AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ವಿಶ್ವಕಪ್ ಜಾಗತಿಕ ರಾಯಭಾರಿಯಾಗಿ ಸಚಿನ್ ತೆಂಡೂಲ್ಕರ್ ನೇಮಕ

Sachin Tendulkar: ಅಕ್ಟೋಬರ್ 5 ರಿಂದ ಅಹಮದಾಬಾದ್‌ನಲ್ಲಿ ಪ್ರಾರಂಭವಾಗುವ ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಜಾಗತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಂಗಳವಾರ ನೇಮಿಸಿದೆ.

ODI World Cup 2023: ವಿಶ್ವಕಪ್ ಜಾಗತಿಕ ರಾಯಭಾರಿಯಾಗಿ ಸಚಿನ್ ತೆಂಡೂಲ್ಕರ್ ನೇಮಕ
ಸಚಿನ್ ತೆಂಡೂಲ್ಕರ್
ಪೃಥ್ವಿಶಂಕರ
|

Updated on:Oct 04, 2023 | 7:40 AM

Share

ಅಕ್ಟೋಬರ್ 5 ರಿಂದ ಅಹಮದಾಬಾದ್‌ನಲ್ಲಿ ಪ್ರಾರಂಭವಾಗುವ ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ (ODI World Cup 2023) ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ (Sachin Tendulkar) ಅವರನ್ನು ಜಾಗತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಮಂಗಳವಾರ ನೇಮಿಸಿದೆ. ಅದರಂತೆ, ಸಚಿನ್ ತೆಂಡೂಲ್ಕರ್ ಈಗ ಐಸಿಸಿ ವಿಶ್ವಕಪ್ ಟ್ರೋಫಿಯನ್ನು ಸೆಪ್ಟೆಂಬರ್ 4 ರಂದು ಗುರುವಾರ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ (England vs New Zealand) ನಡುವಿನ ಪಂದ್ಯಕ್ಕೂ ಮುನ್ನ ಮೈದಾನಕ್ಕೆ ತರಲಿದ್ದು, ಇದರೊಂದಿಗೆ ವಿಶ್ವಕಪ್‌ಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕ್ರಿಕೆಟ್ ದೇವರು 1987ರಲ್ಲಿ ಬಾಲ್ ಬಾಯ್ ಆಗಿದ್ದಾಗಿನಿಂದ 6 ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ದೇಶವನ್ನು ಪ್ರತಿನಿಧಿಸುವವರೆಗೆ ವಿಶ್ವಕಪ್ ಯಾವಾಗಲೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಐಸಿಸಿ ವಿಶ್ವಕಪ್ 2011 ನನ್ನ ವೃತ್ತಿ ಜೀವನದಲ್ಲಿ ಮರೆಯಲಾಗದ ಅನುಭವವಾಗಿದೆ ಎಂದು ಸಚಿನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ

ಮುಂದುವರೆದು ಮಾತನಾಡಿರುವ ಸಚಿನ್, ‘ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ಗಾಗಿ ಹಲವು ತಂಡಗಳು ಸಜ್ಜಾಗುತ್ತಿವೆ. ಈ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ. ನಾನು ಐಸಿಸಿ ಏಕದಿನ ವಿಶ್ವಕಪ್‌ಗಾಗಿ ಎದುರು ನೋಡುತ್ತಿದ್ದೇನೆ. ವಿಶ್ವಕಪ್‌ನಂತಹ ದೊಡ್ಡ ಟೂರ್ನಿಯಲ್ಲಿ ಆಡುವುದರಿಂದ ಯುವ ಆಟಗಾರರಿಗೆ ಸ್ಫೂರ್ತಿ ಸಿಗುತ್ತದೆ. ಈ ವಿಶ್ವಕಪ್ ಯುವಕರಿಗೆ ಆಟವನ್ನು ಸಮೀಪಿಸಲು ಮತ್ತು ದೇಶವನ್ನು ಪ್ರತಿನಿಧಿಸಲು ಪ್ರೇರೇಪಿಸುತ್ತದೆ’ ಎಂದು ಹೇಳಿದರು.

ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್

ಏತನ್ಮಧ್ಯೆ, ಸಚಿನ್ ಕ್ರಿಕೆಟ್ ಜಗತ್ತಿನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್. 19 ನೇ ವಯಸ್ಸಿನಲ್ಲಿ ತಮ್ಮ ಮೊದಲ ವಿಶ್ವಕಪ್ ಆಡಿದ ಸಚಿನ್, ಕ್ರಿಕೆಟ್‌ನಿಂದ ನಿವೃತ್ತರಾದಾಗ ಅವರ ಹೆಸರಿನಲ್ಲಿ ಅನೇಕ ವಿಶ್ವ ದಾಖಲೆಗಳನ್ನು ಹೊಂದಿದ್ದರು. ಸಚಿನ್ ತೆಂಡೂಲ್ಕರ್ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಹೊಂದಿದ್ದಾರೆ. ವಿಶ್ವಕಪ್‌ನಲ್ಲಿ 2000 ರನ್ ಗಳಿಸಿದ ಏಕೈಕ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್. ಅಲ್ಲದೆ, ಒಂದೇ ವಿಶ್ವಕಪ್‌ನಲ್ಲಿ 663 ರನ್ ಗಳಿಸಿದ ವಿಶ್ವದಾಖಲೆಯನ್ನು ಸಚಿನ್ ಹೊಂದಿದ್ದಾರೆ.

ವಿಶ್ವಕಪ್​ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:38 am, Wed, 4 October 23

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ