ಸಿಎಸ್​ಕೆ ಆಟಗಾರನಿಂದ ಮ್ಯಾಚ್ ಫಿಕ್ಸಿಂಗ್ ಆರೋಪ: ವಿದೇಶ ಪ್ರವಾಸಕ್ಕೆ ನಿಷೇಧ

Sachithra Senanayake Match Fixing: 2012 ಮತ್ತು 2016 ರ ನಡುವೆ ಶ್ರೀಲಂಕಾ ಕ್ರಿಕೆಟ್ ತಂಡದ ಪರ ಆಡಿದ್ದ ಆಲ್ರೌಂಡರ್ ಸಚಿತ್ರಾ ಸೇನಾನಾಯಕೆ ಮೇಲೆ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದೆ. ಹೀಗಾಗಿ ಕೊಲಂಬೊ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮೂರು ತಿಂಗಳ ಅವಧಿಗೆ ಸೇನಾನಾಯಕೆಯ ಮೇಲೆ ಪ್ರಯಾಣ ನಿಷೇಧವನ್ನು ವಿಧಿಸಿದೆ.

ಸಿಎಸ್​ಕೆ ಆಟಗಾರನಿಂದ ಮ್ಯಾಚ್ ಫಿಕ್ಸಿಂಗ್ ಆರೋಪ: ವಿದೇಶ ಪ್ರವಾಸಕ್ಕೆ ನಿಷೇಧ
MS Dhoni and Sachithra Senanayake
Follow us
Vinay Bhat
|

Updated on:Aug 15, 2023 | 8:42 AM

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ಆಟಗಾರ, ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಿದ್ದ ಸಚಿತ್ರಾ ಸೇನಾನಾಯಕೆ (Sachithra Senanayake) ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಇದೀಗ ಫಿಕ್ಸಿಂಗ್ ಆರೋಪ ಎದುರಿಸುತ್ತಿರುವ ಇವರನ್ನು ಕೊಲಂಬೊದ ಸ್ಥಳೀಯ ನ್ಯಾಯಾಲಯ ವಿದೇಶ ಪ್ರವಾಸಕ್ಕೆ ನಿಷೇಧ ಹೇರಿದೆ. 2012 ಮತ್ತು 2016 ರ ನಡುವೆ ಏಕೈಕ ಟೆಸ್ಟ್, 49 ಏಕದಿನ ಮತ್ತು 24 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದ 38 ವರ್ಷದ ಸೇನಾನಾಯಕೆ, 2020 ಲಂಕಾ ಪ್ರೀಮಿಯರ್ ಲೀಗ್‌ನ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಸಚಿತ್ರಾ ಸೇನಾನಾಯಕೆ ಅವರು ಟೆಲಿಫೋನ್ ಮೂಲಕ ಪಂದ್ಯದ ಬಗ್ಗೆ ಮ್ಯಾಚ್ ಫಿಕ್ಸಿಂಗ್ ಮಾಡಲು ಇಬ್ಬರು ಆಟಗಾರರನ್ನು ಸಂಪರ್ಕಿಸಿದ್ದರು ಎಂಬ ಆರೋಪವಿದೆ. ಹೀಗಾಗಿ ಕೊಲಂಬೊ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮೂರು ತಿಂಗಳ ಅವಧಿಗೆ ಸೇನಾನಾಯಕೆಯ ಮೇಲೆ ಪ್ರಯಾಣ ನಿಷೇಧವನ್ನು ವಿಧಿಸಲು ವಲಸೆಯ ನಿಯಂತ್ರಕ ಜನರಲ್‌ಗೆ ಆದೇಶಿಸಿದೆ.

ನ್ಯಾಯಾಲಯದ ಆದೇಶವನ್ನು ಅಟಾರ್ನಿ ಜನರಲ್ ಇಲಾಖೆ ಪಡೆದುಕೊಂಡಿದೆ. ಮಾಜಿ ಆಫ್ ಸ್ಪಿನ್ನರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಕ್ರೀಡಾ ಸಚಿವಾಲಯದ ವಿಶೇಷ ತನಿಖಾ ಘಟಕವು ಅಟಾರ್ನಿ ಜನರಲ್ ಇಲಾಖೆಗೆ ಸೂಚನೆ ನೀಡಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಇದನ್ನೂ ಓದಿ
Image
ಟೀಮ್ ಇಂಡಿಯಾ ಸೇರಲು ರಾಹುಲ್-ಅಯ್ಯರ್ ಹರಸಾಹಸ: ಇಂದು ನಿರ್ಧಾರವಾಗುತ್ತಾ ಇವರ ಭವಿಷ್ಯ?
Image
ಇಂಗ್ಲೆಂಡ್ ತಂಡಕ್ಕೆ ‘ಬೆನ್​’ಬಲ: ನಿವೃತ್ತಿ ಹಿಂಪಡೆದ ಸ್ಟೋಕ್ಸ್​..!
Image
400 ಕೋಟಿ ರೂ. ವೆಚ್ಚದಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ
Image
ಸೌತ್ ಆಫ್ರಿಕಾ ಏಕದಿನ ತಂಡ ಪ್ರಕಟ: ಯುವ ಸ್ಪೋಟಕ ದಾಂಡಿಗ ಎಂಟ್ರಿ

Suryakumar Yadav: 50 ಇನಿಂಗ್ಸ್​ ಬಳಿಕ ಟಾಪ್-5 ಗೆ ಸೂರ್ಯನ ಎಂಟ್ರಿ..!

ಎಲ್ಲಾ ಮೂರು ಸ್ವರೂಪಗಳಲ್ಲಿ ಶ್ರೀಲಂಕಾ ತಂಡವನ್ನು ಪ್ರತಿನಿಧಿಸುವ ಸಚಿತ್ರಾ ಸೇನಾನಾಯಕೆ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ಮೂಲಕವೂ ತಂಡಕ್ಕೆ ಕೊಡುಗೆ ನೀಡಿದ್ದಾರೆ. ಅವರು 2014 ಐಸಿಸಿ ಟ್ವೆಂಟಿ 20 ವಿಶ್ವಕಪ್ ವಿಜೇತ ತಂಡದ ಅವಿಭಾಜ್ಯ ಅಂಗವಾಗಿದ್ದರು. ಶ್ರೀಲಂಕಾದ 150 ನೇ ಏಕದಿನ ಕ್ಯಾಪ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಸಚಿತ್ರಾ ಅವರು ಅಜಂತಾ ಮೆಂಡಿಸ್ ಮತ್ತು ಸಿಕ್ಕುಗೆ ಪ್ರಸನ್ನ ಜೊತೆ ಪ್ರಮುಖ ಸ್ಪಿನ್ನರ್ ಆಗಿ ಕಾಣಿಸಿಕೊಂಡಿದ್ದರು.

ಸಿಎಸ್​ಕೆ ಪರ ಆಡಿದ್ದ ಸಚಿತ್ರಾ:

ಸಚಿತ್ರಾ ಸೇನಾನಾಯಕೆ 2013ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸದಸ್ಯರಾಗಿ ಕೂಡ ತಮ್ಮ ಛಾಪು ಮೂಡಿಸಿದ್ದರು. ಇವರು ಬ್ಯಾಟಿಂಗ್ ಮೂಲಕ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗದಿದ್ದರೂ ಆಫ್-ಸ್ಪಿನ್ ಬೌಲಿಂಗ್ ಮೂಲಕ ಚೆನ್ನೈ ತಂಡದ ಪರ ಮಿಂಚಿದ್ದರು. ಧೋನಿ ತಂಡದ ಪರ 8 ಪಂದ್ಯಗಳಲ್ಲಿ 9 ವಿಕೆಟ್‌ಗಳನ್ನು ಕಿತ್ತಿದ್ದರು. 26 ರನ್ ನೀಡಿ 2 ವಿಕೆಟ್ ಪಡೆದಿರುವುದು ಇವರ ಶ್ರೇಷ್ಠ ಸಾಧನೆ ಆಗಿದೆ. ಸಿಎಸ್​ಕೆ ತಂಡದಲ್ಲಿ ಇರುವಾಗ, ಕ್ರಿಕೆಟ್ ದಂತಕಥೆ ಮಹೇಂದ್ರ ಸಿಂಗ್ ಧೋನಿಯೊಂದಿಗೆ ಸೇನಾನಾಯಕೆ ಡ್ರೆಸ್ಸಿಂಗ್ ರೂಮ್ ಅನ್ನು ಹಂಚಿಕೊಂಡಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:42 am, Tue, 15 August 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ