AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ನಾಯಕ ಯಾರೆಂದು ತಿಳಿಸಿದ ಸಚಿನ್ ತೆಂಡೂಲ್ಕರ್

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಕಪಿಲ್ ದೇವ್, ಸುನಿಲ್ ಗವಾಸ್ಕರ್, ಮೊಹಮ್ಮದ್ ಅಝರುದ್ದೀನ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್ ಮತ್ತು ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಹಲವು ದಿಗ್ಗಜ ನಾಯಕರ ನೇತೃತ್ವದಲ್ಲಿ ಆಡಿದ್ದಾರೆ. ಇದೀಗ ಇವರೆಲ್ಲರ ಪೈಕಿ ತಮ್ಮ ನೆಚ್ಚಿನ ನಾಯಕ ಯಾರು ಎಂಬುದನ್ನು ಸಚಿನ್ ಬಹಿರಂಗಪಡಿಸಿದ್ದಾರೆ.

ನೆಚ್ಚಿನ ನಾಯಕ ಯಾರೆಂದು ತಿಳಿಸಿದ ಸಚಿನ್ ತೆಂಡೂಲ್ಕರ್
Sachin TendulkarImage Credit source: x.com
ಝಾಹಿರ್ ಯೂಸುಫ್
|

Updated on: Nov 04, 2026 | 8:58 AM

Share

ಕ್ರಿಕೆಟ್ ಲೋಕದ ದಂತಕಥೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇತ್ತೀಚಿಗೆ ರೆಡ್ಡಿಟ್ ‘ಆಸ್ಕ್ ಮೀ ಎನಿಥಿಂಗ್’ ಸಂವಾದದಲ್ಲಿ ತಮ್ಮ ಕ್ರಿಕೆಟ್ ಜೀವನದ ಹಲವು ರೋಚಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ನಾಯಕತ್ವದ ಅವಧಿಯಲ್ಲಿ ಎದುರಿಸಿದ ಸವಾಲುಗಳು ಹಾಗೂ ತಮ್ಮ ನೆಚ್ಚಿನ ನಾಯಕರ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ನೆಚ್ಚಿನ ನಾಯಕ ಯಾರು?

ತಮ್ಮ ಸುದೀರ್ಘ 24 ವರ್ಷಗಳ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಸಚಿನ್ ತೆಂಡೂಲ್ಕರ್ ಅವರು ಮೊಹಮ್ಮದ್ ಅಝರುದ್ದೀನ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್ ಮತ್ತು ಎಂ.ಎಸ್. ಧೋನಿ ಸೇರಿದಂತೆ ಹಲವು ದಿಗ್ಗಜರ ನಾಯಕತ್ವದಲ್ಲಿ ಆಡಿದ್ದಾರೆ.

ಆದರೆ, ಇವರಲ್ಲಿ ತಮಗೆ ಅತ್ಯಂತ ನೆಚ್ಚಿನ ನಾಯಕರು ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿನ್, ಸೌರವ್ ಗಂಗೂಲಿ ಮತ್ತು ಎಂ.ಎಸ್. ಧೋನಿ ಅವರ ಹೆಸರನ್ನು  ಹೆಸರಿಸಿದ್ದಾರೆ. “ನಾನು ಆಡಿದ ನಾಯಕರಲ್ಲಿ ಗಂಗೂಲಿ ಮತ್ತು ಧೋನಿ ನನ್ನ ಪಟ್ಟಿಯಲ್ಲಿ ಖಂಡಿತವಾಗಿಯೂ ಅಗ್ರಸ್ಥಾನದಲ್ಲಿದ್ದಾರೆ” ಎಂದು ಅವರು ಹೇಳಿಕೊಂಡಿದ್ದಾರೆ.

ಸಚಿನ್ ಬಿಚ್ಚಿಟ್ಟ ಸತ್ಯಗಳು:

1996 ರಿಂದ 2000 ರ ಅವಧಿಯಲ್ಲಿ ಸಚಿನ್ ತೆಂಡೂಲ್ಕರ್ ಎರಡು ಬಾರಿ ಭಾರತ ತಂಡದ ನಾಯಕರಾಗಿ ಜವಾಬ್ದಾರಿ ಹೊತ್ತಿದ್ದರು. ಆದರೆ, ಆ ಅವಧಿ ಅವರಿಗೆ ಅಷ್ಟಾಗಿ ಯಶಸ್ಸು ತಂದುಕೊಡಲಿಲ್ಲ. ಈ ಬಗ್ಗೆ ಮಾತನಾಡಿದ ಸಚಿನ್, ಅಂದಿನ ಕಾಲದ ಕ್ರಿಕೆಟ್ ವ್ಯವಸ್ಥೆಯ ಮೇಲಿದ್ದ ಅಸಮಾಧಾನವನ್ನು ಹೊರಹಾಕಿದ್ದಾರೆ.

ತಾವು ನಾಯಕರಾಗಿದ್ದಾಗ ತಮಗೆ ಬೇಕಾದ ಆಟಗಾರರನ್ನು ಅಥವಾ ಸೂಕ್ತ ಆಡುವ ಹನ್ನೊಂದರ ಬಳಗವನ್ನು ಆಯ್ಕೆ ಮಾಡುವ ಸಂಪೂರ್ಣ ಸ್ವಾತಂತ್ರ್ಯ ತಮಗೆ ಇರಲಿಲ್ಲ ಎಂದು ಸಚಿನ್ ಒಪ್ಪಿಕೊಂಡಿದ್ದಾರೆ. ಅಲ್ಲದೆ 1990 ರ ದಶಕದ ಕೊನೆಯ ಅವಧಿಯನ್ನು ಭಾರತೀಯ ಕ್ರಿಕೆಟ್‌ನ ಅತ್ಯಂತ ಕಷ್ಟದ ಮತ್ತು “ಕರಾಳ ಹಂತ” ಎಂದು ಅವರು ಬಣ್ಣಿಸಿದ್ದಾರೆ.

ಅಂದಿನ ದಿನಗಳಿಗೆ ಹೋಲಿಸಿದರೆ ಇಂದಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅತ್ಯಂತ ವೃತ್ತಿಪರವಾಗಿ ಕೆಲಸ ಮಾಡುತ್ತಿದೆ. ಇಂದು ನಾಯಕರು ಮತ್ತು ಆಟಗಾರರಿಗೆ ಸಿಗುತ್ತಿರುವ ಬೆಂಬಲ ಅಂದು ಇರಲಿಲ್ಲ ಎಂದು ಸಚಿನ್ ತೆಂಡೂಲ್ಕರ್ ತಿಳಿಸಿದ್ದಾರೆ.

ಸೌತ್ ಆಫ್ರಿಕಾದ ನಾಯಕನಿಗೆ ಮೆಚ್ಚುಗೆ:

ಕೇವಲ ಭಾರತೀಯ ಕ್ರಿಕೆಟ್ ಮಾತ್ರವಲ್ಲದೆ, ಪ್ರಸ್ತುತ ಜಾಗತಿಕ ಕ್ರಿಕೆಟ್‌ನಲ್ಲಿ ತಮಗೆ ಇಷ್ಟವಾದ ನಾಯಕನ ಬಗ್ಗೆಯೂ ಸಚಿನ್ ತೆಂಡೂಲ್ಕರ್ ಮಾತನಾಡಿದ್ದಾರೆ. ಸೌತ್ ಆಫ್ರಿಕಾ ಟೆಸ್ಟ್ ತಂಡದ ನಾಯಕ ತೆಂಬಾ ಬವುಮಾ ಅವರ ಹೋರಾಟದ ಗುಣವನ್ನು ಸಚಿನ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಬವುಮಾ ಅವರು ಸೌತ್ ಆಫ್ರಿಕಾ ತಂಡವನ್ನು ಮುಂಚೂಣಿಯಲ್ಲಿ ನಿಂತು ಮುನ್ನಡೆಸುತ್ತಿದ್ದಾರೆ. ಅವರ ಮುಂದಾಳತ್ವದಲ್ಲಿ ಸೌತ್ ಆಫ್ರಿಕಾ ಕ್ರಿಕೆಟ್‌ ಅತ್ಯುತ್ತಮ ಯಶಸ್ಸಿನತ್ತ ಸಾಗುತ್ತಿದೆ ಎಂದು ಸಚಿನ್ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್ ಕಿಂಗ್ಸ್​ ಡೀಲ್​ಗೆ​​ ರಾಜಸ್ಥಾನ್ ರಾಯಲ್ಸ್ ಕೊಕ್ಕೆ!

ಒಟ್ಟಾರೆಯಾಗಿ, ಸಚಿನ್ ತೆಂಡೂಲ್ಕರ್ ಅವರ ಈ ಮಾತುಗಳು ಭಾರತೀಯ ಕ್ರಿಕೆಟ್ ನಡೆದು ಬಂದ ಹಾದಿಯನ್ನು ನೆನಪಿಸುತ್ತವೆ. ತಮ್ಮ ನಾಯಕತ್ವದ ದಿನಗಳಲ್ಲಿ ಹಲವು ಸವಾಲುಗಳನ್ನು ಎದುರಿಸಿದ್ದ ಸಚಿನ್, ಗಂಗೂಲಿ ಮತ್ತು ಧೋನಿ ಅವರ ನಾಯಕತ್ವವನ್ನು ಮುಕ್ತವಾಗಿ ಶ್ಲಾಘಿಸಿದ್ದಾರೆ. ಇದರ ಜೊತೆಗೆ, ಸಔತ್ ಆಫ್ರಿಕಾದ ತೆಂಬಾ ಬವುಮಾ ಅವರ ನಾಯಕತ್ವವನ್ನೂ ಕೊಂಡಾಡಿರುವುದು ವಿಶೇಷ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್