ ಟ್ರೋಫಿ ಗೆದ್ದಿತ್ತು. ಇದೀಗ 2ನೇ ಸೀಸನ್​ನಲ್ಲೂ ಕಿರೀಟ ಮುಡಿಗೇರಿಸಿಕೊಳ್ಳುವಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ ಮಾಲೀಕತ್ವದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಯಶಸ್ವಿಯಾಗಿದೆ.

ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ಪ್ಲೇಯಿಂಗ್ 11: ಜೋರ್ಡನ್ ಹರ್ಮನ್ , ಡೇವಿಡ್ ಮಲಾನ್ , ಟಾಮ್ ಅಬೆಲ್ , ಐಡೆನ್ ಮಾರ್ಕ್ರಾಮ್ (ನಾಯಕ) ಟ್ರಿಸ್ಟನ್ ಸ್ಟಬ್ಸ್ (ವಿಕೆಟ್ ಕೀಪರ್) , ಪ್ಯಾಟ್ರಿಕ್ ಕ್ರುಗರ್ , ಮಾರ್ಕೊ ಯಾನ್ಸೆನ್ , ಲಿಯಾಮ್ ಡಾಸನ್ , ಸೈಮನ್ ಹಾರ್ಮರ್ , ಡೇನಿಯಲ್ ವೊರಲ್ , ಒಟ್ನೀಲ್ ಬಾರ್ಟ್​ಮ್ಯಾನ್.

ಇದನ್ನೂ ಓದಿ: Rohit Sharma: ಹೊಸ ತಂಡದ ಪರ ಕಣಕ್ಕಿಳಿಯುತ್ತಾರಾ ರೋಹಿತ್ ಶರ್ಮಾ?

ಡರ್ಬನ್ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11: ಮ್ಯಾಥ್ಯೂ ಬ್ರೀಟ್​​ಝ್ಕಿ , ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್) , ಜೆಜೆ ಸ್ಮಟ್ಸ್ , ಭಾನುಕಾ ರಾಜಪಕ್ಸೆ , ಹೆನ್ರಿಕ್ ಕ್ಲಾಸೆನ್ , ವಿಯಾನ್ ಮುಲ್ಡರ್ , ಡ್ವೈನ್ ಪ್ರಿಟೋರಿಯಸ್ , ಕೇಶವ್ ಮಹಾರಾಜ್ (ನಾಯಕ) , ಜೂನಿಯರ್ ಡಾಲಾ , ನವೀನ್-ಉಲ್-ಹಕ್ , ರೀಸ್ ಟೋಪ್ಲಿ.

Follow Us
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​