Shane Warne Demise: ಶೇನ್ ವಾರ್ನ್ ನಿಧನಕ್ಕೆ ಭಾವನಾತ್ಮಕ ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಸಚಿನ್ ತೆಂಡೂಲ್ಕರ್

Shane Warne Demise: ಶೇನ್ ವಾರ್ನ್ ನಿಧನಕ್ಕೆ ಭಾವನಾತ್ಮಕ ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಸಚಿನ್ ತೆಂಡೂಲ್ಕರ್
ಸಚಿನ್, ವಾರ್ನ್​

Shane Warne Demise: ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ಭಾರತೀಯರಿಗೆ ನಿಮ್ಮ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಹಾಗೆಯೇ ಭಾರತೀಯರ ಹೃದಯದಲ್ಲೂ ನೀವು ವಿಶೇಷ ಸ್ಥಾನ ಗಳಿಸಿದ್ದೀರಿ.

TV9kannada Web Team

| Edited By: pruthvi Shankar

Mar 04, 2022 | 9:50 PM

ಶೇನ್ ವಾರ್ನ್ (Shane Warne) ಸಾವಿನ ಬಗ್ಗೆ ಸಚಿನ್ ತೆಂಡೂಲ್ಕರ್ (Sachin Tendulkar) ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾದ ಸ್ಪಿನ್ನರ್ ಸಾವಿನ ಬಗ್ಗೆ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸಚಿನ್ ಮತ್ತು ಶೇನ್ ವಾರ್ನ್ ಅವರ ವೃತ್ತಿಜೀವನವು ಮೂರು ವರ್ಷಗಳ ಅಂತರದಲ್ಲಿ ಪ್ರಾರಂಭವಾಯಿತು. ಆದರೆ ಇಬ್ಬರ ನಡುವೆ ಉತ್ತಮ ಬಾಂದವ್ಯವೂ ಇತ್ತು. ಇಬ್ಬರು ತಮ್ಮ ವೃತ್ತಿ ಬದುಕಿನ ಉಚ್ಚ ಸ್ಥಾನದಲ್ಲಿದ್ದಾಗ ಪರಸ್ಪರ ಜಿದ್ದಿಗೆ ಬಿದ್ದವರಂತೆ ಉತ್ತಮ ಪ್ರದರ್ಶ ನೀಡುತ್ತಿದ್ದರು. ಆದರೆ ಸಚಿನ್ ತೆಂಡೂಲ್ಕರ್, ಶೇನ್ ವಾರ್ನ್​ ವಿರುದ್ಧ ಹೆಚ್ಚಿನ ಮೇಲುಗೈ ಸಾಧಿಸಿದ್ದರು. ಕ್ರೀಡಾಂಗಣದಲ್ಲಿ ಈ ಇಬ್ಬರ ಜಿದ್ದಾಜಿದ್ದಿನ ಹೋರಾಟವನ್ನು ನೋಡುವುದೇ ಅಭಿಮಾನಿಗಳಿಗೆ ಹಬ್ಬವಾಗಿತ್ತು.

ಶ್ರೇಷ್ಠ ಸ್ಪಿನ್ನರ್‌ಗಳಲ್ಲಿ ಒಬ್ಬರಾದ ಶೇನ್ ವಾರ್ನ್ ಅವರ ನಿಧನದ ಬಗ್ಗೆ ಸಚಿನ್ ತೆಂಡೂಲ್ಕರ್​ ಟ್ವೀಟರ್​ನಲ್ಲಿ ಸಂತಾಪ ಸೂಚಿಸಿದ್ದಾರೆ. ಇದರಲ್ಲಿ, ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ಭಾರತೀಯರಿಗೆ ನಿಮ್ಮ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಹಾಗೆಯೇ ಭಾರತೀಯರ ಹೃದಯದಲ್ಲೂ ನೀವು ವಿಶೇಷ ಸ್ಥಾನ ಗಳಿಸಿದ್ದೀರಿ. ನೀವಿದ್ದ ಜಾಗದಲ್ಲಿ ಹರುಷಕ್ಕೆ ಕೊರತೆ ಇರುತ್ತಿರಲಿಲ್ಲ. ನಿಮ್ಮ ಸಾವು ತುಂಬಾ ದುಃಖ ತಂದಿದೆ. ವಿಲ್ ಮಿಸ್ ಯು ವಾರ್ನಿ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಮೈದಾನದಲ್ಲಿ ನಮ್ಮ ಸ್ಪರ್ಧೆ ಮತ್ತು ಮೈದಾನದ ಹೊರಗೆ ನಮ್ಮ ಹಾಸ್ಯಮಯ ಕ್ಷಣಗಳನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ ಎಂದಿದ್ದಾರೆ.

ವಾರ್ನ್ ವೃತ್ತಿಜೀವನ ಹೀಗಿತ್ತು 2007 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಶೇನ್ ವಾರ್ನ್ ಅವರು ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ. 145 ಟೆಸ್ಟ್ ಪಂದ್ಯಗಳನ್ನು ಆಡಿದ್ದ ಶೇನ್ ವಾರ್ನ್ ವೃತ್ತಿ ಬದುಕು 1992 ರಲ್ಲಿ ಭಾರತದ ವಿರುದ್ಧ ಚೊಚ್ಚಲ ಪಂದ್ಯದಿಂದ ಆರಂಭವಾಗಿತ್ತು. ವಾರ್ನ್​ ಟೆಸ್ಟ್ ವೃತ್ತಿ ಬದುಕಿನಲ್ಲಿ ಒಟ್ಟಾರೆ 708 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಹಾಗೆಯೇ 194 ODI ಪಂದ್ಯಗಳಲ್ಲಿ 293 ವಿಕೆಟ್ ಪಡೆದು ಮಿಂಚಿದ್ದರು.

ಇದನ್ನೂ ಓದಿ:Shane Warne Passes Away: ಶ್ರೇಷ್ಠ ಸ್ಪಿನ್ನರ್‌ಗೆ ಶ್ರದ್ಧಾಂಜಲಿ; ಶೇನ್ ವಾರ್ನ್ ನಿಧನಕ್ಕೆ ಕಂಬನಿ ಮಿಡಿದ ಕ್ರಿಕೆಟ್ ಜಗತ್ತು

Follow us on

Related Stories

Most Read Stories

Click on your DTH Provider to Add TV9 Kannada