ಟೀಮ್ ಇಂಡಿಯಾ ಜೊತೆ ಸಚಿನ್, ಧೋನಿ ಕೈ ಜೋಡಿಸಲಿ: ಗಿಲ್​ಕ್ರಿಸ್ಟ್​

ಏಕದಿನ ವಿಶ್ವಕಪ್​ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಹತ್ತು ತಂಡಗಳ ನಡುವಣ ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ಭಾರತದ ಪಿಚ್​ನಲ್ಲಿ ವಿದೇಶಿ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಹೀಗಾಗಿಯೇ ಯುವ ಪಡೆಯನ್ನು ಒಳಗೊಂಡಿರುವ ಭಾರತ ತಂಡಕ್ಕೆ ಅತ್ಯುತ್ತಮ ಮಾರ್ಗದರ್ಶಕರ ಅಗತ್ಯತೆಯಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆ್ಯಡಂ ಗಿಲ್​ಕ್ರಿಸ್ಟ್ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಆ್ಯಡಂ ಗಿಲ್​ಕ್ರಿಸ್ಟ್​, ಈ ಬಾರಿಯ ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್, ಪಾಕಿಸ್ತಾನ್, ಭಾರತ […]

ಟೀಮ್ ಇಂಡಿಯಾ ಜೊತೆ ಸಚಿನ್, ಧೋನಿ ಕೈ ಜೋಡಿಸಲಿ: ಗಿಲ್​ಕ್ರಿಸ್ಟ್​
Adam Gilchrist
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 19, 2023 | 9:59 PM

ಏಕದಿನ ವಿಶ್ವಕಪ್​ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಹತ್ತು ತಂಡಗಳ ನಡುವಣ ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ಭಾರತದ ಪಿಚ್​ನಲ್ಲಿ ವಿದೇಶಿ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಹೀಗಾಗಿಯೇ ಯುವ ಪಡೆಯನ್ನು ಒಳಗೊಂಡಿರುವ ಭಾರತ ತಂಡಕ್ಕೆ ಅತ್ಯುತ್ತಮ ಮಾರ್ಗದರ್ಶಕರ ಅಗತ್ಯತೆಯಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆ್ಯಡಂ ಗಿಲ್​ಕ್ರಿಸ್ಟ್ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿದ ಆ್ಯಡಂ ಗಿಲ್​ಕ್ರಿಸ್ಟ್​, ಈ ಬಾರಿಯ ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್, ಪಾಕಿಸ್ತಾನ್, ಭಾರತ ಹಾಗೂ ಆಸ್ಟ್ರೇಲಿಯಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿವೆ. ಅದರಲ್ಲೂ ಭಾರತ ತಂಡ ಏಷ್ಯಾ ಕಪ್ 2023 ರಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಕಾರಣ ನಿರೀಕ್ಷೆಗಳು ಹೆಚ್ಚಾಗಿವೆ. ಈ ನಿರೀಕ್ಷೆಗಳೊಂದಿಗೆ ಕಣಕ್ಕಿಳಿಯುವ ಟೀಮ್ ಇಂಡಿಯಾ ಮಹೇಂದ್ರ ಸಿಂಗ್ ಧೋನಿ ಹಾಗೂ ಸಚಿನ್ ತೆಂಡೂಲ್ಕರ್ ಸಮಯ ಕಳೆಯುವುದು ಸೂಕ್ತ ಎಂದು ಗಿಲ್​ಕ್ರಿಸ್ಟ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಪ್ರಕಾರ ಟೀಮ್ ಇಂಡಿಯಾಗೆ ಎಂಎಸ್ ಧೋನಿ ಮತ್ತು ಸಚಿನ್ ತೆಂಡೂಲ್ಕರ್ ಅವರ ಅಗತ್ಯತೆಯಿದೆ. ಭಾರತದ ಈ ಇಬ್ಬರು ದಿಗ್ಗಜರು ಟೀಮ್ ಇಂಡಿಯಾ ಜೊತೆ ವಿಶ್ವಕಪ್‌ನಲ್ಲಿ ಸಮಯ ಕಳೆಯಬೇಕು. ಇದರಿಂದ ಅವರ ಅನುಭವಗಳನ್ನು ಹಂಚಿಕೊಳ್ಳಬಹುದು ಎಂದು ಗಿಲ್​​ಕ್ರಿಸ್ಟ್ ಹೇಳಿದ್ದಾರೆ.

ಭಾರತದ ಆಟಗಾರರಿಗೆ ಏನು ಬೇಕು ಎಂದು ನಾನು ಹೇಳಲಾರೆ. ಆದರೆ ನಾನೇನಾದರೂ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ನಲ್ಲಿ ಇದ್ದಿದ್ದರೆ, ಖಂಡಿತವಾಗಿಯೂ ಧೋನಿ ಮತ್ತು ಸಚಿನ್ ಅವರನ್ನು ತಂಡದ ಆಟಗಾರರೊಂದಿಗೆ ಸಮಯ ಕಳೆಯಲು ಕೇಳುತ್ತಿದ್ದೆ. ಇದರಿಂದ ಅವರು ತಮ್ಮ ಅನುಭವಗಳನ್ನು ಅವರೊಂದಿಗೆ ಹಂಚಿಕೊಳ್ಳಬಹುದು.

ಇವರಿಬ್ಬರೇ ಅಲ್ಲ, ಯುವರಾಜ್ ಸಿಂಗ್ ಅವರಿಗೂ ಹಾಗೆ ಮಾಡುವಂತೆ ಕೇಳಿಕೊಳ್ಳುತ್ತಿದ್ದೆ ಎಂದು ಗಿಲ್ ಕ್ರಿಸ್ಟ್ ಹೇಳಿದ್ದಾರೆ. ಯುವರಾಜ್ 2011 ರ ವಿಶ್ವಕಪ್‌ನ ಹೀರೋ ಆಗಿದ್ದಾರೆ. ಹೀಗಾಗಿ ಯುವಿ, ಸಚಿನ್ ಹಾಗೂ ಧೋನಿಯ ಅನುಭವಗಳು ಟೀಮ್ ಇಂಡಿಯಾಗೆ ಪಾಲಿಗೆ ಉಪಯುಕ್ತವಾಗಲಿದೆ ಎಂದು ಗಿಲ್​ಕ್ರಿಸ್ಟ್ ತಿಳಿಸಿದ್ದಾರೆ.

ಇದನ್ನೂ ಓದಿ: ಏಕದಿನ ವಿಶ್ವಕಪ್ ಗೆಲ್ಲಬಲ್ಲ 5 ತಂಡಗಳನ್ನು ಹೆಸರಿಸಿದ ಸುರೇಶ್ ರೈನಾ

ಇನ್ನು ಪ್ರಸ್ತುತ ತಂಡದಲ್ಲಿರುವ ವಿರಾಟ್ ಕೊಹ್ಲಿ 2011 ರ ವಿಶ್ವಕಪ್ ಆಡಿದ ಅನುಭವ ಹೊಂದಿದ್ದಾರೆ. ನಿಸ್ಸಂಶಯವಾಗಿ ಅವರ ಅನುಭವವೂ ಇಲ್ಲಿ ಪ್ರಯೋಜನಕಾರಿಯಾಗಲಿದೆ. ಹಾಗೆಯೇ ಸಚಿನ್, ಯುವಿ, ಧೋನಿಯನ್ನು ತಂಡದ ಜೊತೆ ಕೈ ಜೋಡಿಸಲು ಹೇಳಿರುವುದರಿಂದ ಅದು ಭಾರತದ ವಿಶ್ವಕಪ್ ಕನಸಿಗೆ ನೆರವಾಗಲಿದೆ ಎಂದು ಆ್ಯಡಂ ಗಿಲ್​ಕ್ರಿಸ್ಟ್ ಅಭಿಪ್ರಾಯಪಟ್ಟಿದ್ದಾರೆ.

‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ