AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟ್ರೋಫಿಗೆ ನನ್ನ ಹೆಸರಿಡಬೇಡಿ: ಸಚಿನ್ ತೆಂಡೂಲ್ಕರ್ ಮನವಿ

India tour of England, 2025: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ಈ ಸರಣಿಗೆ ಲೆಜೆಂಡ್ ಸಚಿನ್ ತೆಂಡೂಲ್ಕರ್ ಹಾಗೂ ಜೇಮ್ಸ್ ಅ್ಯಂಡರ್ಸನ್ ಅವರ ಹೆಸರನ್ನಿಡಲು ಬಿಸಿಸಿಐ-ಇಸಿಬಿ ನಿರ್ಧರಿಸಿದೆ.

IND vs ENG: ಟ್ರೋಫಿಗೆ ನನ್ನ ಹೆಸರಿಡಬೇಡಿ: ಸಚಿನ್ ತೆಂಡೂಲ್ಕರ್ ಮನವಿ
Sachin Tendulkar
ಝಾಹಿರ್ ಯೂಸುಫ್
|

Updated on: Jun 16, 2025 | 9:23 AM

Share

ಜೂನ್ 20 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಇಂಗ್ಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಗಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿದೆ. ಇತ್ತ ಬಿಸಿಸಿಐ ಹಾಗೂ ಇಸಿಬಿ ಹೊಸ ಹೆಸರಿನೊಂದಿಗೆ ಭಾರತ ಮತ್ತು ಇಂಗ್ಲೆಂಡ್ ಸರಣಿಯನ್ನು ಮುನ್ನಲೆಗೆ ತರುವ ಸಿದ್ಧತೆಯಲ್ಲಿದೆ. ಇದರ ಭಾಗವಾಗಿ ಇಂಡೊ-ಇಂಗ್ಲೆಂಡ್ ಸರಣಿಗೆ ‘ತೆಂಡುಲ್ಕರ್-ಅ್ಯಂಡರ್ಸನ್ ಟ್ರೋಫಿ’ ಎಂದು ಹೆಸರಿಡಲು ನಿರ್ಧರಿಸಲಾಗಿದೆ.

ಇದಕ್ಕೂ ಮೊದಲು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಈ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯನ್ನು ‘ಪಟೌಡಿ ಟ್ರೋಫಿ’ ಎಂದು ಕರೆಯಲಾಗುತ್ತಿತ್ತು. ಪಟೌಡಿ ಟ್ರೋಫಿಯನ್ನು ಮೊದಲ ಬಾರಿಗೆ 2007 ರಲ್ಲಿ ಆಡಲಾಯಿತು. ಭಾರತದ ಕ್ರಿಕೆಟ್​ ದಂತಕಥೆಗಳಾದ ಇಫ್ತಿಕರ್ ಅಲಿ ಖಾನ್ ಪಟೌಡಿ ಮತ್ತು ಮನ್ಸೂರ್ ಅಲಿ ಖಾನ್ ಪಟೌಡಿ ಅವರ ಗೌರವಾರ್ಥಕವಾಗಿ ಇಂಡೊ-ಇಂಗ್ಲೆಂಡ್ ಸರಣಿಯ ಟ್ರೋಫಿಗೆ ಪಟೌಡಿ ಎಂದು ನಾಮಕರಣ ಮಾಡಲಾಗಿತ್ತು.

ಸಚಿನ್ ತೆಂಡೂಲ್ಕರ್ ವಿಶೆಷ ಮನವಿ:

ಬಿಸಿಸಿಐ-ಇಸಿಬಿ ಇದೀಗ ಪಟೌಡಿ ಹೆಸರನ್ನು ತೆಗೆದು ಭಾರತ ಮತ್ತು ಇಂಗ್ಲೆಂಡ್ ಸರಣಿಗೆ ಸಚಿನ್ ತೆಂಡೂಲ್ಕರ್ ಹಾಗೂ ಜೇಮ್ಸ್ ಅ್ಯಂಡರ್ಸನ್ ಅವರ ಹೆಸರನ್ನಿಡಲು ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಲ್ಲೇ ಸಚಿನ್ ತೆಂಡೂಲ್ಕರ್ ಬಿಸಿಸಿಐಗೆ ವಿಶೇಷ ಮನವಿ ಮಾಡಿದ್ದು, ಲೆಜೆಂಡ್ ಕ್ರಿಕೆಟಿಗನ ಪರಂಪರೆಯನ್ನು ಮುಂದುವರೆಸಬೇಕೆಂದು ಆಗ್ರಹಿಸಿದ್ದಾರೆ.

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಸಚಿನ್ ತೆಂಡೂಲ್ಕರ್ ಬಿಸಿಸಿಐ ಮತ್ತು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಈ ವೇಳೆ ಭಾರತ-ಇಂಗ್ಲೆಂಡ್ ಸರಣಿಗೆ ತನ್ನ ಹೆಸರಿಡದಂತೆ ಮನವಿ ಮಾಡಿದ್ದಾರೆ. ಅಲ್ಲದೆ ಈ ಹಿಂದೆಯಿದ್ದ ಪಟೌಡಿ ಟ್ರೋಫಿ ಹೆಸರನ್ನು ಇಂಡೊ-ಇಂಗ್ಲೆಂಡ್ ಸರಣಿಯಲ್ಲಿ ಮುಂದುವರೆಸಬೇಕೆಂದು ಕೇಳಿಕೊಂಡಿದ್ದಾರೆ.

ಇತ್ತ ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿದ್ದ ಮತ್ತು ಪ್ರಸ್ತುತ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿರುವ ಜಯ್ ಶಾ ಅವರಿಗೂ ಭಾರತ  ಮತ್ತು ಇಂಗ್ಲೆಂಡ್ ಸರಣಿಯಲ್ಲಿ ಪಟೌಡಿ ಪರಂಪರೆಯನ್ನು ಮುಂದುವರೆಸಬೇಕೆಂದು ಸಚಿನ್ ತೆಂಡೂಲ್ಕರ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಜೊತೆ ಜಯ್​ ಶಾ ಚರ್ಚಿಸಿದ್ದು ಎಂದು ತಿಳಿದು ಬಂದಿದ್ದು, ಅದರಂತೆ ಇಂಡೊ-ಇಂಗ್ಲೆಂಡ್ ಸರಣಿಯಲ್ಲಿ ನೀಡಲಾಗುವ ಪ್ರಶಸ್ತಿಗೆ ಪಟೌಡಿ ಹೆಸರಿಡುವ ಸಾಧ್ಯತೆಯಿದೆ. ಅಂದರೆ ಇಲ್ಲಿ ತೆಂಡುಲ್ಕರ್-ಅ್ಯಂಡರ್ಸನ್ ಟ್ರೋಫಿ ಹೆಸರಿನೊಂದಿಗೆ ಪ್ರಶಸ್ತಿಯೊಂದಕ್ಕೆ ಪಟೌಡಿ ಹೆಸರಿಡಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಸೋಲಿನ ಸರಪಳಿ ಬ್ರೇಕ್… 3 ತಂಡಗಳಿಗೆ ಒಲಿದ ಚಾಂಪಿಯನ್ ಪಟ್ಟ

ಟ್ರೋಫಿ ಅನಾವರಣ ಮುಂದೂಡಿಕೆ:

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಹೊಸ ಟ್ರೋಫಿಯನ್ನು ಜೂನ್ 14 ರಂದು ಅನಾವರಣಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ನಂತರ ಆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಇನ್ನು ಜೂನ್ 20 ಕ್ಕೂ ಮುನ್ನ ಟ್ರೋಫಿ ಅನಾವರಣ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ.

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ