AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾವನ್ನು ಪ್ರಕಟಿಸಿದ ಮಾಜಿ ಕ್ರಿಕೆಟಿಗ

T20 World Cup 2021 Schedule: ಅಕ್ಟೋಬರ್‌ 17ರಿಂದ ನವೆಂಬರ್‌ 14ರವರೆಗೆ ಟಿ20 ವಿಶ್ವಕಪ್ ನಡೆಯಲಿದ್ದು, ಭಾರತವು ಸೂಪರ್ 12 ರ ಗ್ರೂಪ್ 2 ರಲ್ಲಿ ಸ್ಥಾನ ಪಡೆದಿದೆ.

T20 World Cup 2021: ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾವನ್ನು ಪ್ರಕಟಿಸಿದ ಮಾಜಿ ಕ್ರಿಕೆಟಿಗ
Team India
TV9 Web
| Updated By: ಝಾಹಿರ್ ಯೂಸುಫ್|

Updated on: Aug 01, 2021 | 5:40 PM

Share

ಟಿ20 ವಿಶ್ವಕಪ್ 2021 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಯುಎಇ ನಡೆಯಲಿರುವ ಐಪಿಎಲ್ 2021 ರ ದ್ವಿತಿಯಾರ್ಧದ ಬೆನ್ನಲ್ಲೇ, ವಿಶ್ವ ಚುಟುಕು ಕ್ರಿಕೆಟ್ ಕದನ ಶುರುವಾಗಲಿದೆ. ತಟಸ್ಥ ಮೈದಾನದಲ್ಲಿ ಈ ಬಾರಿ ವಿಶ್ವ ನಡೆಯುತ್ತಿರುವುದರಿಂದ ಯಾರು ಕಪ್ ಗೆಲ್ಲಲಿದ್ದಾರೆ ಎಂದು ಊಹಿಸುವುದು ತುಸು ಕಷ್ಟ. ಅದರಲ್ಲೂ ಪ್ರತಿ ತಂಡಗಳು ಯುಎಇ ವಾತಾವರಣಕ್ಕೆ ಹೊಂದಿಕೊಳ್ಳಬೇಕಾಗುತ್ತದೆ. ಅದಕ್ಕಾಗಿಯೇ ಈಗಾಗಲೇ ಎಲ್ಲಾ ಕ್ರಿಕೆಟ್​ ಮಂಡಳಿ ಟಿ20 ವಿಶ್ವಕಪ್ ತಂಡದ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಇತ್ತ ಟೀಮ್ ಇಂಡಿಯಾ ಇಂಗ್ಲೆಂಡ್​ ವಿರುದ್ದ ಟೆಸ್ಟ್ ಸರಣಿಗೆ ಸಜ್ಜಾಗಿದ್ದು, ಇದರ ಬೆನ್ನಲ್ಲೇ ಭಾರತ ಟಿ20 ತಂಡದ ಆಯ್ಕೆ ನಡೆಯಲಿದೆ.

ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಟಿ20 ವಿಶ್ವಕಪ್ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿ ಗಮನ ಸೆಳೆದಿದ್ದರು. ಇದೀಗ ಬಿಸಿಸಿಐ ಮಾಜಿ ಸದಸ್ಯ, ಟೀಮ್ ಇಂಡಿಯಾ ಕ್ರಿಕೆಟಿಗ ಸಬಾ ಕರೀಮ್ ಚುಟುಕು ಕ್ರಿಕೆಟ್​ ಕದನಕ್ಕೆ ಆಯ್ಕೆಯಾಗುವ 15ರ ಬಳಗವನ್ನು ಪ್ರಕಟಿಸಿದ್ದಾರೆ. ಈ ಪಟ್ಟಿಯಿಂದ ಮೂವರು ಪ್ರಮುಖ ಆಟಗಾರರನ್ನು ಕೈ ಬಿಟ್ಟಿರುವುದು ವಿಶೇಷ.

ಸಬಾ ಕರೀಮ್ ಅವರು ತಮ್ಮ ಆಯ್ಕೆಯ ಟಿ20 ವಿಶ್ವಕಪ್‌ ತಂಡದಲ್ಲಿ ಯುಜ್ವೇಂದ್ರ ಚಾಹಲ್, ಪೃಥ್ವಿ ಶಾ ಮತ್ತು ಮೊಹಮ್ಮದ್ ಶಮಿಗೆ ಸ್ಥಾನ ನೀಡಿಲ್ಲ. ಅದಾಗ್ಯೂ ವಾಷಿಂಗ್ಟನ್ ಸುಂದರ್ ಅವರನ್ನು ತಮ್ಮ ತಂಡದಲ್ಲಿ ಆಯ್ಕೆ ಮಾಡಿದ್ದಾರೆ. ಈ ಬಾರಿ ಯುಎಇಯಲ್ಲಿ ಟಿ20 ವಿಶ್ವಕಪ್ ಆಡಬೇಕಿದೆ. ಅಲ್ಲಿ ನಮಗೆ ಆಫ್ ಸ್ಪಿನ್ನರ್ ಅಗತ್ಯವಿದೆ. ಹಾಗಾಗಿ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ ಸಬಾ ಕರೀಮ್.

ಇನ್ನು ಶ್ರೀಲಂಕಾ ವಿರುದ್ದ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ರಾಹುಲ್ ಚಹರ್ ಅವರನ್ನೂ ಕೂಡ ಸಬಾ ಕರೀಮ್ ಆಯ್ಕೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಚಹರ್ ಹಾಗೂ ಭುವನೇಶ್ವರ್ ಕುಮಾರ್ ಯುಎಇ ಪಿಚ್​ನಲ್ಲಿ ಟ್ರಂಪ್ ಕಾರ್ಡ್ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಹಾಗಿದ್ರೆ ಸಬಾ ಕರೀಮ್ ಆಯ್ಕೆ ಮಾಡಿರುವ ಸಂಭಾವ್ಯ ಟೀಮ್ ಇಂಡಿಯಾ ಟಿ20 ವಿಶ್ವಕಪ್ ತಂಡ ಹೇಗಿದೆ ನೋಡೋಣ.

ಟೀಮ್ ಇಂಡಿಯಾ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಟಿ.ನಟರಾಜನ್, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ರಾಹುಲ್ ಚಹರ್, ದೀಪಕ್ ಚಹರ್, ಭುವನೇಶ್ವರ್ ಕುಮಾರ್

ವೀರೇಂದ್ರ ಸೆಹ್ವಾಗ್ ಅವರ ಆಯ್ಕೆ ಮಾಡಿದ ಪ್ಲೇಯಿಂಗ್ ಇಲೆವೆನ್: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್.

ಅಕ್ಟೋಬರ್‌ 17ರಿಂದ ನವೆಂಬರ್‌ 14ರವರೆಗೆ ಟಿ20 ವಿಶ್ವಕಪ್ ನಡೆಯಲಿದ್ದು, ಭಾರತವು ಸೂಪರ್ 12 ರ ಗ್ರೂಪ್ 2 ರಲ್ಲಿ ಸ್ಥಾನ ಪಡೆದಿದೆ. ಅದರಂತೆ ಟೀಮ್ ಇಂಡಿಯಾ ಪಾಕಿಸ್ತಾನ, ನ್ಯೂಜಿಲೆಂಡ್, ಅಫ್ಘಾನಿಸ್ತಾನ ಮತ್ತು ಅರ್ಹತಾ ಸುತ್ತಿನಿಂದ ಆಯ್ಕೆಯಾದ ಎರಡು ಕ್ವಾಲಿಫಯರ್​ ತಂಡಗಳನ್ನು ಎದುರಿಸಲಿದೆ. ಇನ್ನು ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾಗಳು ಗ್ರೂಪ್ 1 ರಲ್ಲಿದೆ.

ಗುಂಪು 1: ವೆಸ್ಟ್ ಇಂಡೀಸ್, ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಅರ್ಹತಾ ಸುತ್ತಿನಿಂದ ಆಯ್ಕೆಯಾದ ಗ್ರೂಪ್ ಎ ವಿನ್ನರ್ , ಗ್ರೂಪ್ ಬಿ ರನ್ನರ್ ತಂಡಗಳು.

ಗುಂಪು 2: ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಅರ್ಹತಾ ಸುತ್ತಿನಿಂದ ಆಯ್ಕೆಯಾದ ವಿನ್ನರ್ ಗ್ರೂಪ್ ಬಿ, ರನ್ನರ್ ಅಪ್ ಗ್ರೂಪ್ ಎ ತಂಡಗಳು.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

ಇದನ್ನೂ ಓದಿ: LICಯ ವಿಶೇಷ ಯೋಜನೆ: 200 ರೂ. ಹೂಡಿಕೆ ಮಾಡಿ, 28 ಲಕ್ಷ ರೂ. ಪಡೆಯಿರಿ

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..