AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುವನೇಶ್ವರ್ ಕುಮಾರ್​ ಯಶಸ್ಸಿನ ಗುಟ್ಟು ರಟ್ಟು ಮಾಡಿದ ಸಚಿನ್!

Bhuvneshwar Kumar: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭುವನೇಶ್ವರ್ ಕುಮಾರ್ ಒಟ್ಟು 378 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ನೀಡಿರುವುದು ಕೇವಲ 501 ರನ್​ಗಳು ಮಾತ್ರ. ಅಲ್ಲದೆ 28 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಈ ಮೂಲಕ ಐಪಿಎಲ್ 2026 ರಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.

ಭುವನೇಶ್ವರ್ ಕುಮಾರ್​ ಯಶಸ್ಸಿನ ಗುಟ್ಟು ರಟ್ಟು ಮಾಡಿದ ಸಚಿನ್!
Bhuvi - SachinImage Credit source: IPL/Google
ಝಾಹಿರ್ ಯೂಸುಫ್
|

Updated on:Jun 03, 2026 | 9:47 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದರು. ಪ್ರತಿ ಪಂದ್ಯದಲ್ಲೂ ಅತ್ಯುತ್ತಮ ದಾಳಿ ಸಂಘಟಿಸಿದ್ದ ಭುವಿ ರನ್​ ನಿಯಂತ್ರಿಸುವುದರೊಂದಿಗೆ 28 ವಿಕೆಟ್​ಗಳನ್ನೂ ಸಹ ಪಡೆದಿದ್ದರು. ಭುವನೇಶ್ವರ್ ಕುಮಾರ್ ಅವರ ಈ ಭರ್ಜರಿ ಯಶಸ್ಸಿಗೆ ಕಾರಣ ವೋಬ್ಲಿ ಸೀಮ್ ಕೌಶಲ್ಯ ಎಂದಿದ್ದಾರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾತನಾಡಿರುವ ಸಚಿನ್ ತೆಂಡೂಲ್ಕರ್, “ಭುವನೇಶ್ವರ್ ಕುಮಾರ್ ಈ ಬಾರಿ ವೋಬ್ಲಿ ಸೀಮ್ ಬೌಲಿಂಗ್​ನೊಂದಿಗೆ ಅತ್ಯುತ್ತಮ ದಾಳಿ ನಡೆಸಿದ್ದಾರೆ. ಸಾಮಾನ್ಯವಾಗಿ ಸ್ವಿಂಗ್ ಮಾಡಲು ಬೌಲರ್​ಗಳು ಚೆಂಡಿನ ಸೀಮ್​ (ಚೆಂಡಿನ ಸ್ಟಿಚ್) ಮೇಲೆ ಹಿಡಿತ ಹೊಂದಿರುತ್ತಾರೆ. ಇದನ್ನು ಬ್ಯಾಟರ್​ಗಳು ಸುಲಭವಾಗಿ ಗ್ರಹಿಸಿ ರನ್​ಗಳಿಸುತ್ತಾರೆ”.

“ಆದರೆ ಭುವನೇಶ್ವರ್ ಕುಮಾರ್ ಈ ಬಾರಿ ವೋಬ್ಲಿ ಸೀಮ್ ಕೌಶಲ್ಯದ ಮೂಲಕ ದಾಳಿ ಸಂಘಟಿಸಿದ್ದಾರೆ. ಅಂದರೆ ಭುವಿ ಚೆಂಡಿನ ಸೀಮ್​ ಮೇಲೆ ತುಸು ವಕ್ರವಾಗಿ ಬೆರಳನ್ನಿಟ್ಟು ಬೌಲಿಂಗ್ ಮಾಡಿದ್ದಾರೆ. ಇದರಿಂದ ಚೆಂಡು ಬಿದ್ದ ಮೇಲೆ ಎತ್ತ ಸಾಗುತ್ತದೆ ಎಂಬುದು ಗೊತ್ತಾಗುವುದಿಲ್ಲ. ಕೆಲವೊಮ್ಮೆ ಅದು ಇನ್​ ಸ್ವಿಂಗ್ ಆಗಬಹುದು, ಇಲ್ಲಾ ಔಟ್ ಸ್ವಿಂಗ್ ಆಗಬಹುದು. ಹೀಗೆ ಬರುವ ಚೆಂಡನ್ನು ಗುರುತಿಸಿ ಬ್ಯಾಟಿಂಗ್ ಮಾಡುವುದು ತುಸು ಕಷ್ಟ”.

“ಏಕೆಂದರೆ ಬಾಲ್​ ಪಿಚ್ ಆದ ನಂತರ ಬ್ಯಾಟರ್‌ಗಳಿಗೆ ತಿಳಿಯದಂತೆ ದಿಕ್ಕು ಬದಲಾಯಿಸುತ್ತದೆ. ಇಂತಹದೊಂದು ಕೌಶಲ್ಯದೊಂದಿಗೆ ಈ ಬಾರಿ ಭುವನೇಶ್ವರ್​ ಕುಮಾರ್​ಗೆ ದಾಳಿ ಸಂಘಟಿಸಿದ್ದಾರೆ. ಅಲ್ಲದೆ ಆಫ್-ಸ್ಟಂಪ್ ಲೈನ್‌ಗೆ ಸತತವಾಗಿ ಬೌಲಿಂಗ್ ಮಾಡುವ ಮೂಲಕ ಬ್ಯಾಟರ್‌ಗಳನ್ನು ಕಟ್ಟಿಹಾಕಿದ್ದಾರೆ. ಇದುವೇ ಭುವನೇಶ್ವರ್ ಕುಮಾರ್ ಅವರ ಯಶಸ್ಸಿನ ಸಿಕ್ರೇಟ್” ಎಂದು ಸಚಿನ್ ತೆಂಡೂಲ್ಕರ್ ತಿಳಿಸಿದ್ದಾರೆ.

ವೋಬ್ಲಿ ಸೀಮ್ ದಾಳಿಯೊಂದಿಗೆ ಈ ಬಾರಿ ಭುವನೇಶ್ವರ್ ಕುಮಾರ್ ಪಡೆದಿರುವುದು ಬರೋಬ್ಬರಿ 28 ವಿಕೆಟ್​ಗಳು. ಹಾಗೆಯೇ 16 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 378 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ನೀಡಿರುವುದು ಕೇವಲ 501 ರನ್​ಗಳು ಮಾತ್ರ.

ಇದನ್ನೂ ಓದಿ: ವೈಭವ್ ಸೂರ್ಯವಂಶಿಗೆ 12 ಕೋಟಿ ರೂ. ಆಫರ್..!

ಅಂದರೆ ಪ್ರತಿ ಓವರ್​ನಲ್ಲಿ 7.95 ಸರಾಸರಿಯಲ್ಲಿ ಮಾತ್ರ ರನ್ ನೀಡಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಕನಿಷ್ಠ 100 ಎಸೆತಗಳನ್ನು ಎಸೆದು ಅತೀ ಕಡಿಮೆ ಸರಾಸರಿಯಲ್ಲಿ ರನ್ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ 28 ವಿಕೆಟ್​ಗಳೊಂದಿಗೆ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

Published On - 11:18 am, Tue, 2 June 26

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ